HOME
STATE
ಅನಿವಾಸಿ ಕನ್ನಡಿಗ ಝಕರಿಯಾ ಜೋಕಟ್ಟೆ ಅವರಿಗೆ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ
ಬೆಂಗಳೂರು: ರಾಜ್ಯ ಸರಕಾರದ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಕೊಡಮಾಡುವ 2025-26ನೇ ಸಾಲಿನ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಪ್ರಕಟವಾಗಿದ್ದು, ಸೌದಿ ಅರೇಬಿಯಾ ಜುಬೈಲ್ ನ ಅಲ್ ಮುಝೈನ್ ಕಂಪೆನಿ ಸಂಸ್ಥಾಪಕ ಹಾಗೂ ಮಂಗಳೂರಿನ ಪ್ರತಿಷ್ಟಿತ ಸಂಸ್ಥೆ ಎಂ.ಫ್ರೆಂಡ್ಸ್ ಚಾರಿಟೇಬಲ್ ಟ್ರಸ್ಟ್ ಅಧ್ಯಕ್ಷ ಝಕರಿಯಾ ಜೋಕಟ್ಟೆ ಅವರು “ಅನಿವಾಸಿ ಕನ್ನಡಿಗ” ವಿಭಾಗದಲ್ಲಿ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ. ಬಜ್ಪೆಗುತ್ತು ಹಾಜಿ ಬಿ. ಶೇಕುಂಞಿ ಹಾಗೂ ಕತೀಜಮ್ಮ ದಂಪತಿ ಪುತ್ರನಾಗಿರುವ ಝಕರಿಯಾ ಜೋಕಟ್ಟೆ 1958 ಮೇ 10 ರಂದು ಜೋಕಟ್ಟೆಯ ತೋಕೂರಿನಲ್ಲಿ ಜನಿಸಿದರು. […]


