Tag: ಕೆನರಾಟಿವಿ

LATEST NEWS

ಜನರ ಸೇವೆಗಾಗಿ ಅಧಿಕಾರದ ಬಳಕೆ ಅಭಿನಂದನೆ ಸ್ವೀಕರಿಸಿ ನೂತನ ವಿ.ಪ. ಸದಸ್ಯ ಪಿ.ವಿ. ಮೋಹನ್

ಮಂಗಳೂರು,: ಜನಸೇವೆಗೆ ಅಧಿಕಾರ ಅತ್ಯಗತ್ಯ. ನನಗೆ ದೊರೆತಿರುವ ಈ ಅಧಿಕಾರವನ್ನು ಜನರ ಕಲ್ಯಾಣಕ್ಕಾಗಿ ಮತ್ತು ಅವರ ಕೆಲಸಗಳಿಗಾಗಿ ಬಳಸುತ್ತೇನೆಯೇ ಹೊರತು ವೈಯಕ್ತಿಕ ಹಿತಾಸಕ್ತಿಗಲ್ಲ” ಎಂದು ನೂತನ ವಿಧಾನಪರಿಷತ್ ಸದಸ್ಯರಾದ ಪಿ.ವಿ. ಮೋಹನ್ ತಿಳಿಸಿದರು. ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಆಯೋಜಿಸಲಾಗಿದ್ದ ಅಭಿನಂದನಾ ಸಮಾರಂಭದಲ್ಲಿ ಸನ್ಮಾನ ಸ್ವೀಕರಿಸಿ ಅವರು ಮಾತನಾಡಿದರು. ರಾಜಕೀಯ ಆದರ್ಶಗಳ ಹಾದಿ: “ನಾನು ಆಸ್ಕರ್ ಫರ್ನಾಂಡಿಸ್, ಜನಾರ್ದನ ಪೂಜಾರಿ ಮತ್ತು ವೀರಪ್ಪ ಮೊಯ್ಲಿ ಅವರಂತಹ ಹಿರಿಯ ನಾಯಕರ ಮಾರ್ಗದರ್ಶನ ಹಾಗೂ ರಾಜಕೀಯ ಆದರ್ಶಗಳನ್ನು ಪಾಲಿಸುತ್ತಾ […]

HOME LATEST NEWS STATE

ನನಗೂ‌ ಡಿಕೆಶಿಗೂ ಯಾವುದೇ ವ್ಯವಹಾರಿಕ ಸಂಬಂಧವಿಲ್ಲ ಧರ್ಮಸ್ಥಳದಲ್ಲಿ ಬಿ.ವೈ. ವಿಜಯೇಂದ್ರ

ಮಂಗಳೂರು, ಧರ್ಮಸ್ಥಳ ಜೂನ್ 26: ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಅವರು ಧರ್ಮಸ್ಥಳ ಶ್ರೀ ಮಂಜುನಾಥ ಸ್ವಾಮಿಯ ದರ್ಶನ ಪಡೆದು ವಿಶೇಷ ಪೂಜೆ ಸಲ್ಲಿಸಿದರು. ಬಳಿಕ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಅಡ್ಡಮತದಾನದ ಹಿಂದೆ ತಾವಿಲ್ಲ. ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರೊಂದಿಗೆ ಯಾವುದೇ ವ್ಯವಹಾರಿಕ ಅಥವಾ ಆತ್ಮೀಯ ಸಂಬಂಧವಿದೆ ಎಂಬ ಆರೋಪವನ್ನು ವಿಜಯೇಂದ್ರ ಇದೇ ವೇಳೆ ತಳ್ಳಿಹಾಕಿದರು. ಕಳೆದ ನಾಲ್ಕು ದಿನಗಳಿಂದ ದೆಹಲಿಯಲ್ಲಿ ಪಕ್ಷದ ಹಿರಿಯ ನಾಯಕರನ್ನು ಭೇಟಿ ಮಾಡಿದ್ದೇನೆ. ಅಲ್ಲಿಂದ ಮಂಗಳೂರಿಗೆ ಆಗಮಿಸಿ ಧರ್ಮಸ್ಥಳದಲ್ಲಿ ದೇವರ […]

DAKSHINA KANNADA HOME LATEST NEWS NATIONAL

ಮಂಗಳೂರಿನಲ್ಲಿ ಆನ್‌ ಈವ್ನಿಂಗ್‌ ವಿತ್‌ ಶಾರುಖ್‌ ಖಾನ್: ರೋಹನ್ ಕಾರ್ಪೊರೇಶನ್ ‘ರೋಹನ್ ಮರೀನಾ ವನ್’ ಅನಾವರಣ

ಮಂಗಳೂರು: ರೋಹನ್ ಕಾರ್ಪೊರೇಶನ್ ಆಯೋಜಿಸಿದ್ದ “ಆನ್‌ ಈವ್ನಿಂಗ್‌ ವಿತ್‌ ಶಾರುಖ್‌ ಖಾನ್” ಎಂಬ ವಿಶೇಷ ಕಾರ್ಯಕ್ರಮ ಅದ್ದೂರಿಯಾಗಿ ಮಂಗಳೂರಿನ ಅಡ್ಯಾರ್ ಗಾರ್ಡನ್‌ನಲ್ಲಿ ಗುರುವಾರ ಸಂಜೆ ನಡೆಯಿತು. ಈ ಸಮಾರಂಭದಲ್ಲಿ ರೋಹನ್ ಕಾರ್ಪೊರೇಶನ್ ಐಷಾರಾಮಿ ಸಮುದ್ರತೀರ ವಸತಿ ಯೋಜನೆಯಾದ “ರೋಹನ್ ಮರೀನಾ ವನ್’ ಅನ್ನು ನಟ ಶಾರುಖ್ ಅನಾವರಣಗೊಳಿಸಿದರು. ನಂತರ ಮಾತನಾಡಿ ಮಂಗಳೂರು ನಗರದ ಆತಿಥ್ಯ, ಸಂಸ್ಕೃತಿ ಹಾಗೂ ವೇಗವಾಗಿ ಬೆಳೆಯುತ್ತಿರುವ ಅಭಿವೃದ್ಧಿಯನ್ನು ಶ್ಲಾಘಿಸಿದರು. ಜೊತೆಗೆ ರೋಹನ್‌ ಮರಿನಾ ಒನ್‌ ಉತ್ತಮ ರೀತಿಯಲ್ಲಿ ನಿರ್ಮಾಣಗೊಂಡಿದ್ದು, ಎಲ್ಲಾ ಸೌಕರ್ಯಗಳೊಂದಿಗೆ ಆಕರ್ಷಕವಾಗಿದೆ […]

LATEST NEWS

ಮೆಸ್ಕಾಂ ಖಾಸಗೀಕರಣ ವಿರೋಧಿಸಿ ಶಾಸಕ ವೇದವ್ಯಾಸ ಕಾಮತ್‌ಗೆ ವಿದ್ಯುತ್ ನೌಕರರ ಒಕ್ಕೂಟದಿಂದ ಮನವಿ

ಮಂಗಳೂರು:ಮೆಸ್ಕಾಂ ವ್ಯಾಪ್ತಿಯಲ್ಲಿ ಸಮಾನಾಂತರ ವಿದ್ಯುತ್ ಪರವಾನಿಗೆಗಾಗಿ ಟಾಟಾ ಪವರ್ ಕಾರ್ಪೊರೇಷನ್ ಸಲ್ಲಿಸಿರುವ ಅರ್ಜಿಯನ್ನು ರದ್ದುಪಡಿಸಲು ಹಾಗೂ ವಿದ್ಯುತ್ ಕ್ಷೇತ್ರದ ಖಾಸಗೀಕರಣ ತಡೆಗಟ್ಟಲು ಕೋರಿ ವಿದ್ಯುತ್ ನೌಕರರ ಒಕ್ಕೂಟದ ಪದಾಧಿಕಾರಿಗಳು ಮಂಗಳೂರು ನಗರ ದಕ್ಷಿಣದ ಶಾಸಕ ಡಿ. ವೇದವ್ಯಾಸ ಕಾಮತ್ ಅವರಿಗೆ ಮನವಿ ಸಲ್ಲಿಸಿದರು. ಟಾಟಾ ಪವರ್ ಕಾರ್ಪೋರೇಷನ್ ಲಿಮಿಟೆಡ್ ಸಂಸ್ಥೆಯು ಮೆಸ್ಕಾಂ ವ್ಯಾಪ್ತಿಯ ದಕ್ಷಿಣ ಕನ್ನಡ, ಉಡುಪಿ ಹಾಗೂ ಶಿವಮೊಗ್ಗ ಜಿಲ್ಲೆಗಳ ಮಹಾನಗರ ಪಾಲಿಕೆ, ನಗರಸಭೆಗಳಲ್ಲಿ ಸಮಾನಾಂತರ ವಿದ್ಯುತ್ ವಿತರಣಾ ಪರವಾನಿಗೆಗಾಗಿ ಅರ್ಜಿ ಸಲ್ಲಿಸಿದ್ದು, ನಗರವನ್ನು ಕೇಂದ್ರವಾಗಿಟ್ಟುಕೊಂಡು […]

LATEST NEWS

ಮಾಣಿಲ ಕಾಮಜಲು ಫ್ರೆಂಡ್ಸ್ ಕ್ಲಬ್ (KFC) ದಶಮಾನೋತ್ಸವ: ಜೂನ್ 28ಕ್ಕೆ ಉಚಿತ ಆಂಬುಲೆನ್ಸ್ ಲೋಕಾರ್ಪಣೆ

ವಿಟ್ಲ: ಸಾಮಾಜಿಕ, ಸಾಂಸ್ಕೃತಿಕ ಹಾಗೂ ಸಮಾಜಮುಖಿ ಚಿಂತನೆಗಳೊಂದಿಗೆ ಮುನ್ನಡೆಯುತ್ತಿರುವ ಮಾಣಿಲದ ಪ್ರತಿಷ್ಠಿತ ಸಂಘಟನೆ ಕಾಮಜಲು ಫ್ರೆಂಡ್ಸ್ ಕ್ಲಬ್ (KFC) (ರಿ.) ಇದರ ಹತ್ತನೇ ವರ್ಷದ ದಶಮಾನೋತ್ಸವದ ಸವಿನೆನಪಿಗಾಗಿ, ಸಂಸ್ಥೆಯ ಕನಸಿನ ಯೋಜನೆಯಾದ ಉಚಿತ/ತುರ್ತು “ಆಂಬುಲೆನ್ಸ್ ಲೋಕಾರ್ಪಣೆ” ಹಾಗೂ ಬೃಹತ್ ಸಭಾ ಸಮಾರಂಭವು ಜೂನ್ 28ರ ಭಾನುವಾರದಂದು ಶ್ರೀ ಕ್ಷೇತ್ರ ಕುಕ್ಕಾಜೆಯಲ್ಲಿ ಅತ್ಯಂತ ವೈಭವದಿಂದ ಜರುಗಲಿದೆ. ಕಳೆದ ಹತ್ತು ವರ್ಷಗಳಿಂದ ಮಾಣಿಲ ಪರಿಸರದಲ್ಲಿ ಹಲವಾರು ಸಮಾಜಮುಖಿ ಕಾರ್ಯಕ್ರಮಗಳ ಮೂಲಕ ಗುರುತಿಸಿಕೊಂಡಿರುವ ಕಾಮಜಲು ಫ್ರೆಂಡ್ಸ್ ಕ್ಲಬ್, ಇದೀಗ ಸ್ಥಳೀಯ ಸಾರ್ವಜನಿಕರ […]

LATEST NEWS

ವಿಟ್ಲ ಸೈಂಟ್ ರೀಟಾ ವಿದ್ಯಾಸಂಸ್ಥೆಯಲ್ಲಿ ವಿದ್ಯಾರ್ಥಿ ಮಂತ್ರಿಮಂಡಲ ಪದಗ್ರಹಣ

ವಿಟ್ಲ: ಸೈಂಟ್ ರೀಟಾ ವಿದ್ಯಾ ಸಂಸ್ಥೆಯ 2026-27ನೇ ಶೈಕ್ಷಣಿಕ ವರ್ಷದ ವಿದ್ಯಾರ್ಥಿ ಮಂತ್ರಿಮಂಡಲ ಪದಗ್ರಹಣ ಸಮಾರಂಭವು ಜೂನ್ 25ರಂದು ಶಾಲಾ ಸಭಾಂಗಣದಲ್ಲಿ ವಿಜೃಂಭಣೆಯಿಂದ ನಡೆಯಿತು.ಕಾರ್ಯಕ್ರಮದ ಮುಖ್ಯ ಅತಿಥಿಯಾಗಿ ಪುತ್ತೂರಿನ ಸಂತ ಫಿಲೋಮಿನಾ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲರಾದ ವಂದನೀಯ ಅಶೋಕ್ ರಾಯನ್ ಕ್ರಾಸ್ತಾ ಭಾಗವಹಿಸಿದ್ದರು.ಈ ಸಂದರ್ಭದಲ್ಲಿ ಮಾತನಾಡಿದ ಅವರು, “ವಿದ್ಯಾರ್ಥಿ ದೆಸೆಯಲ್ಲೇ ನಾಯಕತ್ವ ಗುಣ, ಸೇವಾ ಮನೋಭಾವ ಹಾಗೂ ಜವಾಬ್ದಾರಿಯ ಮಹತ್ವವನ್ನು ಅರಿತುಕೊಳ್ಳುವುದು ಅಗತ್ಯ” ಎಂದು ವಿದ್ಯಾರ್ಥಿಗಳಿಗೆ ಕಿವಿಮಾತು ಹೇಳಿದರು.ಶಾಲಾ ಸಂಚಾಲಕರಾದ ವಂದನೀಯ ಮೈಕೆಲ್ ಲೋಬೊ ಅವರು […]

HOME LATEST NEWS

MCC ಬ್ಯಾಂಕ್‌ನಿಂದ ₹1,535 ಕೋಟಿ ವ್ಯವಹಾರ: 22 ನೇ ಶಾಖೆ ದೇರಳಕಟ್ಟೆ & 23ನೇ ಶಾಖೆ ಕಟಪಾಡಿಯಲ್ಲಿ ಉದ್ಘಾಟನೆ

ಮಂಗಳೂರು: 114 ವರ್ಷಗಳ ಸೇವೆಯನ್ನು ಪೂರ್ಣಗೊಳಿಸಿರುವ ಎಂಸಿಸಿ ಬ್ಯಾಂಕ್ ಲಿಮಿಟೆಡ್, 31 ಮಾರ್ಚ್ 2026ಕ್ಕೆ ಅಂತ್ಯಗೊಂಡ ಹಣಕಾಸು ವರ್ಷದಲ್ಲಿ ಎಲ್ಲಾ ಪ್ರಮುಖ ವ್ಯವಹಾರ ಕ್ಷೇತ್ರಗಳಲ್ಲಿ ಗಮನಾರ್ಹ ಪ್ರಗತಿಯನ್ನು ಸಾಧಿಸಿದೆ ಎಂದು ಸಹಕಾರ ರತ್ನ ಪುರಸ್ಕೃತ ಹಾಗೂ ಬ್ಯಾಂಕಿನ ಅಧ್ಯಕ್ಷರಾದ ಅನಿಲ್ ಲೋಬೊ ಅವರು ತಿಳಿಸಿದ್ದಾರೆ. ಈ ಬಗ್ಗೆ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಬ್ಯಾಂಕ್ ಒಟ್ಟು ವ್ಯವಹಾರ ವಹಿವಾಟಿನಲ್ಲಿ 22.89% ಬೆಳವಣಿಗೆಯೊಂದಿಗೆ ರು. 1535 ಕೋಟಿ ಮೈಲಿಗಲ್ಲನ್ನು ತಲುಪಿದೆ. ಬ್ಯಾಂಕಿನ ನಿವ್ವಳ ಮೌಲ್ಯ ರು. 83.76 ಕೋಟಿಯಿಂದ ರು. […]

DAKSHINA KANNADA HOME LATEST NEWS

ಬೆಳ್ತಂಗಡಿ: ಅಪ್ರಾಪ್ತೆಯ ಮೇಲೆ ಇಬ್ಬರು ಅಪ್ರಾಪ್ತರಿಂದ ಅತ್ಯಾಚಾರ- FIR

ಬೆಳ್ತಂಗಡಿ: ಇಲ್ಲಿನ ವೇಣೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಅಪ್ರಾಪ್ತೆಯ ಮೇಲೆ ಇಬ್ಬರು ಅಪ್ರಾಪ್ತರು ಲೈಂಗಿಕ ದೌರ್ಜನ್ಯ ಎಸಗಿದ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ಸದ್ಯ ಈ ಬಗ್ಗೆ ಅಪ್ರಾಪ್ತೆಯ ತಂದೆ ಪೊಲೀಸ್‌ ಠಾಣೆಗೆ ದೂರು ನೀಡಿದ್ದಾರೆ. ಪ್ರಕರಣದ ವಿವರ 2023ರಲ್ಲಿ ಬೆಳ್ತಂಗಡಿಯಲ್ಲಿರುವ ಡ್ಯಾಂ ಒಂದರ ಬಳಿಯಿರುವ ಕಟ್ಟಡಕ್ಕೆ ಅಪ್ರಾಪ್ತ ಬಾಲಕಿಯನ್ನು ಆಕೆಯ ಸಂಬಂಧಿ ಅಪ್ರಾಪ್ತ ಹಾಗೂ ಆತನ ಸ್ನೇಹಿತ ಕರೆದುಕೊಂಡು ಹೋಗಿದ್ದರು. ಅಲ್ಲಿ ಆಕೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿ ಬಾಲಕಿಗೆ ಜೀವಬೆದರಿಕೆ ಒಡ್ಡಿದ್ದಾರೆ. ಈ ಬಗ್ಗೆ […]

DAKSHINA KANNADA HOME LATEST NEWS

ಸುರತ್ಕಲ್‌ನಲ್ಲಿ ಅಪ್ರಾಪ್ತೆ ಗರ್ಭಿಣಿ ಡೆತ್‌ನೋಟ್‌ ಬರೆದಿಟ್ಟು ಸಾವು- ಆರೋಪಿ ಅನೀಶ್‌ಗಾಗಿ ಶೋಧ

ಮಂಗಳೂರು: ಪ್ರೀತಿಯ ಹೆಸರಿನಲ್ಲಿ ವಂಚನೆ ಹಾಗೂ ದೈಹಿಕ ಶೋಷಣೆಗೆ ಒಳಗಾಗಿದ್ದ ಅಪ್ರಾಪ್ತ ಬಾಲಕಿಯೊಬ್ಬಳು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಆಘಾತಕಾರಿ ಘಟನೆ ಮಂಗಳೂರು ಹೊರವಲಯದ  ಸುರತ್ಕಲ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ಯುವಕನ ವಿರುದ್ಧ ಪೊಲೀಸರು ಪೋಕ್ಸೋ ಸೇರಿದಂತೆ ಗಂಭೀರ ಕಾನೂನು ಸೆಕ್ಷನ್‌ಗಳ ಅಡಿಯಲ್ಲಿ ಎಫ್‌ಐಆರ್ ದಾಖಲಿಸಿಕೊಂಡಿದ್ದಾರೆ. ಡೆತ್ ನೋಟ್‌ನಲ್ಲಿ ಗಂಭೀರ ಆರೋಪ ಮೃತ ಬಾಲಕಿ ಏಪ್ರಿಲ್ 23 ರಂದು ಸಂಜೆ ಸುಮಾರು 4 ಗಂಟೆಗೆ ತನ್ನ ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ […]

LATEST NEWS

ಮಂಜನಾಡಿ ಭೀಕರ ಗುಡ್ಡ ಕುಸಿತ: ನೊಂದ ಅಶ್ವಿನಿ ಮನೆಗೆ ಶಾಸಕ ಕಿಶೋರ್ ಕುಮಾರ್ ಪುತ್ತೂರು ಭೇಟಿ; ನ್ಯಾಯದ ಹೋರಾಟದಲ್ಲಿ ಸದಾ ಜೊತೆಗಿರುವ ಅಭಯ

ಮಂಗಳೂರು: ಕಳೆದ ವರ್ಷ ಮಂಗಳೂರು ಸಮೀಪದ ಮಂಜನಾಡಿಯಲ್ಲಿ ಸಂಭವಿಸಿದ ಭೀಕರ ಗುಡ್ಡ ಕುಸಿತದಲ್ಲಿ ತನ್ನ ಇಡೀ ಪ್ರಪಂಚವನ್ನೇ ಕಳೆದುಕೊಂಡು, ಅತೀವ ಸಂಕಷ್ಟದಲ್ಲಿ ಜೀವನ ಸಾಗಿಸುತ್ತಿರುವ ನೊಂದ ಮಹಿಳೆ ಶ್ರೀಮತಿ ಅಶ್ವಿನಿ ಅವರ ಮನೆಗೆ ಉಡುಪಿ-ದಕ್ಷಿಣ ಕನ್ನಡ ಸ್ಥಳೀಯ ಸಂಸ್ಥೆಗಳ ಕ್ಷೇತ್ರದ ವಿಧಾನ ಪರಿಷತ್ ಸದಸ್ಯರಾದ ಶ್ರೀ ಕಿಶೋರ್ ಕುಮಾರ್ ಪುತ್ತೂರು ಅವರು ಇಂದು ಖುದ್ದಾಗಿ ಭೇಟಿ ನೀಡಿ ಸಾಂತ್ವನ ಹೇಳಿದರು. ಕರುಳು ಹಿಂಡುವ ಈ ದುರಂತದ ಬಳಿಕ ಚಿಂತಾಜನಕ ಪರಿಸ್ಥಿತಿಯಲ್ಲಿರುವ ಕುಟುಂಬಕ್ಕೆ ವೈಯಕ್ತಿಕವಾಗಿ ಹಾಗೂ ಸರ್ಕಾರದ ಮಟ್ಟದಲ್ಲಿ […]