“ಬಿಜೆಪಿ ಸುಳ್ಳುನ್ನು ಸತ್ಯವೆಂದು ಬಿಂಬಿಸಿ ಅಪನಂಬಿಕೆ ಸೃಷ್ಟಿಸಿದೆ”
ಮಂಗಳೂರು: 13 ಜಿಲ್ಲೆಯ ಪ್ರಸಕ್ತ ವಿದ್ಯಮಾನಗಳ ಕುರಿತು ಕೆಪಿಸಿಸಿ ಉಪಾಧ್ಯಕ್ಷ, ದ.ಕ.ಜಿಲ್ಲಾ ಕೆಪಿಸಿಸಿ ಉಸ್ತುವಾರಿ ಎಂ.ಸಿ ವೇಣುಗೋಪಾಲ್ ಶುಕ್ರವಾರ ನಗರದ ಮಲ್ಲಿಕಟ್ಟೆಯ ಕಾಂಗ್ರೆಸ್ ಭವನದಲ್ಲಿ ಜಿಲ್ಲಾ ಕಾಂಗ್ರೆಸ್ ಹಿರಿಯ ನಾಯಕರು, ವಿವಿಧ ಪದಾಧಿಕಾರಿಗಳನ್ನು ಭೇಟಿಯಾಗಿ ಸಮಾಲೋಚನೆ ನಡೆಸಿದರು. ಬಳಿಕ ಮಾತನಾಡಿದ ಅವರು, ಜಿಲ್ಲೆಯಲ್ಲಿ ಬಿಜೆಪಿ ಸದಾ ಅಶಾಂತಿಗೆ ಪ್ರೇರಣೆ ನೀಡುತ್ತಾ ಬಂದಿದ್ದು, ಸುಳ್ಳುನ್ನು ಸತ್ಯವೆಂದು ಬಿಂಬಿಸಿ ಜನರಲ್ಲಿ ಅಪನಂಬಿಕೆ ಸೃಷ್ಟಿಸಿದೆ. ದ.ಕ. ಜಿಲ್ಲೆ ಶಾಂತಿ ಸೌಹಾರ್ದತೆಯ ಜಿಲ್ಲೆಯಾಗಿದ್ದು, ಶಿಕ್ಷಣ, ವೈದ್ಯಕೀಯ ಮತ್ತು ಬ್ಯಾಂಕಿಂಗ್ ಕ್ಷೇತ್ರದಲ್ಲಿ ವಿಶ್ವವಿಖ್ಯಾತಿ ಪಡೆದಿದೆ. […]