ಉತ್ತರಕಾಂಡ ಭಾರೀ ಮೇಘಸ್ಪೋಟ: 59ಕ್ಕೂ ಅಧಿಕ ಮಂದಿ ಕಣ್ಮರೆ
ಉತ್ತರಕಾಶಿ: ಉತ್ತರಕಾಂಡ ರಾಜ್ಯದ ಉತ್ತರಕಾಶಿ ಜಿಲ್ಲೆಯ ಧರಾಲಿ ಪ್ರದೇಶದಲ್ಲಿ ಮಂಗಳವಾರ ಮಧ್ಯಾಹ್ನ ಮೂರು ಗಂಟೆಗಳ ಅವಧಿಯಲ್ಲಿ ಮೂರು ಬಾರಿ ಮೇಘಸ್ಪೋಟವಾಗಿದ್ದು, ಭಾರಿ ಪ್ರವಾಹದಿಂದಾಗಿ ನಾಲ್ವರು ಸಾವನ್ನಪ್ಪಿದ್ದಾರೆ. ಒಂಬತ್ತು ಸೇನಾ ಸಿಬ್ಬಂದಿ ಸೇರಿದಂತೆ 59 ಕ್ಕೂ ಹೆಚ್ಚು ಮಂದಿ ಕಣ್ಮರೆಯಾಗಿದ್ದಾರೆ. ಭಾರತೀಯ ಸೇನೆ ಮತ್ತು ಪರಿಹಾರ ತಂಡಗಳಿಂದ ಬೃಹತ್ ಜಂಟಿ ರಕ್ಷಣಾ ಕಾರ್ಯಾಚರಣೆ ನಡೆಸಲಾಗಿದೆ. ಈ ಬಗ್ಗೆ ಮಾತನಾಡಿದ ರಕ್ಷಣಾ (PRO) ಲೆಫ್ಟಿನೆಂಟ್ ಕರ್ನಲ್ ಮನೀಶ್ ಶ್ರೀವಾಸ್ತವ, ಡೆಹ್ರಾಡೂನ್ ದುರಂತದ ಪ್ರಮಾಣ ಮತ್ತು ಸೇನೆಯ ತಕ್ಷಣದ ಕಾರ್ಯಾಚರಣೆಯನ್ನು ದೃಢಪಡಿಸಿದರು. […]