ಮಂಗಳೂರು ಕ್ರೈಸ್ತರಿಂದ ಜಗದ್ಗುರು ಪೋಪ್ ಫ್ರಾನ್ಸಿಸ್‌ಗೆ ನುಡಿನಮನ
ಮಂಗಳೂರು: ಮಂಗಳೂರು ಧರ್ಮಪ್ರಾಂತ್ಯದ ವತಿಯಿಂದ ಕೆಥೋಲಿಕರ ಪರಮೋಚ್ಛ ಜಗದ್ಗುರು ಪೋಪ್ ಫ್ರಾನ್ಸಿಸ್ ಅವರಿಗೆ ಶ್ರದ್ಧಾಂಜಲಿ ಸಭೆ ಶುಕ್ರವಾರ ನಗರದ ಮಿಲಾಗ್ರಿಸ್ ಚರ್ಚ್ ವಠಾರದಲ್ಲಿ ನಡೆಸಲಾಯಿತು. ಮಂಗಳೂರು ಬಿಷಪ್ ಅ.ವಂ.ಡಾ. ಪೀಟರ್ ಪಾವ್ಲ್ ಸಲ್ಡಾನ್ಹಾ ಅವರು ಶ್ರದ್ದಾಂಜಲಿ ಅರ್ಪಿಸಿ ಮಾತನಾಡಿ, ಪೋಪ್ ಫ್ರಾನ್ಸಿಸ್ ಅವರು ಜಗತ್ತಿಗೆ ಬೆಳಕಾಗಿದ್ದಾರೆ. ಮಕ್ಕಳು, ಯುವಕರು, ಬಡವರು, ದೀನರು ಮತ್ತು ವಲಸಿಗರಿಗೆ ಹತ್ತಿರವಾಗಿದ್ದರು. ಪೋಪ್ ಫ್ರಾನ್ಸಿಸ್ ನಮಗೆ ಸಹೋದರತ್ವವನ್ನು ಕಲಿಸಿದ್ದಾರೆ ಎಂದರು. ಆಳ್ವಾಸ್ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷ ಡಾ. ಎಂ. ಮೋಹನ್ ಆಳ್ವ ಮಾತನಾಡಿ, […]