Tag: mangaluru

DAKSHINA KANNADA HOME LATEST NEWS

ದುಬೈನಲ್ಲಿ ಎಂಸಿಸಿ ಬ್ಯಾಂಕ್ ಎನ್ಆರ್‌ಐ ‘ಅಂತರ್ದೃಷ್ಟಿ ಮತ್ತು ಸಂವಾದ’ ಸಭೆ

ದುಬೈ: ಎಂಸಿಸಿ ಬ್ಯಾಂಕ್ ಜೂನ್ 15ರಂದು ದುಬೈಯ ಕರಾಮಾದ ವಿಜಿ ರೆಸ್ಟೋರೆಂಟ್‌ನಲ್ಲಿ ‘ಅಂತರ್ದೃಷ್ಟಿ ಮತ್ತು ಸಂವಾದ’ ಕಾರ್ಯಕ್ರಮವನ್ನು ಯಶಸ್ವಿಯಾಗಿ ಆಯೋಜಿಸಿತು. ಈ ಕಾರ್ಯಕ್ರಮವನ್ನು ದುಬೈನಲ್ಲಿ ನೆಲೆಸಿರುವ ಪ್ರಸಿದ್ಧ ಮಂಗಳೂರು ಮೂಲದ ವ್ಯಕ್ತಿ ಶ್ರೀ ಡಯಾನ್ ಡಿಸೋಜಾ ಇವರು ನಡೆಸಿದರು.ಕಾರ್ಯಕ್ರಮದಲ್ಲಿ ಮಾತನಾಡಿದ ಡಯಾನ್’ರವರು, ಪ್ರಸ್ತುತ ಬ್ಯಾಂಕಿಂಗ್ ಪರಿಸ್ಥಿತಿ ಮತ್ತು ಎಂಸಿಸಿ ಬ್ಯಾಂಕ್‌ನ ಸ್ಥಿತಿಗತಿಯ ಬಗ್ಗೆ ಪ್ರಸ್ತಾಪಿಸಿದರು. ಮಂಗಳೂರು ಮೂಲದ ಮತ್ತೊಬ್ಬ ಪ್ರಖ್ಯಾತ ಸಮುದಾಯ ನಾಯಕ ಹಾಗೂ ದಾಯ್ಜಿವರ್ಲ್ಡ್ ಮೀಡಿಯಾದ ವ್ಯವಸ್ಥಾಪಕ ನಿರ್ದೇಶಕ ವಾಲ್ಟರ್ ನಂದಳಿಕೆ, ಸಮುದಾಯವನ್ನು ಒಂದು ಗುರಿಯತ್ತ […]

DAKSHINA KANNADA HOME LATEST NEWS

ಲಂಚ ಸ್ವೀಕರಿಸುತ್ತಿದ್ದಾಗ ಲೋಕಾಯುಕ್ತ ರೇಡ್‌: ಸರ್ವೇಯರ್‌, ದಲ್ಲಾಳಿ ಬಂಧನ

ಮಂಗಳೂರು: ಜಮೀನಿನ ಸಿಂಗಲ್ ಸೈಟ್ ನಕ್ಷೆ ಹಾಗೂ ಪ್ರಾಪರ್ಟಿ ಕಾರ್ಡ್ ಮಾಡಿಸುವುದ ಕ್ಕಾಗಿ ಲಂಚ ಸ್ವೀಕರಿಸುವ ವೇಳೆ ಲೋಕಾಯುಕ್ತ ನಡೆಸಿದ ದಾಳಿಯ ವೇಳೆ ಸರ್ವೆಯರ್ ಮತ್ತು ದಲ್ಲಾಳಿಯನ್ನು ಲೋಕಾಯುಕ್ತ ಪೊಲೀಸರು ಬಂಧಿಸಿದ್ದಾರೆ. ತನ್ನ ಹಾಗೂ ತನ್ನ ತಾಯಿಯ ಹೆಸರಿನಲ್ಲಿರುವ ಕಂಕನಾಡಿ ಮತ್ತು ಬಜಾಲ್ ಗ್ರಾಮದ ಜಮೀನಿನ ಸಿಂಗಲ್ ಸೈಟ್ ನಕ್ಷೆ ಹಾಗೂ ಪ್ರಾಪರ್ಟಿ ಕಾರ್ಡ್ ಮಾಡಿಸಲು 2025ರ ಫೆಬ್ರವರಿಯಲ್ಲಿ ಮಂಗಳೂರು ಯು.ಪಿ.ಒ.ಆರ್ ಕಚೇರಿಗೆ ಅರ್ಜಿ ಸಲ್ಲಿಸಲಾಗಿತ್ತು. ಬಳಿಕ ಸರ್ವೆಯರ್ ನಂದೀಶ್ 2025ರ ಎಪ್ರಿಲ್‌ನಲ್ಲಿ ಸರ್ವೆ ನಡೆಸಿ ಲಂಚಕ್ಕೆ […]

DAKSHINA KANNADA HOME LATEST NEWS

ನೂತನ ಜಿಲ್ಲಾಧಿಕಾರಿಯಾಗಿ ದರ್ಶನ್ ಎಚ್‌ವಿ ಅಧಿಕಾರ ಸ್ವೀಕಾರ

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ನೂತನ ಜಿಲ್ಲಾಧಿಕಾರಿ ಗಳಾಗಿ ದರ್ಶನ್ ಎಚ್ ವಿ ಅವರು ಬುಧವಾರ ಸಂಜೆ ಅಧಿಕಾರ ಸ್ವೀಕರಿಸಿದರು. ಮಂಗಳೂರಿನ ನಿರ್ಗಮಿತ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್‌ ಅವರು ನೂತನ ಜಿಲ್ಲಾಧಿಕಾರಿಗೆ ಅಧಿಕಾರ ಹಸ್ತಾಂತರಿಸಿದರು.

DAKSHINA KANNADA

ದ.ಕ. ಯುವಜನತೆಯ ಪ್ರತಿಭೆ, ವೃತ್ತಿಜೀವನ, ಉದ್ಯಮಶೀಲತೆ ಉತ್ತೇಜನಕ್ಕಾಗಿ ‘ಯುವ್ವಿಕಾಸ’ ಸಂಕಲ್ಪ: ಸಂಸದ ಕ್ಯಾ. ಚೌಟ

ಸುಳ್ಯ: ದಕ್ಷಿಣ ಕನ್ನಡ ಜಿಲ್ಲೆಯ ಯುವ ಸಮುದಾಯಕ್ಕೆ ಹೊಸ ಅವಕಾಶಗಳನ್ನು ಸೃಷ್ಟಿಸುವ, ಅವರ ಯೋಚನೆ- ಕನಸುಗಳಿಗೆ ಶಕ್ತಿ ಕೊಡುವ ಹಾಗೂ ಸಾಧ್ಯತೆಗಳನ್ನು ಅನ್ವೇಷಿಸುವ ಗುರಿಯೇ ‘ಯುವ್ವಿಕಾಸ್’ ಸಂಕಲ್ಪ ಎಂದು ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ ಹೇಳಿದ್ದಾರೆ. ಸುಳ್ಯದ ತಾಲೂಕು ಪಂಚಾಯತ್‌ನಲ್ಲಿ ಇಂದು ಸಂಸದರ ಕಚೇರಿ ಹಾಗೂ ಸುಂದರ ಭಾರತ ಟ್ರಸ್ಟ್‌ನ ಸಹಯೋಗದಲ್ಲಿ ಆಯೋಜಿಸಲಾಗಿದ್ದ ’ಯುವ್ವಿಕಾಸ್ ’ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು. ದ.ಕ. ಜಿಲ್ಲೆಯ ಯುವ ಶಕ್ತಿಗಳನ್ನು ಜಾಗೃತಗೊಳಿಸುವ ಜೊತೆಗೆ ಅವರಿಗೆ ಉಜ್ವಲ ಭವಿಷ್ಯ ರೂಪಿಸುವ ಆಶಯದಡಿ […]

DAKSHINA KANNADA

ಪ್ರವಾಹ ಪೀಡಿತ ಪ್ರದೇಶದ ಶಾಶ್ವತ ಪರಿಹಾರಕ್ಕೆ ಕ್ರಮ:- ಶಾಸಕ ಕಾಮತ್

ಮಂಗಳೂರು: ಕಳೆದ ಕೆಲವು ದಿನಗಳಿಂದ ಸುರಿದ ಭಾರೀ ಮಳೆಗೆ ನಗರದ ಕೆಲವು ಪ್ರದೇಶಗಳಲ್ಲಿ ಪ್ರವಾಹ ಪರಿಸ್ಥಿತಿ ತಲೆದೋರಿ ಜನಜೀವನ ಅಸ್ತವ್ಯಸ್ತಗೊಂಡ ಹಿನ್ನಲೆಯಲ್ಲಿ ಇಂದು ಶಾಸಕ ವೇದವ್ಯಾಸ ಕಾಮತ್ ರವರು ಅಧಿಕಾರಿಗಳೊಂದಿಗೆ ಸ್ಥಳಕ್ಕೆ ಭೇಟಿ ನೀಡಿದರು. ಈ ವೇಳೆ ಎಕ್ಕೂರು, ತೋಚಿಲ ಕಟ್ಟಪುಣಿ, ರಾಷ್ಟ್ರೀಯ ಹೆದ್ದಾರಿ ಬಳಿಯ ವೈದ್ಯನಾಥ ನಗರ, ಜಪ್ಪಿನಮೊಗರುವಿನ ಗಣೇಶ ನಗರ, ರಾಜಕಾಲುವೆ ಸೇರುವ ನೇತ್ರಾವತಿ ತೀರದ ಕಡೇಕಾರು ಪ್ರದೇಶ, ಮೊದಲಾದ ಪ್ರದೇಶಗಳ, ನೆರೆ ಪರಿಸ್ಥಿತಿಗೆ ಕಾರಣ, ತುರ್ತಾಗಿ ನಡೆಯಬೇಕಿರುವ ಕಾರ್ಯ, ಭವಿಷ್ಯದಲ್ಲಿ ಪ್ರವಾಹ ಮರುಕಳಿಸದಂತೆ […]

DAKSHINA KANNADA HOME LATEST NEWS

ಎಮ್‌ಸಿಸಿ ಬ್ಯಾಂಕಿನ ವಾರ್ಷಿಕ ಪ್ರಗತಿ ಪರಿಶೀಲನೆ

ಮಂಗಳೂರು: ಕಥೋಲಿಕ್ ಕೋ ಅಪರೇಟಿವ್ (ಎಮ್.ಸಿ.ಸಿ.) ಬ್ಯಾಂಕಿನ ವಾರ್ಷಿಕ ಪ್ರಗತಿ ಪರಿಶೀಲನೆ ಹಾಗೂ ಪ್ರಶಸ್ತಿ ಪ್ರಧಾನ ಕಾರ್ಯಕ್ರಮವು ಜೂ.14 ರಂದು ಬ್ಯಾಂಕಿನ ಪಿ.ಎಫ್.ಎಕ್ಸ್. ಸಲ್ಡಾನ್ಹಾ ಮೆಮೊರಿಯಲ್ ಸಭಾಂಗಣದಲ್ಲಿ ಬ್ಯಾಂಕಿನ ಅಧ್ಯಕ್ಷ ಸಹಕಾರ ರತ್ನ ಶ್ರೀ ಅನಿಲ್ ಲೋಬೊ ಇವರ ಅಧ್ಯಕ್ಷತೆಯಲ್ಲಿ ನಡೆಯಿತು. ಕಾರ್ಯಕ್ರಮವನ್ನು ಮಂಗಳೂರು ಧರ್ಮ ಪ್ರಾಂತ್ಯದ ರೊಸಾರಿಯೊ ಕಾಥೆದ್ರಾಲ್ ಚರ್ಚಿನ ರೆಕ್ಟರ್ ಹಾಗೂ ಪ್ರಧಾನ ಧರ್ಮಗುರುಗಳಾದ ವಂದನೀಯ ವಲೇರಿಯ ಡಿಸೋಜ ಇವರು ದೀಪ ಬೆಳಗಿಸುವ ಮುಖಾಂತರ ಉದ್ಘಾಟಿಸಿದರು. ಕಾರ್ಯಕ್ರಮ ಉದ್ಘಾಟಿಸಿ ಮಾತಾನಾಡಿದ ವಂದನೀಯ ವಲೇರಿಯ ಡಿಸೋಜ […]

DAKSHINA KANNADA HOME LATEST NEWS

ಯೆಯ್ಯಾಡಿಯಲ್ಲಿ ಚೂರಿ ಇರಿತಕ್ಕೊಳಗಾದ ಯುವಕ ಸಾ*ವು

ಮಂಗಳೂರು: ಜೂನ್ 6ರಂದು ಯೆಯ್ಯಾಡಿಯಲ್ಲಿ ನಡೆದ ಚೂರಿ ಇರಿತದ ಘಟನೆಯಲ್ಲಿ ತೀವ್ರವಾಗಿ ಗಾಯಗೊಂಡಿದ್ದ ಯುವಕ ಕೌಶಿಕ್ ಎಂಬವರು ಚಿಕಿತ್ಸೆ ಫಲಕಾರಿಯಾಗದೆ ಶುಕ್ರವಾರ ಮೃತಪಟ್ಟರೆಂದು ತಿಳಿದು ಬಂದಿದೆ. ಜೂ.6ರಂದು ಯೆಯ್ಯಾಡಿಯ ಬಾರೊಂದರ ಬಳಿ ಜಗಳ ನಡೆದು ಬಿಜೈ ನಿವಾಸಿ ಬ್ರಿಜೇಶ್ ಶೆಟ್ಟಿ ಎಂಬಾತ ಕೌಶಿಕ್‌ ಗೆ ಚೂರಿ ಇರಿದಿದ್ದ. ಚೂರಿ ಇರಿತದಿಂದ ಗಂಭೀರ ಗಾಯಗೊಂಡಿದ್ದ ಕೌಶಿಕ್‌ ರನ್ನು ನಗರದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಕೌಶಿಕ್‌ ಇಂದು ಆಸ್ಪತ್ರೆಯಲ್ಲಿ ಮತಪಟ್ಟರೆಂದು ತಿಳಿದು ಬಂದಿದೆ. ಈ ದಾಳಿ […]

DAKSHINA KANNADA HOME LATEST NEWS

ಅಹಮದಾಬಾದ್‌ ವಿಮಾನ ದುರಂತ: ಮಂಗಳೂರು ಬಿಷಪ್ ದಿಗ್ಭ್ರಮೆ, ಸಂತಾಪ

ಮಂಗಳೂರು: ಗುಜರಾತಿನ ಅಹ್ಮದಾಬಾದ್ ನಲ್ಲಿ ಸಂಭವಿಸಿದ ಭೀಕರ ವಿಮಾನ ದುರಂತಕ್ಕೆ ಮಂಗಳೂರು ಧರ್ಮಪ್ರಾಂತ್ಯದ ಬಿಷಪ್ ಅತಿ ವಂದನೀಯ ಪೀಟರ್ ಪಾವ್ಲ್ ಸಲ್ಡಾನ್ಹಾ ಅವರು ದಿಗ್ಭ್ರಮೆ ವ್ಯಕ್ತಪಡಿಸಿದ್ದಾರೆ. ದುರಂತದಲ್ಲಿ ಅಪಾರ ಸಾವು ನೋವು ಸಂಭವಿಸಿದ ಬಗ್ಗೆ ಆಘಾತ ವ್ಯಕ್ತ ಪಡಿಸಿರುವ ಅವರು ಸಾವನ್ನಪ್ಪಿರುವ ಪ್ರಯಾಣಿಕರ ಕುಟುಂಬಗಳಿಗೆ ಸಾಂತ್ವನ ಹೇಳಿದ್ದಾರೆ. ಮೃತ ಪಟ್ಟವರ ಆತ್ಮಗಳಿಗೆ ದೇವರು ಚಿರ ಶಾಂತಿಯನ್ನು ಕರುಣಿಸಲಿ ಎಂದು ಪ್ರಾರ್ಥಿಸುವುದಾಗಿ ತಿಳಿಸಿದ್ದಾರೆ. ದುರಂತದಲ್ಲಿ ಗಾಯಗೊಂಡವರು ಬೇಗನೆ ಗುಣಮುಖರಾಗಲಿ ಎಂದು ಹಾರೈಸಿದ್ದಾರೆ.

DAKSHINA KANNADA HOME LATEST NEWS

ವಿಮಾನ ಅಪಘಾತ: ಮಂಗಳೂರು ಮೂಲದ ಕೋ ಪೈಲಟ್‌ ನಿಧನ

ಅಹಮದಾಬಾದ್: ಇಂದು ಮಧ್ಯಾಹ್ನ ನಡೆದ ವಿಮಾನ ಅಪಘಾತದಲ್ಲಿ ಮಂಗಳೂರು ಮೂಲದ ಸಹ ಪೈಲೆಟ್ ಕ್ಲೈವ್ ಕುಂದರ್ ಸಾವನ್ನಪ್ಪಿದ್ದಾರೆ. ಮಂಗಳೂರು ಮೂಲದ ಕ್ಲೈವ್ ಕುಂದರ್ ಮುಂಬೈನಲ್ಲಿ ವಾಸಿಸುತ್ತಿದ್ದರು. ಇದರ ಜೊತೆಗೆ ಪತನಗೊಂಡ ವಿಮಾನದಲ್ಲಿ ಗುಜರಾತ್ ಮಾಜಿ ಸಿಎಂ ವಿಜಯ್ ರೂಪಾನಿ‌ ಸಾವನ್ನಪ್ಪಿರುವುದು ಖಚಿತವಾಗಿದೆ.

DAKSHINA KANNADA HOME LATEST NEWS STATE

ಮುಂದಿನ 48 ಗಂಟೆಗಳಲ್ಲಿ ಭಾರಿ ಮಳೆಯಾಗುವ ಮುನ್ಸೂಚನೆ..!

ಬೆಂಗಳೂರು: ಕರ್ನಾಟಕದಲ್ಲಿ ಮುಂದಿನ 48 ಗಂಟೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇದ್ದು, 9 ಜಿಲ್ಲೆಗಳಿಗೆ ರೆಡ್ ಅಲರ್ಟ್​ ಘೋಷಿಸಲಾಗಿದೆ. ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಬೆಳಗಾವಿ, ಧಾರವಾಡ, ಹಾವೇರಿ, ಚಿಕ್ಕಮಗಳೂರು, ಕೊಡಗು, ಶಿವಮೊಗ್ಗ ಜಿಲ್ಲೆಗಳಿಗೆ ರೆಡ್ ಅಲರ್ಟ್ ಘೋಷಿಸಲಾಗಿದೆ.ವಿಜಯನಗರ, ಮೈಸೂರು, ಹಾಸನ, ದಾವಣಗೆರೆ, ಕೊಪ್ಪಳ, ರಾಯಚೂರು, ಗದಗ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್​ ಘೋಷಿಸಲಾಗಿದೆ. ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ಕೋಲಾರ, ಮಂಡ್ಯ, ರಾಮನಗರ, ತುಮಕೂರು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​ ಘೋಷಿಸಲಾಗಿದೆ. ಮಂಗಳವಾರ ರಾತ್ರಿ […]

About Us

Lorem ipsum dol consectetur adipiscing neque any adipiscing the ni consectetur the a any adipiscing.

Email Us: [email protected]

Contact: +5-784-8894-678