Tag: rain

Breaking News COMMUNITY NEWS DAKSHINA KANNADA HOME

ದ.ಕ. ಜಿಲ್ಲೆಯಲ್ಲಿ ಶಾಲೆಗಳಿಗೆ ಶನಿವಾರ ರಜೆ

ಮಂಗಳೂರು: ದ.ಕ. ಜಿಲ್ಲೆಯಲ್ಲಿ ಮಳೆ ಮುಂದುವರೆದಿದ್ದು ಆ.30ರ ಶನಿವಾರ ಜಿಲ್ಲೆಯ ಎಲ್ಲಾ ಶಾಲೆಗಳಿಗೆ ರಜೆ ಘೋಷಣೆ ಮಾಡಲಾಗಿದೆ. ಅಂಗನವಾಡಿಯಿಂದ ಪ್ರೌಢ ಶಾಲೆಯ ವರೆಗೆ ಮುನ್ನೆಚ್ಚರಿಕಾ ಕ್ರಮವಾಗಿ ರಜೆ ಘೋಷಿಸಿ ದ.ಕ. ಜಿಲ್ಲಾಧಿಕಾರಿ ದರ್ಶನ್ ಎಚ್. ಆದೇಶ ಹೊರಡಿಸಿದ್ದಾರೆ.

Breaking News DAKSHINA KANNADA LATEST NEWS

ಬಂಟ್ವಾಳ, ಪುತ್ತೂರು, ಮಂಗಳೂರು, ಮೂಲ್ಕಿ, ಮೂಡುಬಿದಿರೆ ತಾಲೂಕುಗಳಲ್ಲಿ ಶಾಲೆ ಪಿಯು ಕಾಲೇಜುಗಳಿಗೆ ರಜೆ

ಮಂಗಳೂರು: ನಿರಂತರ ಮಳೆಯ ಹಿನ್ನೆಲೆಯಲ್ಲಿ ಮಂಗಳೂರು, ಪುತ್ತೂರು, ಮೂಲ್ಕಿ, ಉಳ್ಳಾಲ, ಬಂಟ್ವಾಳ, ಮೂಡುಬಿದಿರೆ ತಾಲೂಕುಗಳಲ್ಲಿ ಶಾಲೆ ಪಿಯು ಕಾಲೇಜುಗಳಿಗೆ ರಜೆ ಘೋಷಣೆಯಾಗಿದೆ.

HOME LATEST NEWS UDUPI

ಉಡುಪಿ ಜಿಲ್ಲೆಯಲ್ಲಿ ನಾಳೆ(ಆ.19) ಶಾಲೆ, ಪಿಯು ಕಾಲೇಜುಗಳಿಗೆ ರಜೆ

ಉಡುಪಿ: ಜಿಲ್ಲೆಯಲ್ಲಿ ಸತತ ಭಾರೀ ಮಳೆಯಾಗುತ್ತಿರುವುದರಿಂದ ಹವಾಮಾನ ಇಲಾಖೆಯು ರೆಡ್ ಅಲರ್ಟ್ ಘೋಷಿಸಿರುವ ಹಿನ್ನೆಲೆಯಲ್ಲಿ ಆ.19 ರಂದು (ಮಂಗಳವಾರ) ಉಡುಪಿ ಜಿಲ್ಲೆಯ ಅಂಗನವಾಡಿ, ಪ್ರಾಥಮಿಕ ಮತ್ತು ಪ್ರೌಢ ಶಾಲೆ, ಪದವಿಪೂರ್ವ ಕಾಲೇಜು ಮತ್ತು ಐಟಿಐಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಸೋಮವಾರ ರಾತ್ರಿ ಆದೇಶ ಹೊರಡಿಸಿದ್ದಾರೆ. ಭಾರೀ ಮಳೆ ಹಿನ್ನಲೆಯಲ್ಲಿ ಸೋಮವಾರ ರಜೆ ಘೋಷಣೆ ಮಾಡಲಾಗಿತ್ತು. ಸ್ನಾತಕೋತ್ತರ ಪದವಿ, ಡಿಪ್ಲೊಮಾ, ಇಂಜಿನಿಯರಿಂಗ್ ವಿದ್ಯಾರ್ಥಿಗಳಿಗೆ ರಜೆ ಇಲ್ಲ.

HOME

ವಿಟ್ಲ ಸಮೀಪ ರಸ್ತೆಗೆ ಉರುಳಿದ ಬೃಹತ್ ಮರ; ಹಲವು ವಿದ್ಯುತ್ ಕಂಬಗಳಿಗೆ ಹಾನಿ ಸಂಚಾರ ವ್ಯತ್ಯಯ

ಭಾರೀ ಮಳೆಯಿಂದಾಗಿ ವಿಟ್ಲ ಸಮೀಪದ ಕೇಪು ಮೈರದ ಬಳಿಯಲ್ಲಿ ರಸ್ತೆಗೆ ಬೃಹತ್ ಮರ ಉರುಳಿ ನಾಲ್ಕೈದು ವಿದ್ಯುತ್ ಕಂಬ ವಿದ್ಯುತ್ ತಂತಿಗೆ ಹಾನಿಯಾದ ಘಟನೆ ನಡೆದಿದೆ. ಈ ವೇಳೆ ರಸ್ತೆಯಲ್ಲಿ ತೆರಳುತ್ತಿದ್ದ ಕಾರಿನ ಮೇಲೆ ಮರ ಬಿದ್ದಿದ್ದು, ಕೇರಳ ನೊಂದಣಿಯ ಕಾರು ಜಖಂಗೊಂಡಿದೆ. ಕಾರಿನಲ್ಲಿದ್ದವರಿಗೆ ಗಾಯಗಳಾಗಿವೆ ಎಂದು ತಿಳಿದು ಬಂದಿದೆ. ಘಟನೆಯಿಂದ ಹಲವು ಸಮಯ ರಸ್ತೆ ಸಂಚಾರ ಉಂಟಾಗಿತ್ತು. ಬಳಿಕ ಮೆಸ್ಕಾಂ, ಅರಣ್ಯ ಇಲಾಖೆ ಸಿಬಂದಿಗಳು ಸೇರಿದಂತೆ ಸ್ಥಳೀಯರ ಸಹಕಾರದಿಂದ ತೆರವು ಕಾರ್ಯಾಚರಣೆ ನಡೆಸಲಾಗಿದ್ದು, ಸಂಚಾರಕ್ಕೆ ಅನುವು […]

Breaking News DAKSHINA KANNADA LATEST NEWS

ಬಂಟ್ವಾಳ, ಪುತ್ತೂರು ತಾಲೂಕಿನಲ್ಲಿ ಇಂದು ಶಾಲೆಗಳಿಗೆ ರಜೆ

ಬಂಟ್ವಾಳ, ಪುತ್ತೂರು ತಾಲೂಕಿನಲ್ಲಿ ನಿರಂತರ ಮಳೆಯಾಗುತ್ತಿರುವುದರಿಂದ ತಾಲೂಕಿನ ಎಲ್ಲಾ ಅಂಗನವಾಡಿ ಕೇಂದ್ರಗಳು ,ಪ್ರಾಥಮಿಕ ಮತ್ತು ಪ್ರೌಢಶಾಲೆ ಸರ್ಕಾರಿ ಅನುದಾನಿತ ಮತ್ತು ಖಾಸಗಿ ವಿದ್ಯಾ ಸಂಸ್ಗಳಿಗೆ ದಿನಾಂಕ 24.07.2025 ರಂದು ರಜೆ ಘೋಷಿಸಲಾಗಿದೆ ಎಂದು ತಹಶೀಲ್ದಾರರು ತಿಳಿಸಿದ್ದಾರೆ.

Breaking News DAKSHINA KANNADA LATEST NEWS

ಜು.24: ಮಂಗಳೂರು, ಮೂಲ್ಕಿ, ಮೂಡುಬಿದಿರೆ ತಾಲೂಕಿನಲ್ಲಿ ಶಾಲೆ, ಪಿಯು ಕಾಲೇಜುಗಳಿಗೆ ರಜೆ

ಮಂಗಳೂರು, ಜು.23: ಮಂಗಳೂರು, ಮೂಲ್ಕಿ, ಮೂಡುಬಿದಿರೆ ತಾಲೂಕಿನಲ್ಲಿ ಜು.24ರ ಗುರುವಾರ ಶಾಲೆ, ಪಿಯು ಕಾಲೇಜುಗಳಿಗೆ ರಜೆ ಘೋಷಿಸಿ ತಹಶೀಲ್ದಾರ್ ಆದೇಶ ಹೊರಡಿಸಿದ್ದಾರೆ.

HOME

ಮಂಗಳೂರು ತಾಲೂಕಲ್ಲಿ ಶಾಲೆ ಪಿಯು ಕಾಲೇಜು, ಬಂಟ್ವಾಳದಲ್ಲಿ ಶಾಲೆಗಳಿಗೆ ಇಂದು (ಜು. 19) ಶಾಲೆ ಪಿಯು ಕಾಲೇಜುಗಳಿಗೆ ರಜೆ

ಮಳೆಯ ಹಿನ್ನೆಲೆ ಮಂಗಳೂರು ತಾಲೂಕಿನ ಶಾಲೆ ಪಿಯು ಕಾಲೇಜುಗಳಿಗೆ ಹಾಗೂ ಬಂಟ್ವಾಳ ತಾಲೂಕಿನಲ್ಲಿ ಎಲ್ಲಾ ಶಾಲೆಗಳಿಗೆ ಜು.19ರ ಶನಿವಾರ ರಜೆ ಘೋಷಿಸಲಾಗಿದೆ.

Breaking News DAKSHINA KANNADA

ಪೆರುವಾಯಿ ಸಮೀಪ ರಸ್ತೆಗೆ ಗುಡ್ಡ ಕುಸಿತ; ವಾಹನ ಸಂಚಾರಕ್ಕೆ ಅಡ್ಡಿ

ಪೆರುವಾಯಿ, ಬಂಟ್ವಾಳ ತಾಲೂಕಿನ ವಿಟ್ಲ ಪೆರುವಾಯಿ ಸಮೀಪದ ಓಣಿಬಾಗಿಲು ಬಳಿ ರಸ್ತೆಗೆ ಗುಡ್ಡ ಕುಸಿತವಾಗಿದೆ. ಘಟನೆಯಲ್ಲಿ ರಸ್ತೆ ಬಂದ್ ಆಗಿ ಕೆಲವು ಸಮಯ ಸಂಚಾರ ಬಂದ್ ಆಗಿತ್ತು. ಪಕಳಕುಂಜದಿಂದ ಮಂಗಳೂರು, ಪುತ್ತೂರು ಹಾಗೂ ವಿಟ್ಲಕ್ಕೆ ತೆರಳುವ ಬಸ್ ಸಂಚಾರ ವ್ಯತ್ಯಯವಾಯಿತು. ಬೆಳ್ಳಂಬೆಳಗ್ಗೆ ಕೆಲಸಕ್ಕೆ ತೆರಳುವವರು ಪರದಾಡುವಂತಾಯಿತು. ಬಳಿಕ ಸ್ಥಳೀಯರ ಸಹಕಾರದಿಂದ ಅಲ್ಪ ಪ್ರಮಾಣದಲ್ಲಿ ಮಣ್ಣು ತೆರವುಗೊಳಿಸಿ ಸಂಚಾರಕ್ಕೆ ಅನುವು ಮಾಡಿಕೊಡಲಾಯಿತು.ಓಣಿಬಾಗಿಲು ಬಳಿ ಈ ಹಿಂದೆ ಅನೇಕ ಬಾರಿ ಗುಡ್ಡ ಕುಸಿದಿದ್ದು, ಶಾಶ್ವತ ಪರಿಹಾರ ಕೈಗೊಂಡಿಲ್ಲ.

About Us

Lorem ipsum dol consectetur adipiscing neque any adipiscing the ni consectetur the a any adipiscing.

Email Us: [email protected]

Contact: +5-784-8894-678