ಕರಿಮಣ ಸರ ಕಳವುಗೈದ ಪ್ರಕರಣ: ಆರೋಪಿ ಬಂಧನ
ಮಂಗಳೂರು: ತಾಲೂಕಿನ ಬೆಳುವಾಯಿಯಲ್ಲಿ ಮಾ.31ರಂದು ಮಹಿಳೆಯೊಬ್ಬರ ಕುತ್ತಿಗೆಯಿಂದ ಚಿನ್ನದ ಕರಿಮಣ ಸರ ಕಳವುಗೈದ ಪ್ರಕರಣದಲ್ಲಿ ಆರೋಪಿಯೊಬ್ಬನನ್ನು ಮೂಡಬಿದ್ರೆ ಪೊಲೀಸರು ಬಂಧಿಸಿದ್ದಾರೆ. ಕಾರ್ಕಳ ಕಾಂತಾವರದ ಕಂದಿಲ ನಿವಾಸಿ ಆರೋಪಿ ಪ್ರಶಾಂತ್ ಸಾಲಿಯನ್ ಯಾನೆ ಪಚ್ಚು (34) ಬಂಧಿತ ಆರೋಪಿ. ಆರೋಪಿ ಕೈಯಿಂದ ಚಿನ್ನದ ಮಾಂಗಲ್ಯ ಕರಿಮಣಿ ಸರ ಹಾಗೂ ಚಿನ್ನದ ಸರದ ಒಂದು ತುಂಡು ಸ್ವಾಧೀನಪಡಿಸಿಕೊಂಡಿದ್ದು ಹಾಗೂ ಆರೋಪಿಯು ಕೃತ್ಯಕ್ಕೆ ಬಳಸಿದ ಬೈಕನ್ನು ವಶಪಡಿಸಿಕೊಳ್ಳಲಾಗಿದೆ. ಆರೋಪಿ ಕೈಯಿಂದ ವಶಪಡಿಸಿಕೊಂಡ ಸೊತ್ತುಗಳ ಅಂದಾಜು ಮೌಲ್ಯ ಸುಮಾರು 3,30,000 ರೂ. ಆಗಬಹುದು […]