ಕಡಬ: ಪೋಲ್ಯಾಂಡ್ನಲ್ಲಿ ಕೆಲಸ ಕೊಡಿಸುತ್ತೇನೆಂದು ದಂಪತಿಯಿಂದ ₹ 5 ಲಕ್ಷ ದೋಖಾ
ಕಡಬ: ಪೋಲೆಂಡ್ ದೇಶದಲ್ಲಿ ಉದ್ಯೋಗ ವೀಸಾ ಕಲ್ಪಿಸುವುದಾಗಿ ನಂಬಿಸಿ ವ್ಯಕ್ತಿಯೊಬ್ಬರಿಂದ 4.50 ಲಕ್ಷ ರೂ. ಹಣ ಪಡೆದು ವಂಚನೆ ನಡೆಸಿದ ಆರೋಪದಡಿ ಬೆಳ್ತಂಗಡಿ ತಾಲೂಕಿನ ದಂಪತಿ ವಿರುದ್ಧ ಕಡಬ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಕಡಬ ತಾಲೂಕಿನ ಕೋಡಿಂಬಾಳ ಗ್ರಾಮದ ಮನೋಜ್ ಎಂಬುವವರು ವಿದೇಶದಲ್ಲಿ ಉದ್ಯೋಗ ಹುಡುಕುತ್ತಿದ್ದರು. ಈ ವೇಳೆ ಬೆಳ್ತಂಗಡಿ ತಾಲೂಕು ರೇಖ್ಯಾ ಗ್ರಾಮದ ಇಂಜಿರ ನಿವಾಸಿಗಳಾದ ಪರಂಬಿಲ್ ಜೋಸೆಫ್ ಮನೋಜ್ ಹಾಗೂ ಅವರ ಪತ್ನಿ ಸ್ಮಿತಾ ಮನೋಜ್ ಎಂಬವರ ಪರಿಚಯವಾಗಿದೆ. ಈ ವೇಳೆ “ಪೋಲೆಂಡ್ […]










