Tag: mangaluru

DAKSHINA KANNADA LATEST NEWS

ರೋಹನ್ ಕಾರ್ಪೊರೇಶನ್‌ನ Rohan Ethosಗೆ ಎ. 19 ರಂದು ಭೂಮಿಪೂಜೆ

ಮಂಗಳೂರು: ಅತ್ಯುತ್ತಮ ಗುಣಮಟ್ಟ ಮತ್ತು ಸೇವಾ ಬದ್ಧತೆಯೊಂದಿಗೆ ಕಳೆದ 32 ವರ್ಷಗಳಿಂದ ಮಂಗಳೂರಿನ ರಿಯಲ್ ಎಸ್ಟೇಟ್ ಕ್ಷೇತ್ರದಲ್ಲಿ ತೊಡಗಿಸಿಕೊಂಡಿಸುವ ಪ್ರತಿಷ್ಠಿತ ರೋಹನ್ ಕಾರ್ಪೊರೇಶನ್ ಸಂಸ್ಥೆಯ ನೂತನ ಯೋಜನೆ ‘ರೋಹನ್ ಇಥೋಸ್’ ಇದರ ಭೂಮಿ ಪೂಜೆಯು ಏ. 19ರಂದು ಸಂಜೆ 5 ಗಂಟೆಗೆ ನಗರದ ಕಂಕನಾಡಿಯ ಫಾದರ್ ಮುಲ್ಲರ್ ಬಳಿ ನಡೆಯಲಿದೆ. ಈ ಯೋಜನೆ ವಿಶಿಷ್ಟ ಶೈಲಿಯಲ್ಲಿ ನಿರ್ಮಾಣಗೊಳ್ಳುತ್ತಿದ್ದು ಐಶಾರಾಮಿ ಹಾಗೂ ಆಧುನಿಕ ಸೌಕರ್ಯಗಳನ್ನು ಒಳಗೊಂಡಿದೆ. ಈ ಯೋಜನೆಯು 15 ಮಹಡಿಗಳನ್ನು ಹೊಂದಿದ್ದು, ಪ್ರತಿ ಮಹಡಿಯಲ್ಲಿ 1640 ರಿಂದ […]

DAKSHINA KANNADA LATEST NEWS

ಮಂಗಳೂರು: ಪಿ.ಎ ಕಾಲೇಜಿನಲ್ಲಿ ರಕ್ತದಾನ ಶಿಬಿರ

ಮಂಗಳೂರು: ಯೂತ್ ರೆಡ್ ಕ್ರಾಸ್, ಎನ್.ಎಸ್.ಎಸ್. ಮತ್ತು ಐ.ಕ್ಯೂ.ಎ.ಸಿ ಅಂಗವಾಗಿ ರೆಡ್ ಕ್ರಾಸ್ ಸೊಸೈಟಿ ಬ್ಲಡ್ ಬ್ಯಾಂಕ್ ಸರಕಾರಿ ಲೇಡಿಗೋಶನ್ ಹಾಸ್ಪಿಟಲ್, ಮಂಗಳೂರು ಇದರ ಸಹಭಾಗಿತ್ವದಲ್ಲಿ ಏ.15 ರಂದು ಪಿ.ಎ. ಪ್ರಥಮ ದರ್ಜೆ ಕಾಲೇಜಿನಲ್ಲಿ ಬ್ಲಡ್ ಡೊನೇಶನ್ ಕ್ಯಾಂಪ್ ಕಾಲೇಜಿನ ಸೆಮಿನಾರ್ ಹಾಲ್ ನಲ್ಲಿ ನಡೆಯಿತು‌. ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಯಾಗಿ ಆಗಮಿಸಿದ ದ.ಕ ಇಂಡಿಯನ್ ರೆಡ್ ಕ್ರಾಸ್ ಸೊಸೈಟಿಯ ವೈದ್ಯಕೀಯ ಅಧಿಕಾರಿಗಳಾದ  ಡಾ. ಸುಖೇಶ್ ಮಾತನಾಡಿ “ದಾನಗಳಲ್ಲಿ ಶ್ರೇಷ್ಠದಾನ ರಕ್ತದಾನ  ಆದರೂ ಅದು ಇನ್ನೊಂದು ಜೀವ ಉಳಿಸುವುದಲ್ಲದೆ […]

DAKSHINA KANNADA HOME LATEST NEWS

ಕದ್ರಿ ಮಂಜುನಾಥೇಶ್ವರ ಆಡಳಿತ ಮಂಡಳಿಯ ನೂತನ ಸದಸ್ಯರಿಗೆ ಶಾಸಕ ಐವನ್ ಡಿ’ಸೋಜಾರಿಂದ ಸನ್ಮಾನ

ಮಂಗಳೂರು: ದೇವರ ಸೇವೆ ಮಾಡುವ ಅವಕಾಶ ಪಡೆದಿರುವ ಟ್ರಸ್ಟಿಗಳು ಸಮಾಜದ ಎಲ್ಲಾ ವರ್ಗಗಳ ಸೇವೆಗಳಿಗೆ ಬದ್ದರಾಗಿದ್ದು, ಸಾಮಾಜಿಕ ಸೇವೆ ಬದ್ಧತೆಯಿಂದ ಮಾಡುವುದರ ಮೂಲಕ ಸಮಾಜದಲ್ಲಿ ಒಳ್ಳೆಯ ಕೆಲಸ ಮಾಡಲು ಶಕ್ತಿ ಬರಲಿ ಎಂದು ವಿಧಾನ ಪರಿಷತ್ ಶಾಸಕ ಐವನ್ ಡಿ’ಸೋಜಾ ಅವರು ತಮ್ಮ ಮಹಾನಗರ ಪಾಲಿಕೆ ಕಛೇರಿಯಲ್ಲಿ ಕದ್ರಿ ಮಂಜುನಾಥೇಶ್ವರ ದೇವರ ಆಡಳಿತ ಮಂಡಳಿಗೆ ನೂತನವಾಗಿ ನೇಮಕಗೊಂಡ ಸದಸ್ಯರನ್ನು ಸನ್ಮಾನಿಸಿ ಶುಭ ಹಾರೈಸಿದರು. ಇದೇ ವೇಳೆ ಮಾತನಾಡಿದ ಎಸ್.ಡಿ.ಎಂ. ಕಾಲೇಜಿನ ನಿವೃತ್ತ ಪ್ರಾಂಶುಪಾಲರಾದ ದೇವರಾಜ್ ಕೆ. ದೇವರ […]

DAKSHINA KANNADA HOME LATEST NEWS

ಎಮ್.ಸಿ.ಸಿ. ಬ್ಯಾಂಕ್ 2024–25 ವಿತ್ತೀಯ ವರ್ಷದಲ್ಲಿ 13.00 ಕೋಟಿ ಲಾಭ, ಶೀಘ್ರದಲ್ಲೇ ಬೈಂದೂರಿನಲ್ಲಿ 20ನೇ ಶಾಖೆ

ಕರ್ನಾಟಕದ ಸಹಕಾರಿ ಬ್ಯಾಂಕಿAಗ್ ಕ್ಷೇತ್ರದಲ್ಲಿ 113 ವರ್ಷಗಳ ಇತಿಹಾಸವಿರುವ ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆಯ ಹೆಮ್ಮೆಯ ಎಮ್.ಸಿ.ಸಿ ಬ್ಯಾಂಕ್ ಲಿಮಿಟೆಡ್ 31 ಮಾರ್ಚ್ 2025 ರಂದು ಮುಕ್ತಾಯಗೊಂಡ ವಿತ್ತೀಯ ವರ್ಷದಲ್ಲಿ ಒಟ್ಟು 13.00 ಕೋಟಿ ರೂಪಾಯಿ ವ್ಯವಹಾರಿಕ ಲಾಭಗಳಿಕೆಯನ್ನು ದಾಖಲಿಸಿದೆ. ಸತತವಾಗಿ ಎನ್.ಪಿ.ಎ. ಪ್ರಮಾಣವನ್ನು ಕಡಿಮೆ ಗೊಳಿಸಲು ಬ್ಯಾಂಕ್ ಶ್ರಮಿಸುತ್ತಿದ್ದು, ಪ್ರಸ್ತುತ ವರ್ಷದಲ್ಲಿ 1.30% ಎನ್.ಪಿ.ಎ. ದಾಖಲಿಸಿದೆ. ದಾಖಲೆಯ ಲಾಭ ಮತ್ತು ಕನಿಷ್ಠ ಎನ್.ಪಿ.ಎ. ಜೊತೆಗೆ, 2024–2025ನೇ ವಿತ್ತೀಯ ವರ್ಷದಲ್ಲಿ, ಬ್ಯಾಂಕಿನ ಅಧ್ಯಕ್ಷ ಅನಿಲ್ ಲೋಬೊ ನೇತೃತ್ವದ […]

DAKSHINA KANNADA HOME LATEST NEWS

ದ. ಕ. ಜಿಲ್ಲಾ ಕಾಂಗ್ರೆಸ್ ವತಿಯಿಂದ ಅಂಬೇಡ್ಕರ್ ಜಯಂತಿ ಆಚರಣೆ

  ಸಂವಿಧಾನದ ಶಿಲ್ಪಿ ಡಾ. ಬಿ.ಆರ್. ಅಂಬೇಡ್ಕರ್ ಅವರ 134ನೇ ಜನ್ಮದಿನಾಚರಣೆ ಅಂಗವಾಗಿ ಮಲ್ಲಿಕಟ್ಟೆಯ ಜಿಲ್ಲಾ ಕಾಂಗ್ರೆಸ್ ಭವನದಲ್ಲಿ ಸೋಮವಾರ ಆಯೋಜಿಸಿದ ಕಾರ್ಯಕ್ರಮದಲ್ಲಿ ಬಾಬಾ ಸಾಹೇಬರ ಭಾವಚಿತ್ರಕ್ಕೆ ಮಾಲಾರ್ಪಣೆ ಮಾಡಿ ಬಳಿಕ ಅವರು ಮಾತನಾಡುತ್ತಿದ್ದರು. ನ್ಯಾಯ ಶಾಸ್ತ್ರಜ್ಞ, ಅರ್ಥಶಾಸ್ತ್ರಜ್ಞ, ಸಮಾಜ ಸುಧಾರಕರಾಗಿದ್ದ ಅಂಬೇಡ್ಕರ್ ಅವರು ಜೀವನದ ಉದ್ದಕ್ಕೂ ಸಬಲೀಕರಣಕ್ಕೆ ಒತ್ತು ನೀಡಿದ್ದಾರೆ. ಸಾಮಾಜಿಕ ನ್ಯಾಯದಿಂದ ವಂಚಿತರಾದ ದುರ್ಬಲ ವರ್ಗದ ಜನರಿಗೆ ನ್ಯಾಯ ದೊರಕಿಸಿಕೊಡಬೇಕೆನ್ನುವ ಅಪೇಕ್ಷೆ ಮೇರೆಗೆ ಅಂಬೇಡ್ಕರ್ ಅವರು ಸಂವಿಧಾನದಲ್ಲಿ ಅನೇಕ ಅನುಕೂಲತೆಗಳನ್ನು ನೀಡಿದ್ದಾರೆ. ಅಸ್ಪೃಶ್ಯತೆ, ಅಸಮಾನತೆಯ […]

DAKSHINA KANNADA HOME LATEST NEWS

ಬಿಜೆಪಿ ಮಂ.ದಕ್ಷಿಣದ ಎಸ್ ಸಿ ಮೋರ್ಚಾ ವತಿಯಿಂದ ಅಂಬೇಡ್ಕರ್ ಜಯಂತಿ ಆಚರಣೆ

ಸಂವಿಧಾನ ಶಿಲ್ಪಿ ಡಾ.ಬಿ.ಆರ್ ಅಂಬೇಡ್ಕರ್ ರವರ 134 ನೇ ಜಯಂತಿಯ ಪ್ರಯುಕ್ತ ಬಿಜೆಪಿ ಮಂಗಳೂರು ನಗರದ ದಕ್ಷಿಣ ಮಂಡಲದ ಎಸ್ಸಿ ಮೋರ್ಚಾ ವತಿಯಿಂದ ನಗರದ ಕುದ್ಮುಲ್ ರಂಗರಾವ್ ಪುರಭವನದ ಬಳಿ ಇರುವ ಅಂಬೇಡ್ಕರ್ ಪ್ರತಿಮೆಗೆ ಪುಷ್ಪಾರ್ಚನೆ ಸಹಿತ ಗೌರವ ನಮನ ಸಲ್ಲಿಸುವ ಮೂಲಕ ಅಂಬೇಡ್ಕರ್ ಜಯಂತಿ ಆಚರಿಸಲಾಯಿತು. ಈ ವೇಳೆ ಬಿಜೆಪಿ ಜಿಲ್ಲಾಧ್ಯಕ್ಷರಾದ ಸತೀಶ್ ಕುಂಪಲ ಹಾಗೂ ಸಂಸದರಾದ ಕ್ಯಾ. ಬ್ರಿಜೇಶ್ ಚೌಟರವರು ಪ್ರಸ್ತಾವಿಕ ಮಾತುಗಳನ್ನಾಡಿ, ಎಲ್ಲರನ್ನೊಳಗೊಂಡ ಸಮಾಜದ ನಿರ್ಮಾಣಕ್ಕೆ ಮುನ್ನುಡಿ ಬರೆದ ಬಾಬಾ ಸಾಹೇಬರ ಆದರ್ಶವನ್ನು […]

DAKSHINA KANNADA HOME LATEST NEWS

ಕರಾವಳಿಯಾದ್ಯಂತ ಕ್ರೈಸ್ತರಿಂದ ‘ಗರಿಗಳ ಭಾನುವಾರ’ ಆಚರಣೆ

ಮಂಗಳೂರು: ಇಂದು ಗರಿಗಳ ಭಾನುವಾರ ಆಚರಣೆಯೊಂದಿಗೆ ಕ್ರೈಸ್ತರ ಪವಿತ್ರ ಸಪ್ತಾಹ ಭಾನುವಾರ ಆರಂಭಗೊಂಡಿದೆ. ಯೇಸು ಕ್ರಿಸ್ತರು ಬೆಥಾನಿಯಾದಿಂದ ದೇವನಗರಿ ಎಂದೇ ಹೇಳಲಾದ ಜೆರುಸಲೆಮಿಗೆ ಪ್ರವೇಶ ಮಾಡುವಾಗ ಅಲ್ಲಿನ ಜನರು ‘ಒಲಿವ್’ ಮರದ ಗರಿಗಳನ್ನು ಹಿಡಿದು ವೈಭವದಿಂದ ಸ್ವಾಗತಿಸಿ ಬರ ಮಾಡಿ ಕೊಂಡಿದ್ದರೆಂದು ಬೈಬಲ್ ಉಲ್ಲೇಖ. ಇದರ ಸಂಕೇತವಾಗಿ ಕರಾವಳಿಯ ಎಲ್ಲಾ ಚರ್ಚುಗಳಲ್ಲಿ ತೆಂಗಿನ ಗರಿಗಳನ್ನು ಹಿಡಿದು ಏ.13 (ಇಂದು) ಕ್ರೈಸ್ತರು ಭಾನುವಾರದ ಬಲಿ ಪೂಜೆಯಲ್ಲಿ ಪಾಲ್ಗೊಂಡರು. ಮಂಗಳೂರು ನಗರದ ಮಿಲಾಗ್ರಿಸ್‌ ಚರ್ಚ್‌ನಲ್ಲಿ ನಡೆದ ಮೆರವಣಿಗೆ ಯೇಸು ಕ್ರಿಸ್ತರು […]

DAKSHINA KANNADA HOME LATEST NEWS

ವಕ್ಫ್ ತಿದ್ದುಪಡಿ ಕಾಯ್ದೆ ವಿರುದ್ಧ ಮಂಗಳೂರಿನಲ್ಲಿ ಏ.29 ರಂದು ಬೃಹತ್‌ ಪ್ರತಿಭಟನೆ

ಮಂಗಳೂರು: ಕೇಂದ್ರ ಸರಕಾರದ ವಕ್ಫ್ ತಿದ್ದುಪಡಿ ಕಾಯ್ದೆಯ ವಿರುದ್ಧ ಮುಸ್ಲಿಮ್ ಸೆಂಟ್ರಲ್ ಕಮಿಟಿಯ ನೇತೃತ್ವದಲ್ಲಿ ಮಂಗಳೂರು ಹೊರವಲಯದ ಅಡ್ಯಾರ್‌ ಕಣ್ಣೂರಿನಲ್ಲಿ ಎ.29ರಂದು ಬೃಹತ್‌ ಪ್ರತಿಭಟನೆ ನಡೆಯಲಿದೆ. ಅಂದು ಸಂಜೆ 3 ಗಂಟೆಗೆ ಮಂಗಳೂರು ಹೊರವಲಯದ ಅಡ್ಯಾರ್ ಕಣ್ಣೂರಿನ ಶಾ ಗಾರ್ಡನ್‌ನಲ್ಲಿ ಪ್ರತಿಭಟನಾ ಸಮಾವೇಶ ಹಮ್ಮಿ ಕೊಳ್ಳಲಾಗಿದೆ.ಸೆಂಟ್ರಲ್ ಕಮಿಟಿಯ ಅಧ್ಯಕ್ಷ ಹಾಜಿ ಕೆ.ಎಸ್.ಮುಹಮ್ಮದ್ ಮಸೂದ್‌ರ ನೇತೃತ್ವದಲ್ಲಿ ಶನಿವಾರ ನಡೆದ ಕಾರ್ಯಕಾರಿ ಸಮಿತಿಯ ಸಭೆಯಲ್ಲಿ ಪ್ರತಿಭಟನೆ ನಡೆಸಲು ತೀರ್ಮಾನಿಸಲಾಗಿದೆ. ಈ ಪ್ರತಿಭಟನೆಯಲ್ಲಿ ದ.ಕ- ಉಡುಪಿ ಜಿಲ್ಲೆಯ ಲಕ್ಷಾಂತರ ಜನರ ಜೊತೆಗೆ […]

DAKSHINA KANNADA HOME LATEST NEWS

ಒಂದೂವರೆ ವರ್ಷದ ಮಗುವಿನ ಕೈ ಹಾಗೂ ಹೊಟ್ಟೆ ಮೇಲೆ ಚಲಿಸಿದ ಕಾರು….!

ಮಂಗಳೂರು: ಒಂದೂವರೆ ವರ್ಷದ ಮಗುವಿನ ಕೈ ಹಾಗೂ ಹೊಟ್ಟೆಯ ಮೇಲೆ ಕಾರೊಂದು ಚಲಿಸಿದ ಪರಿಣಾಮ ಗಂಭೀರ ಗಾಯಗೊಂಡ ಘಟನೆ ನಗರದ ಬಿಜೈ ಕಾಪಿಕಾಡ್‌ನಲ್ಲಿ ನಡೆದಿದೆ. ಘಟನೆ ವಿವರ ನಿಂಗಪ್ಪ ಎಂಬವರು ನಗರದ ಬಿಜೈ ಕಾಪಿಕಾಡ್‌ನ ಅಪಾರ್ಟ್‌ಮೆಂಟ್‌ನಲ್ಲಿ ಸೆಕ್ಯೂರಿಟಿ ಗಾರ್ಡ್ ಆಗಿ ಕೆಲಸ ಮಾಡಿಕೊಂಡಿದ್ದು,  ಏ.9 ರಂದು ಅಪಾರ್ಟ್ ಮೆಂಟಿನ ಮುಖ್ಯಗೇಟಿನ ಬಲ ಬದಿಯಲ್ಲಿ ಕಸ ಹೆಕ್ಕುವ ಕೆಲಸ ಮಾಡುತ್ತಿದ್ದರು. ಈ ವೇಳೆ ಜೊತೆಯಲ್ಲಿ ತನ್ನ (1 ½) ವರ್ಷದ ಮಗು ಬೇಬಿ ಪ್ರಜ್ವಲ್ ಹರಿಜನ ಎಂಬವನು ಆಚೆ […]

DAKSHINA KANNADA HOME LATEST NEWS STATE UDUPI

ಉಡುಪಿ-ಮಂಗಳೂರು ಮೆಟ್ರೊ ರೈಲು ಯೋಜನೆ ವರದಿಗೆ ಸೂಚನೆ

ಮಂಗಳೂರು: ಜಿಲ್ಲಾ ಉಸ್ತುವಾರಿ ಸಚಿವರು ಮತ್ತು ಸರ್ಕಾರದ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಸೂಚನೆಯಂತೆ ಮಂಗಳೂರು– ಉಡುಪಿ ನಡುವೆ ಮೆಟ್ರೊ ರೈಲು ಯೋಜನೆ ಅನುಷ್ಠಾನ ಸಂಬಂಧ ಕಾರ್ಯಸಾಧ್ಯತೆ ವರದಿ ನೀಡುವಂತೆ ಜಿಲ್ಲಾ ನಗರಾಭಿವೃದ್ಧಿ ಕೋಶವು ವಿವಿಧ ಇಲಾಖೆಗಳು, ಸಂಘ–ಸಂಸ್ಥೆಗಳಿಗೆ ಪತ್ರ ಬರೆದಿದೆ. ಮಂಗಳೂರು– ಉಡುಪಿ ನಡುವೆ ಮೆಟ್ರೊ ರೈಲು ಯೋಜನೆಯು ಕರಾವಳಿಯ ಆರ್ಥಿಕತೆ ಬೆಳವಣಿಗೆ, ಜನರ ಜೀವನ ಮಟ್ಟದ ಹೆಚ್ಚಿಸುವಲ್ಲಿ ನಿರ್ಣಾಯಕ ಪಾತ್ರ ವಹಿಸಲಿದೆ. ಮಂಗಳೂರು ಮತ್ತು ಉಡುಪಿ ನಗರಗಳ ನಡುವೆ ಮೆಟ್ರೊ ರೈಲು ಯೋಜನೆ ಬಗ್ಗೆ ಕಾರ್ಯಸಾಧ್ಯತಾ […]

About Us

Lorem ipsum dol consectetur adipiscing neque any adipiscing the ni consectetur the a any adipiscing.

Email Us: [email protected]

Contact: +5-784-8894-678