Tag: ಕೆನರಾಟಿವಿ ನ್ಯೂಸ್‌

COMMUNITY NEWS HOME

ಜೂ. 27 ರಂದು ಎಚ್. ಎಮ್. ಪೆರ್ನಾಲ್ ಅವರ ಕವನ ಸಂಕಲನ ‘ಜನೆಲ್’ ಬಿಡುಗಡೆ

ಮಂಗಳೂರು: ಕೊಂಕಣಿ ಕವಿ / ವಿಮರ್ಶಕ ಎಚ್. ಎಮ್. ಪೆರ್ನಾಲ್ ನಾಲ್ಕನೆಯ ಕವನ ಸಂಕಲನ ಜನೆಲ್ (ಕಿಟಕಿ) ಇದೇ ಜೂನ್ 27 ರಂದು ಸಂಜೆ 4.30 ಕ್ಕೆ ಎಂ.ಸಿ.ಸಿ. ಬ್ಯಾಂಕ್ ಆಡಳಿತ ಸೌಧ ಸಭಾಂಗಣದಲ್ಲಿ ಜ್ಞಾನಪೀಠ ಪುರಸ್ಕೃತ ಕೊಂಕಣಿ ಸಾಹಿತಿ ದಾಮೋದರ ಮಾವಜೋ ಬಿಡುಗಡೆ ಮಾಡುವರು. ಕೇಂದ್ರ ಸಾಹಿತ್ಯ ಅಕಾಡೆಮಿ, ಕೊಂಕಣಿ ಭಾಷಾ ಸಲಹಾ ಮಂಡಳಿ ಸಂಚಾಲಕ ಕವಿ ಮೆಲ್ವಿನ್ ರೊಡ್ರಿಗಸ್ ಪುಸ್ತಕ ಪರಿಚಯ ಮಾಡಲಿದ್ದು, ವಿಶನ್ ಕೊಂಕಣಿ ಪ್ರವರ್ತಕರೂ, ಅನಿವಾಸಿ ಭಾರತೀಯ ಉದ್ಯಮಿ ಹಾಗೂ ದಾನಿ […]

LATEST NEWS

ಸೈಂಟ್ ಅಲೋಶಿಯಸ್ ಎಂ.ಬಿ.ಎ ವಿದ್ಯಾರ್ಥಿಗಳಿಗೆ ಫೇರ್‌ವೆಲ್‌

ಮಂಗಳೂರು: ಸೈಂಟ್ ಅಲೋಶಿಯಸ್ (ಡೀಮ್ಡ್ ಟು ಬಿ ಯುನಿವರ್ಸಿಟಿ) ಯ ಎಐಎಂಐಟಿ ಕೇಂದ್ರದ ಎಂ.ಬಿ.ಎ ವಿಭಾಗವು ಜೂನ್ 19ರಂದು  ಆರ್ಥರ್ ಶೆಣೈ ಆಡಿಯಟೋರಿಯಂನಲ್ಲಿ 2023–2025 ಎಂ.ಬಿ.ಎ ಬ್ಯಾಚ್ ವಿದ್ಯಾರ್ಥಿಗಳಿಗೆ ಪ್ರಾರ್ಥನಾ ಸೇವೆಯನ್ನು ಆಯೋಜಿಸಿತ್ತು. ಈ ಕಾರ್ಯಕ್ರಮ ವಿದ್ಯಾರ್ಥಿಗಳ ಮುಂದಿನ ಹಂತದ ಶುಭ ಕೋರುವ ಕಾರ್ಯಕ್ರಮವಾಗಿತ್ತು. ಡಾ. ಫಾ. ಮನುಜ್ ಎಸ್‌ಜೆ ಅವರು ಪ್ರಾರ್ಥನೆಯೊಂದಿಗೆ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಅವರು ಎಲ್ಲರನ್ನೂ ತಮ್ಮ ಆಶೀರ್ವಾದಗಳ ಕುರಿತು ಚಿಂತನೆ ಮಾಡಿಕೊಳ್ಳುವಂತೆ ಆಹ್ವಾನಿಸಿದರು. ಅವರ ಸಂದೇಶ ಧನ್ಯತೆಯ ಮಹತ್ವದ ಮೇಲೆ ಕೇಂದ್ರಿತವಾಗಿದ್ದು, […]

DAKSHINA KANNADA HOME LATEST NEWS

ದುಬೈನಲ್ಲಿ ಎಂಸಿಸಿ ಬ್ಯಾಂಕ್ ಎನ್ಆರ್‌ಐ ‘ಅಂತರ್ದೃಷ್ಟಿ ಮತ್ತು ಸಂವಾದ’ ಸಭೆ

ದುಬೈ: ಎಂಸಿಸಿ ಬ್ಯಾಂಕ್ ಜೂನ್ 15ರಂದು ದುಬೈಯ ಕರಾಮಾದ ವಿಜಿ ರೆಸ್ಟೋರೆಂಟ್‌ನಲ್ಲಿ ‘ಅಂತರ್ದೃಷ್ಟಿ ಮತ್ತು ಸಂವಾದ’ ಕಾರ್ಯಕ್ರಮವನ್ನು ಯಶಸ್ವಿಯಾಗಿ ಆಯೋಜಿಸಿತು. ಈ ಕಾರ್ಯಕ್ರಮವನ್ನು ದುಬೈನಲ್ಲಿ ನೆಲೆಸಿರುವ ಪ್ರಸಿದ್ಧ ಮಂಗಳೂರು ಮೂಲದ ವ್ಯಕ್ತಿ ಶ್ರೀ ಡಯಾನ್ ಡಿಸೋಜಾ ಇವರು ನಡೆಸಿದರು.ಕಾರ್ಯಕ್ರಮದಲ್ಲಿ ಮಾತನಾಡಿದ ಡಯಾನ್’ರವರು, ಪ್ರಸ್ತುತ ಬ್ಯಾಂಕಿಂಗ್ ಪರಿಸ್ಥಿತಿ ಮತ್ತು ಎಂಸಿಸಿ ಬ್ಯಾಂಕ್‌ನ ಸ್ಥಿತಿಗತಿಯ ಬಗ್ಗೆ ಪ್ರಸ್ತಾಪಿಸಿದರು. ಮಂಗಳೂರು ಮೂಲದ ಮತ್ತೊಬ್ಬ ಪ್ರಖ್ಯಾತ ಸಮುದಾಯ ನಾಯಕ ಹಾಗೂ ದಾಯ್ಜಿವರ್ಲ್ಡ್ ಮೀಡಿಯಾದ ವ್ಯವಸ್ಥಾಪಕ ನಿರ್ದೇಶಕ ವಾಲ್ಟರ್ ನಂದಳಿಕೆ, ಸಮುದಾಯವನ್ನು ಒಂದು ಗುರಿಯತ್ತ […]

DAKSHINA KANNADA HOME LATEST NEWS

ಲಂಚ ಸ್ವೀಕರಿಸುತ್ತಿದ್ದಾಗ ಲೋಕಾಯುಕ್ತ ರೇಡ್‌: ಸರ್ವೇಯರ್‌, ದಲ್ಲಾಳಿ ಬಂಧನ

ಮಂಗಳೂರು: ಜಮೀನಿನ ಸಿಂಗಲ್ ಸೈಟ್ ನಕ್ಷೆ ಹಾಗೂ ಪ್ರಾಪರ್ಟಿ ಕಾರ್ಡ್ ಮಾಡಿಸುವುದ ಕ್ಕಾಗಿ ಲಂಚ ಸ್ವೀಕರಿಸುವ ವೇಳೆ ಲೋಕಾಯುಕ್ತ ನಡೆಸಿದ ದಾಳಿಯ ವೇಳೆ ಸರ್ವೆಯರ್ ಮತ್ತು ದಲ್ಲಾಳಿಯನ್ನು ಲೋಕಾಯುಕ್ತ ಪೊಲೀಸರು ಬಂಧಿಸಿದ್ದಾರೆ. ತನ್ನ ಹಾಗೂ ತನ್ನ ತಾಯಿಯ ಹೆಸರಿನಲ್ಲಿರುವ ಕಂಕನಾಡಿ ಮತ್ತು ಬಜಾಲ್ ಗ್ರಾಮದ ಜಮೀನಿನ ಸಿಂಗಲ್ ಸೈಟ್ ನಕ್ಷೆ ಹಾಗೂ ಪ್ರಾಪರ್ಟಿ ಕಾರ್ಡ್ ಮಾಡಿಸಲು 2025ರ ಫೆಬ್ರವರಿಯಲ್ಲಿ ಮಂಗಳೂರು ಯು.ಪಿ.ಒ.ಆರ್ ಕಚೇರಿಗೆ ಅರ್ಜಿ ಸಲ್ಲಿಸಲಾಗಿತ್ತು. ಬಳಿಕ ಸರ್ವೆಯರ್ ನಂದೀಶ್ 2025ರ ಎಪ್ರಿಲ್‌ನಲ್ಲಿ ಸರ್ವೆ ನಡೆಸಿ ಲಂಚಕ್ಕೆ […]

DAKSHINA KANNADA HOME LATEST NEWS STATE UDUPI

ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲಾಧಿಕಾರಿ ಸೇರಿ ಹಲವರ ವರ್ಗಾವಣೆ

ಮಂಗಳೂರು : ದಕ್ಷಿಣ ಕನ್ನಡ ಜಿಲ್ಲೆಯ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಹಾಗೂ ಉಡುಪಿ ಡಿಸಿ ವಿದ್ಯಾಕುಮಾರಿ ಅವರನ್ನು ಸೇರಿ ಹಲವು  ಅವರನ್ನು ತಕ್ಷಣದಿಂದ ಜಾರಿಗೆ ಬರುವಂತೆ ವರ್ಗಾವಣೆ ಮಾಡಲಾಗಿದೆ. ಬೆಂಗಳೂರು ವಾಣಿಜ್ಯ ತೆರಿಗೆಗಳ ಹೆಚ್ಚುವರಿ ಆಯುಕ್ತ ದರ್ಶನ್ ಎಚ್ ವಿ ಅವರನ್ನು ದಕ್ಷಿಣ ಕನ್ನಡ ಜಿಲ್ಲೆಯ ಜಿಲ್ಲಾಧಿಕಾರಿಯಾಗಿ ನೇಮಿಸಲಾಗಿದೆ. ಮುಲ್ಲೈ ಮುಗಿಲನ್ ಅವರನ್ನು ಇನ್ಸ್‌ಪೆಕ್ಟರ್ ಜನರಲ್ ಆಫ್ ರಿಜಿಸ್ಟ್ರೇಷನ್ ಆಂಡ್ ಸ್ಟಾಂಪ್ಸ್ ಆಯುಕ್ತರಾಗಿ ವರ್ಗಾವಣೆ ಮಾಡಲಾಗಿದೆ. ದಕ್ಷಿಣ ಕನ್ನಡ ಜಿಲ್ಲೆಯ ನೂತನ ಜಿಲ್ಲಾಧಿಕಾರಿಯಾಗಿರುವ ದರ್ಶನ್ ಎಚ್‌ವಿ ವಾಣಿಜ್ಯ […]

DAKSHINA KANNADA HOME LATEST NEWS

ಪುತ್ತೂರು ಶಾಸಕ ಹಾರೆ ಹಿಡಿದ ಎಫೆಕ್ಟ್‌: ಮಾಣಿ- ಸಂಪಾಜೆ ಹೆದ್ದಾರಿ ಚರಂಡಿ ದುರಸ್ಥಿ ಆರಂಭ

ಪುತ್ತೂರು: ಭಾನುವಾರದಂದು ಪುತ್ತೂರು ಶಾಅಕ ಅಶೋಕ್ ರೈ ಅವರು ಪುತ್ತೂರು ಉಪ್ಪಿನಂಗಡಿ ರಸ್ತೆಯ ಕೋಡಿಂಬಾಡಿ ಶಾಲೆಯ ಬಳಿ ಚರಂಡಿ ಇಲ್ಲದೆ ರಸ್ತೆ ಮೇಲೆ ಮಳೆ ನೀರು ಹರಿಯುತ್ತಿರುವುದನ್ನು ಗಮನಿಸಿ ಸ್ವಯಂ ಆಗಿ ಹಾರೆ ಹಿಡಿದು ಚರಂಡಿ ಬಿಡಿಸುವ ಕೆಲಸವನ್ನು ಮಾಡಿದ್ದು ಇದು ಸಾಮಾಜಿಕ ತಾಣದಲ್ಲಿ ವೈರಲ್ ಆಗಿತ್ತು. ರಸ್ತೆ ಬದಿ ಯಲ್ಲಿ ಚರಂಡಿಯಲ್ಲಿ ಹೂಳು ತುಂಬಿದ್ದು ಅದನ್ನು ತೆರವು ಮಾಡದ ವಿಚಾರ ಇಂಜಿನಿಯರ್ ಗಳ ಗಮನಕ್ಕೂ ಬರುವಂತಾಗಿತ್ತು. ಶಾಸಕರ ಈ ಕಾರ್ಯಕ್ಕೆ ಸಾರ್ವಜನಿಕರಿಂದ ಬಹಳ ಮೆಚ್ಚುಗೆ ವ್ಯಕ್ತವಾಗಿತ್ತು. […]

DAKSHINA KANNADA HOME

17 ಬಡ ವಿದ್ಯಾರ್ಥಿಗಳಿಗೆ ಶಾಸಕ ಅಶೋಕ್ ರೈ ಯವರಿಂದ ಪುಸ್ತಕ ವಿತರಣೆ

ಪುತ್ತೂರು: ಪುತ್ತೂರು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ವಿವಿಧ ಶಾಲೆಗಳಲ್ಲಿ ಕಲಿಯುತ್ತಿರುವ ಆರ್ಥಿಕ ಸಂಕಷ್ಟದಲ್ಲಿರುವ ಒಟ್ಟು 17 ಬಡ ವಿದ್ಯಾರ್ಥಿಗಳಿಗೆ ಬರೆಯುವ ಪುಸ್ತಕವನ್ನು ಶಾಸಕ ಅಶೋಕ್ ರೈ ಅವರು ನೀಡಿದ್ದಾರೆ. ತೀರಾ ಬಡತನದಲ್ಲಿರುವ ವಿದ್ಯಾರ್ಥಿಗಳ ಕಲಿಕೆಗೆ ನೆರವಾಗುವ ನಿಟ್ಟಿನಲ್ಲಿ ಶಾಸಕರು ತನ್ನ ಸ್ವಂತ‌ನಿಧಿಯಿಂದ ಪುಸ್ತಕವನ್ನು ನೀಡಿದ್ದಾರೆ. ಈ‌ಸಂಧರ್ಭದಲ್ಲಿ‌ಮಾತನಾಡಿದ ಶಾಸಕರು ತನ್ನ ಕ್ಷೇತ್ರದಲ್ಲಿ ಅನೇಕ ಸಂಕಷ್ಟದಲದಲಿರುವ ಕುಟುಂಬಗಳು, ಅನಾರೋಗ್ಯದಿಂದ ಮನೆ ಯಜಮಾನ ಕೆಲಸಕ್ಕೂ ಹೋಗಲಾರದೆ ಕಷ್ಟದಲ್ಲಿರುವ ಕುಟುಂಬದ ಮಕ್ಕಳಿಗೆ ಬರೆಯುವ ಪುಸ್ತಕವನ್ನು ನೀಡಲಾಗಿದೆ. ಬಡವರ ಮಕ್ಕಳು ಆರ್ಥಿಕ ಸಂಕಷ್ಟದ ಕಾರಣಕ್ಕೆ […]

INETRNATIONAL

ಸುದ್ದಿ ಓದುತ್ತಿರುವಾಗಲೇ ಇಸ್ರೇಲ್ ಕ್ಷಿಪಣಿ ದಾಳಿ: ಓಡಿಹೋದ ನಿರೂಪಕಿ

ಟೆಹ್ರಾನ್: ಸುದ್ದಿ ಓದುತ್ತಿರುವಾಗಲೇ ಇರಾನ್‌ನ ಸರ್ಕಾರಿ ಟಿವಿ ಕಟ್ಟಡದ ಮೇಲೆ ಇಸ್ರೇಲ್ ಕ್ಷಿಪಣಿ ದಾಳಿ ನಡೆಸಿದೆ. ಇದರಿಂದ ಗಾಬರಿಗೊಂಡ ನಿರೂಪಕಿ ಸ್ಥಳದಿಂದ ಓಡಿಹೋದ ವೀಡಿಯೋ ವೈರಲ್‌ ಆಗಿದೆ. https://x.com/clashreport/status/1934629208744960404?ref_src=twsrc%5Etfw%7Ctwcamp%5Etweetembed%7Ctwterm%5E1934629208744960404%7Ctwgr%5Ec0873475d70c17a849d8b81c0c49113abe32d823%7Ctwcon%5Es1_&ref_url=https%3A%2F%2Fadmin.varthabharati.in%2Fmain.jsp ಇಸ್ರೇಲ್  ಮತ್ತು ಇರಾನ್ ನಡುವೆ ಸಂಘರ್ಷ ಪ್ರಾರಂಭವಾದ ನಾಲ್ಕನೇ ದಿನ ಈ ಘಟನೆ ನಡೆದಿದೆ. ಎರಡೂ ದೇಶಗಳ ನಡುವೆ ದಾಳಿಗಳು ಹೆಚ್ಚಾಗುತ್ತಿವೆ.  ಇರಾನ್ನ ರಾಜಧಾನಿ ಟೆಹ್ರಾನ್ ಮೇಲೆ ಇಸ್ರೇಲ್ ನಡೆಸಿದ ಇತ್ತೀಚಿನ ಕ್ಷಿಪಣಿ ದಾಳಿಯಲ್ಲಿ ಇಸ್ರೇಲ್ ತನ್ನ ಮೇಲೆ ದಾಳಿ ಮಾಡಿದೆ ಎಂದು ಇರಾನ್‌ನ ಸರ್ಕಾರಿ ಟಿವಿ […]

DAKSHINA KANNADA

ಪ್ರವಾಹ ಪೀಡಿತ ಪ್ರದೇಶದ ಶಾಶ್ವತ ಪರಿಹಾರಕ್ಕೆ ಕ್ರಮ:- ಶಾಸಕ ಕಾಮತ್

ಮಂಗಳೂರು: ಕಳೆದ ಕೆಲವು ದಿನಗಳಿಂದ ಸುರಿದ ಭಾರೀ ಮಳೆಗೆ ನಗರದ ಕೆಲವು ಪ್ರದೇಶಗಳಲ್ಲಿ ಪ್ರವಾಹ ಪರಿಸ್ಥಿತಿ ತಲೆದೋರಿ ಜನಜೀವನ ಅಸ್ತವ್ಯಸ್ತಗೊಂಡ ಹಿನ್ನಲೆಯಲ್ಲಿ ಇಂದು ಶಾಸಕ ವೇದವ್ಯಾಸ ಕಾಮತ್ ರವರು ಅಧಿಕಾರಿಗಳೊಂದಿಗೆ ಸ್ಥಳಕ್ಕೆ ಭೇಟಿ ನೀಡಿದರು. ಈ ವೇಳೆ ಎಕ್ಕೂರು, ತೋಚಿಲ ಕಟ್ಟಪುಣಿ, ರಾಷ್ಟ್ರೀಯ ಹೆದ್ದಾರಿ ಬಳಿಯ ವೈದ್ಯನಾಥ ನಗರ, ಜಪ್ಪಿನಮೊಗರುವಿನ ಗಣೇಶ ನಗರ, ರಾಜಕಾಲುವೆ ಸೇರುವ ನೇತ್ರಾವತಿ ತೀರದ ಕಡೇಕಾರು ಪ್ರದೇಶ, ಮೊದಲಾದ ಪ್ರದೇಶಗಳ, ನೆರೆ ಪರಿಸ್ಥಿತಿಗೆ ಕಾರಣ, ತುರ್ತಾಗಿ ನಡೆಯಬೇಕಿರುವ ಕಾರ್ಯ, ಭವಿಷ್ಯದಲ್ಲಿ ಪ್ರವಾಹ ಮರುಕಳಿಸದಂತೆ […]

DAKSHINA KANNADA HOME LATEST NEWS

ಬೆಳ್ತಂಗಡಿ: ಬೈಕ್ ಸಮೇತ ನೀರಿನಲ್ಲಿ ಕೊಚ್ಚಿ ಹೋಗಿ ಸಿನಿಮೀಯ ರೀತಿಯಲ್ಲಿ ಪಾರು

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಸವಣಾಲು ಗ್ರಾಮದ ಹಿತ್ತಿಲಪೇಲ ಕೂಡುಜಾಲು ಸಮೀಪದ ನದಿಯಲ್ಲಿ ಯುವಕರೀರ್ವರು ಬೈಕ್ ಸಮೇತ ನೀರಿನಲ್ಲಿ ಕೊಚ್ಚಿ ಹೋಗಿ ಸಿನಿಮೀಯ ರೀತಿಯಲ್ಲಿ ಬದುಕಿ ಉಳಿದ ಘಟನೆ ಆದಿತ್ಯವಾರ ನಡೆದಿದೆ. ಸವಣಾಲು ಗ್ರಾಮದ ಮಂಜದಬೆಟ್ಟುವಿನಿಂದ ಕುದುರೆಮುಖ ರಾಷ್ಟ್ರೀಯ ಉದ್ಯಾನವನ ವ್ಯಾಪ್ತಿಯ ಹಿತ್ತಿಲಪೇಲ ಪ್ರದೇಶವನ್ನು ಸಂಪರ್ಕಿಸುವ ಕೂಡುಜಾಲು ಎಂಬಲ್ಲಿ ಹರಿಯುತ್ತಿರುವ ಹಿತ್ತಿಲಪೇಲ ಪ್ರದೇಶದ ಕೆಳಗಿನ ಪೇಲ ಎಂಬಲ್ಲಿನ ನಿವಾಸಿ ಕರಿಯ ಮಲೆಕುಡಿಯ ಎಂಬವರ ಮಗ ಸತೀಶ್ ಮತ್ತು ಸಹ ಸವಾರ ಸುಳ್ಯೋಡಿ ನಿವಾಸಿ ಸಂಜೀವ […]