ಪಾದುವಾ ಕಾಲೇಜ್ ಆಫ್ ಕಾಮರ್ಸ್ ಆ್ಯಂಡ್ ಮ್ಯಾನೇಜ್‌ಮೆಂಟ್‌ನಲ್ಲಿ ಸಂಭ್ರಮದ ವಾರ್ಷಿಕೋತ್ಸವ ಆಚರಣೆ
ಮಂಗಳೂರು : ನಗರದ ಪಾದುವಾ ಕಾಲೇಜ್ ಆಫ್ ಕಾಮರ್ಸ್ ಆ್ಯಂಡ್ ಮ್ಯಾನೇಜ್ ಮೆಂಟ್‌ನ ವಾರ್ಷಿಕೋತ್ಸವವು ಎಪ್ರಿಲ್ 17ರಂದು ಕಾಲೇಜು ಆವರಣದಲ್ಲಿ ಅತ್ಯಂತ ಸಡಗರದಿಂದ ಜರುಗಿತು. ಪಾದುವಾ ಸಮೂಹ ಶಿಕ್ಷಣ ಸಂಸ್ಥೆಗಳ ಸಂಚಾಲಕರಾದ ವಂದನೀಯ ಗುರುಗಳಾದ ವಾಲ್ಟರ್ ಡಿಸೋಜ ಅವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಮುಖ್ಯ ಅತಿಥಿಯಾಗಿ ಪಾಲ್ಗೊಂಡಿದ್ದ ಮಂಗಳೂರು ಸ್ಮಾರ್ಟ್ ಸಿಟಿಯ ಪ್ರಧಾನ ವ್ಯವಸ್ಥಾಪಕ ಶ್ರೀ ಅರುಣ್ ಪ್ರಭ ಕೆ.ಎಸ್. ಮಾತನಾಡಿ, “ನಾನು ಪಾದುವಾ ಶಾಲೆಯ ಹಳೆಯ ವಿದ್ಯಾರ್ಥಿಯಾಗಿದ್ದು, ಇಲ್ಲಿ ಪಡೆದ ಜ್ಞಾನ ಮತ್ತು ಶಿಸ್ತು ನನ್ನ […]











