Tag: vitla

DAKSHINA KANNADA HOME LATEST NEWS

ವಿಟ್ಲ: ಕ್ರಿಮಿನಲ್ ಹಿನ್ನೆಲೆಯುಳ್ಳ ಅಬ್ದುಲ್ ಖಾದರ್ ಮೂಡಿಗೆರೆಗೆ ಗಡಿಪಾರು

ವಿಟ್ಲ: ಇಲ್ಲಿನ ಪೊಲೀಸ್ ಠಾಣಾ ವ್ಯಾಪ್ತಿಯ ಕ್ರಿಮಿನಲ್ ಹಿನ್ನೆಲೆಯುಳ್ಳ ಅಬ್ದುಲ್ ಖಾದರ್ ಯಾನೆ ಶೌಕತ್ ಎಂಬಾತನನ್ನು ಗಡಿಪಾರು ಮಾಡಲಾಗಿದೆ. ಬಂಟ್ವಾಳ ತಾಲೂಕು ವಿಟ್ಲ ಕಸಬ ಗ್ರಾಮ ನಿವಾಸಿ ಅಬ್ದುಲ್ ಖಾದರ್ ವಿರುದ್ಧ ಹಲ್ಲೆ, ದೊಂಬಿ, ನಿಷೇಧಿತ ಮಾದಕ ದ್ರವ್ಯ ಸೇವನೆ, ಏನ್ ಡಿ ಪಿ ಎಸ್ ಕಾಯ್ದೆಯಂತೆ 3 ಪ್ರಕರಣಗಳು ದಾಖಲಾಗಿತ್ತು. ಈ ಪ್ರಕರಣಗಳ ದಾಖಲಾತಿ ಮೇಲೆ ಈತನನ್ನು ವಿಟ್ಲ ಪೊಲೀಸ್ ಠಾಣೆಯ ಠಾಣಾಧಿಕಾರಿಗಳ ವರದಿಯಂತೆ ಸಹಾಯಕ ಆಯುಕ್ತರು ಹಾಗೂ ಉಪವಿಭಾಗಿಯ ದಂಡಾಧಿಕಾರಿ ಮಂಗಳೂರು ರವರು ದಕ್ಷಿಣ […]

DAKSHINA KANNADA HOME LATEST NEWS

ವಿಟ್ಲ: ಪೆರುವಾಯಿ ದನ ಕಳ್ಳನತದ ಆರೋಪಿ ಬಂಧನ- ಉಳಿದವರಿಗಾಗಿ ಶೋಧ

ವಿಟ್ಲ: ಬಂಟ್ವಾಳ ತಾಲೂಕು ಪೆರುವಾಯಿ ಗ್ರಾಮದ ಸೊಸೈಟಿ ಆವರಣದಿಂದ ಹುಲ್ಲು ಮೇಯಲು ಹೋಗಿದ್ದ ದನ ಕಳ್ಳತನ ಮಾಡಿದ ಆರೋಪದಲ್ಲಿ ಉಳ್ಳಾಲದ ಓರ್ವ ಆರೋಪಿಯನ್ನು ತಿಂಗಳ ಬಳಿಕ ವಿಟ್ಲ ಪೊಲೀಸರು ಹೆಡೆಮುರಿ ಕಟ್ಟಿದ್ದಾರೆ. ಝುಲ್ಫಾನ್ ಮಾಲಿಕ್ (30) ಬಂಧಿತ ಆರೋಪಿ. ಘಟನೆ ವಿವರ 18-11-2025 ರಂದು ಬಂಟ್ವಾಳ ತಾಲೂಕು ವಿಟ್ಲ ಪೊಲೀಸ್‌ ಠಾಣಾ ವ್ಯಾಪ್ತಿಯ ಪೆರುವಾಯಿ ಗ್ರಾಮದ ಸೊಸೈಟಿ ಆವರಣದಲ್ಲಿ ಗಣೇಶ ರೈ ಹಾಗೂ ನಾರಾಯಣ ನಾಯ್ಕ ಅವರ 4 ದನಗಳು ಮೇಯುತ್ತಿದ್ದವು. ರಾತ್ರಿ ವೇಳೆ ಅಲ್ಲಿಯೇ ಮಲಗಿದ್ದ […]

DAKSHINA KANNADA HOME LATEST NEWS

ವಿಟ್ಲ: ಸೈಂಟ್ ರೀಟಾ ವಿದ್ಯಾ ಸಂಸ್ಥೆಯಲ್ಲಿ ‘ಆಟಿದ ತಿರ್ಲ್’ ವಿನೂತನ ಕಾರ್ಯಕ್ರಮ

ಬಂಟ್ವಾಳ,ಆಗಸ್ಟ್ 1: ತಾಲೂಕಿನ ವಿಟ್ಲದ ಸೈಂಟ್ ರೀಟಾ ವಿದ್ಯಾ ಸಂಸ್ಥೆಯಲ್ಲಿ ಗುರುವಾರ “ಆಟಿದ ತಿರ್ಲ್” ಕಾರ್ಯಕ್ರಮ ನಡೆಯಿತು. ಶಾಲಾ ಸಂಚಾಲಕ ವಂದನೀಯ ಐವನ್ ಮೈಕಲ್ ರೋಡ್ರಿಗಸ್ ಕಾರ್ಯಕ್ರಮ ಉದ್ಘಾಟಿಸಿದರು. ಶಾಲಾ ಮುಖ್ಯ ಶಿಕ್ಷಕ ವಂದನೀಯ ಅಮಿತ್ ಪ್ರಕಾಶ್ ರೋಡ್ರಿಗಸ್ ಮಾತನಾಡಿ, ತುಳುನಾಡಿನ ವಿಶೇಷತೆ ಕುರಿತು ಅರಿವು ಮೂಡಿಸಿದರು. ಚರ್ಚ್ ಪಾಲನಾ ಸಮಿತಿಯ ಕಾರ್ಯದರ್ಶಿ ಶ್ವೇತಾ ಪಾಯ್ಸ್, ಧರ್ಮ ಭಗಿನಿಯರಾದ ಮರಿನಾ ಹಾಗೂ ಜಾನೆಟ್ ಉಪಸ್ಥಿತರಿದ್ದರು. ವಿದ್ಯಾರ್ಥಿಗಳು ತುಳುನಾಡಿನ ವಿಶೇಷತೆಯನ್ನು ಹಾಡು, ನೃತ್ಯ, ಪ್ರದರ್ಶನ, ಔಷಧೀಯ ಸಸ್ಯಗಳ ವಿವರಿಸುವ […]

DAKSHINA KANNADA HOME LATEST NEWS

ವಿಟ್ಲ: ವಾಹನ ದಟ್ಟನೆ ನಿಯಂತ್ರಿಸಲು ಫ್ಲೆಕ್ಸ್ ಮತ್ತು ತಳ್ಳುಗಾಡಿ ತೆರವು

ವಿಟ್ಲ: ವಿಟ್ಲ ಪೇಟೆಯಲ್ಲಿ ಸಂಭವಿಸುತ್ತಿರುವ ವಾಹನ ದಟ್ಟನೆ ನಿಯಂತ್ರಿಸಲು ಇಲ್ಲಿನ ಪಟ್ಟಣ ಪಂಚಾಯತ್ ಅಧಿಕಾರಿಗಳು ವಾಹನ ದಟ್ಟನೆಗೆ ಕಾರಣವಾಗುತ್ತಿದ್ದ ಫ್ಲೆಕ್ಸ್ ಮತ್ತು ತಳ್ಳುಗಾಡಿಗಳನ್ನು ತೆರವುಗೊಳಿಸಿದರು. ವಿಟ್ಲ ಪೇಟೆಯಲ್ಲಿ ಸಂಭವಿಸುತ್ತಿರುವ ವಾಹನ ದಟ್ಟನೆಯನ್ನು ನಿಯಂತ್ರಿಸುವ ಉದ್ದೇಶದಿಂದ ಶನಿವಾರ ಪಟ್ಟಣ ಪಂಚಾಯತ್ ವತಿಯಿಂದ ಪೊಲೀಸ್, ಇಲಾಖೆ ಮತ್ತು ವಾಹನ ಚಾಲಕ ಸಭೆ ಕರೆಯಲಾಗಿತ್ತು. ಈ ವೇಳೆ ಈ ಹಿಂದೆ ಜಿಲ್ಲಾಧಿಕಾರಿಗಳು ಹೊರಡಿಸಿದ್ದ ಆದೇಶವನ್ನು ಮುಂದುವರಿಸಲು ನಿರ್ಣಯ ಕೈಗೊಳ್ಳಲಾಗಿತ್ತು. ಅದರಂತೆ ವಿಟ್ಲದ ನಾಲ್ಕು ಮಾರ್ಗ ಜಂಕ್ಷನ್ ನಲ್ಲಿ ಅಳವಡಿಸಲಾಗಿದ್ದ ಪ್ರಚಾರದ ಫ್ಲೆಕ್ಸ್ […]

DAKSHINA KANNADA HOME LATEST NEWS

ಕೋಳಿ ಅಂಕದ ಮೇಲೆ ವಿಟ್ಲ ಪೊಲೀಸರಿಂದ ದಾಳಿ

ವಿಟ್ಲ: ಗುಡ್ಡೆಯಲ್ಲಿ ಕೋಳಿ ಅಂಕ ನಡೆಸುತ್ತಿದ್ದಾಗ ವಿಟ್ಲ ಪೊಲೀಸರು ದಿಢೀರ್‌ ಪೊಲೀಸ್‌ ದಾಳಿ ನಡೆಸಿದ್ದಾರೆ. ದಾಳಿ ವೇಳೆ ಕೋಳಿ ಸಮೇತ ಆರೋಪಿಗಳು ಪರಾರಿಯಾಗಿದ್ದಾರೆ. ಈ ಬಗ್ಗೆ ಸ್ವಯಂ ಪ್ರೇರಿತ ಪ್ರಕರಣ ದಾಖಲಿಸಿರುವ ಪೊಲೀಸರು, ಬಂಟ್ವಾಳ ತಾಲೂಕು ವೀರಕಂಭ ಗ್ರಾಮದ ಹರೆಬೆಟ್ಟು ಎಂಬ ಗುಡ್ಡೆಯಲ್ಲಿ ಕೋಳಿ ಅಂಕ ನಡೆಸುತ್ತಿರುವ ಬಗ್ಗೆ ಖಚಿತ ಮಾಹಿತಿ ದೊರೆತಿದೆ. ಈ ವೇಳೆ ಪೊಲೀಸ್ ಉಪ ನಿರೀಕ್ಷಕ ರತ್ನಕುಮಾರ್ ತಮ್ಮ ಸಿಬ್ಬಂದಿಯೊಂದಿಗೆ ಮರೆಯಲ್ಲಿ ನಿಂತು ಗಮನಿಸಿದಾಗ ಸದ್ರಿ ಗುಡ್ಡೆಯ ಸ್ಥಳದಲ್ಲಿ ಕೆಲವರು ಗುಂಪು ಸೇರಿ […]

DAKSHINA KANNADA HOME LATEST NEWS

ವಿಟ್ಲ: ಫಾತಿಮಾ ಮಾತ ಸಮುದಾಯ ಭವನ ಉದ್ಘಾಟನೆ

ವಿಟ್ಲ:  ಎಲ್ಲರ ಸಹಕಾರ ಅನ್ಯೂನ್ಯತೆಯಿಂದ ಸುಂದರ ಸಭಾಭವನ ನಿರ್ಮಾಣಗೊಂಡು ಇಂದು ಲೋಕಾರ್ಪಣೆಗೊಂಡಿದೆ. ಅಭಿವೃದ್ಧಿಯ ಸಂಕೇತವೇ ಈ ಒಂದು ಸಭಾಭವನ ಆಗಿದೆ. ನಮ್ಮೊಳಗಿನ‌ ಸಂಬಂದ ಇನ್ನಷ್ಟು ಗಟ್ಟಿಯಾಗಲಿ ಎಂದು ಮಂಗಳೂರು ಧರ್ಮಪ್ರಾಂತ್ಯದ ಧರ್ಮಾಧ್ಯಕ್ಷ ಅತಿ ವಂದನೀಯ ಡಾ. ಪೀಟರ್ ಪಾವ್ಲ್ ಸಲ್ದಾನ ರವರು ಹೇಳಿದರು. ಅವರು ಮೇ.೫ರಂದು ಪೆರುವಾಯಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಪೆರುವಾಯಿ ಮುಚ್ಚಿರಪದವು ಫಾತಿಮ ಮಾತೆ ದೇವಾಲಯದ ಫಾತಿಮಾ ಮಾತಾ ಸಮುದಾಯ ಭವನವನ್ನು ಉದ್ಘಾಟಿಸಿ ಮಾತನಾಡಿದರು. ವಿಧಾನ ಪರಿಷತ್ ಸದಸ್ಯರಾದ ಐವನ್ ಡಿಸೋಜಾರವರು ಮಾತನಾಡಿ ಇದೊಂದು […]

DAKSHINA KANNADA HOME LATEST NEWS

ಅಪ್ರಾಪ್ತೆಗೆ ಕಿರುಕುಳ ನೀಡಿದ ಪ್ರಕರಣ: ಅರೋಪಿ ಮಹೇಶ್ ಭಟ್‌ಗೆ ಜಾಮೀನು

ಮಂಗಳೂರು: ಬಂಟ್ವಾಳ ತಾಲೂಕಿನ ಮಾಣಿಲದ ದಲಿತ ಬಾಲಕಿಗೆ ಕಿರುಕುಳ ನೀಡಿದ ಪ್ರಕರಣದಲ್ಲಿ ಆರೋಪಿಗೆ ಮಂಗಳೂರಿನ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಹಾಗೂ ಎಸ್.ಟಿ.ಎಸ್.ಸಿ.-1 (ಪೊಕ್ಸೊ ನ್ಯಾಯಾಲಯ) ಸೋಮವಾರ ಶರತ್ತುಬದ್ಧ ನಿರೀಕ್ಷಣಾ ಜಾಮೀನು ನೀಡಿದೆ. ಆರೋಪಿ ಮಹೇಶ್ ಭಟ್ ಸಲ್ಲಿಸಿದ್ದ ಜಾಮೀನು ಅರ್ಜಿಯನ್ನು ಕೈಗೆತ್ತಿಕೊಂಡ ನ್ಯಾಯಾಲಯವು ವಿಶೇಷ ಸರಕಾರಿ ಅಭಯೋಜಕರ, ಅರ್ಜಿದಾರ ಪರ ವಕೀಲರ ಮತ್ತು ಪಿರ್ಯಾದಿದರಾರರು ಮತ್ತಾಕೆಯ ಹೆತ್ತವರನ್ನು ನ್ಯಾಯಾಧೀಶರು ವಿಚಾರಣೆಗೊಳಪಡಿಸಿದ್ದರು. ಕೃತ್ಯ ನಡೆಸಿದ ಬಳಿಕ ಆರೋಪಿ ತಲೆಮರೆಸಿಕೊಂಡಿದ್ದ, ಆತನನ್ನು ಬಂಧಿಸುವಂತೆ ವಿವಿಧ ಸಂಘಟನೆಗಳು ಪ್ರತಿಭಟನೆ […]

DAKSHINA KANNADA HOME LATEST NEWS

ವಿದ್ಯಾರ್ಥಿನಿ ಮೇಲೆ ದೌರ್ಜನ್ಯ: ಆರೋಪಿ ಬಂಧನಕ್ಕೆ ದಲಿತ ಸಂಘಟನೆಗಳ ಆಗ್ರಹ

ಮಂಗಳೂರು: ಬಂಟ್ವಾಳ ತಾಲೂಕಿನ ವಿಟ್ಲ ಮಾಣಿಲ ಗ್ರಾಮದ ಮುರುವದಲ್ಲಿ ದಲಿತ ವಿದ್ಯಾರ್ಥಿನಿಯೊಬ್ಬಳಿಗೆ ಸ್ಥಳೀಯ ನಿವಾಸಿ ಮಹೇಶ್ ಭಟ್ ಲೈಂಗಿಕ ಕಿರುಕುಳ ನೀಡಿ ಜಾತಿ ನಿಂದನೆ ಎಸಗಿರುವ ವಿರುದ್ಧ ವಿಟ್ಲ ಪೊಲೀಸ್ ಠಾಣೆಯಲ್ಲಿ ಫೋಕ್ಸೋ ಸೆಕ್ಷನ್ ಹಾಗೂ ದಲಿತ ದೌರ್ಜನ್ಯ ಕಾಯಿದೆಯ ಅನ್ವಯ ಪ್ರಕರಣ ದಾಖಲಾಗಿದ್ದರೂ ಕೂಡ ಪೊಲೀಸ್ ಇಲಾಖೆ ಈ ಕುರಿತು ಕ್ರಮ ಜರುಗಿಸದೇ ಇರುವುದು ಸಾಕಷ್ಟು ಅನುಮಾನಕ್ಕೆ ಎಡೆ ಮಾಡಿಕೊಡುತ್ತಿದೆ. ಈ ಕುರಿತು ತಕ್ಷಣ ಆರೋಪಿಯನ್ನು ಬಂಧಿಸಿ ಕಾನೂನು ಕ್ರಮ ಜರುಗಿಸಬೇಕು ಎಂದು ಕರ್ನಾಟಕ ದಲಿತ […]

DAKSHINA KANNADA HOME LATEST NEWS

ವಿಟ್ಲ: ಲೈಂಗಿಕ ದೌರ್ಜನ್ಯಕ್ಕೊಳಗಾದ ಬಾಲಕಿ ಮನೆಗೆ ಸಂಘಟನೆಗಳ ಭೇಟಿ

ಮಂಗಳೂರು: ಇತ್ತೀಚೆಗೆ ವಿಟ್ಲದ ಮುರುವ ಪ್ರದೇಶದಲ್ಲಿ ಭೂಮಾಲಕ ಮಹೇಶ್ ಭಟ್ ಎಂಬವನಿಂದ ಲೈಂಗಿಕ ದೌರ್ಜನ್ಯಕ್ಕೊಳಗಾದ ದಲಿತ ವರ್ಗದ ಅಪ್ರಾಪ್ತ ವಯಸ್ಸಿನ ಬಾಲಕಿ ಮನೆಗೆ ಡಿಎಚ್ಎಸ್, ಡಿವೈಎಫ್ಐ ಸಂಘಟನೆಯ ನಾಯಕರುಗಳ ನಿಯೋಗ  ಭೇಟಿ ನೀಡಿ ಘಟನೆಗೆ ಸಂಬಂಧಿಸಿ ಹಲವು ಅಂಶಗಳ ಬಗ್ಗೆ ಚರ್ಚಿಸಿದೆ ಹಾಗೂ ಸಂತ್ರಸ್ತ ಕುಟುಂಬಕ್ಕೆ ಧೈರ್ಯವನ್ನು ತುಂಬಿದೆ. ವಿಟ್ಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿ ಐದಾರು ದಿನ ಕಳೆದರೂ ಆರೋಪಿ ಮಹೇಶ್ ಭಟ್ ನನ್ನು ಈವರೆಗೂ ಬಂಧಿಸಲು ಸಾಧ್ಯವಾಗದಿರುವ ಪೊಲೀಸ್ ಇಲಾಖೆಯ ಕ್ರಮ ಖಂಡನೀಯ. ಸದ್ಯ […]

DAKSHINA KANNADA HOME LATEST NEWS

ವಿಟ್ಲ: ಮಟ್ಕಾ ದಂಧೆಗೆ ಪೊಲೀಸರ ದಾಳಿ- ಓರ್ವ ವಶಕ್ಕೆ

ವಿಟ್ಲ: ಬಂಟ್ವಾಳ ತಾಲೂಕಿನ ವಿಟ್ಲ ಪೊಲೀಸ್‌ ಠಾಣಾ ವ್ಯಾಪ್ತಿಯ ಕೇಪು ಗ್ರಾಮದ ಅಡ್ಯನಡ್ಕ ಎಂಬಲ್ಲಿ ನಡೆಯುತ್ತಿದ್ದ ಮಟ್ಕಾ ದಂಧೆಗೆ ಪೊಲೀಸರು ದಾಳಿ ನಡೆಸಿ, ಓರ್ವನನ್ನು ವಶಕ್ಕೆ ಪಡೆದಿದ್ದಾರೆ. ವಶಕ್ಕೆ ಪಡೆದ ವ್ಯಕ್ತಿಯನ್ನು ಕೇಪು ಗ್ರಾಮದ ಅಶೋಕ (45) ಎಂದು ಗುರುತಿಸಲಾಗಿದೆ. ಘಟನೆ ವಿವರ ಕೇಪು ಗ್ರಾಮದ ಅಡ್ಯನಡ್ಕ ಪೆಟ್ರೊಲ್ ಪಂಪ್ ಬಳಿ ಅಶೋಕ ಎಂಬಾತನು  ಮಟ್ಕಾ ಆಟವನ್ನು ಆಡಿಸುತ್ತಿದ್ದಾನೆ ಎಂಬ ಖಚಿತ ಮಾಹಿತಿ ಬಂದ ಮೇರೆಗೆ ವಿಟ್ಲ ಪೊಲೀಸ್‌ ಉಪನಿರೀಕ್ಷಕ ಕೌಶಿಕ್‌ ಬಿ.ಸಿ ಸಿಬ್ಬಂದಿಯೊಂದಿಗೆ ಸ್ಥಳಕ್ಕೆ ದಾಳಿ […]