ಅಧಿಕಾರಿಗಳ ಆತ್ಮಸ್ಥೈರ್ಯ ಕುಗ್ಗಿಸಬೇಡಿ: ಭಂಡಾರಿ
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಜನರು ಸುಶಿಕ್ಷಿತರು, ಬುದ್ಧಿಜೀವಿಗಳು. ಕೆಲವೇ ಕೆಲವು ಜನರಿಂದ ಈ ಜಿಲ್ಲೆಯ ಘನತೆಗೆ ಚ್ಯುತಿ ತರುವ ಪ್ರಯತ್ನವಾಗುತ್ತಿದೆ. ಇದನ್ನು ಮಟ್ಟಹಾಕಿ ಜಿಲ್ಲೆಯಲ್ಲಿ ಕಾನೂನು ಸುವ್ಯವಸ್ಥೆಗೆ ಪ್ರಯತ್ನಪಡುವ ಅಧಿಕಾರಿಗಳ ಆತ್ಮಸ್ಥೈರ್ಯ ಕುಗ್ಗಿಸುವ ಪ್ರಯತ್ನ ಮಾಡಲಾಗುತ್ತಿದ್ದು, ಇದು ಖಂಡನೀಯ ಎಂದು ಕರ್ನಾಟಕ ಪ್ರದೇಶ ಕಾಂಗ್ರೆಸ್ ಕಾರ್ಯಾಧ್ಯಕ್ಷ, ವಿಧಾನ ಪರಿಷತ್ ಸದಸ್ಯ ಮಂಜುನಾಥ ಭಂಡಾರಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯ ಶೇ.99ಜನರಿಗೆ ಈ ಜಿಲ್ಲೆಯಲ್ಲಿ ಶಾಂತಿ, ಸೌಹಾರ್ದತೆ ಬೇಕು, ಅಭಿವೃದ್ಧಿಯಾಗಬೇಕು. ಈ ಜಿಲ್ಲೆಗೆ ಹೊಸ ಕೈಗಾರಿಕೆಗಳು […]