Tag: ಕೆನರಾಟಿವಿನ್ಯೂಸ್‌

DAKSHINA KANNADA HOME LATEST NEWS

ಪುತ್ತೂರು: ಕೋರ್ಟ್‌ಗೆ ಹಾಜರಾಗದೇ ತಲೆಮರೆಸಿಕೊಂಡಿದ್ದ ಆರೋಪಿಯ ಬಂಧನ

ಪುತ್ತೂರು: 7 ವರ್ಷಗಳ ಹಿಂದೆ ಪ್ರಕರಣವೊಂದಕ್ಕೆ ಸಂಬಂಧಿಸಿ ಬಂಧಿತನಾಗಿ ಬಿಡುಗಡೆಗೊಂಡು ನ್ಯಾಯಾಲಯದ ವಿಚಾರಣೆಗೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಪುತ್ತೂರು ನಗರ ಪೊಲೀಸರು ಬಂಧಿಸಿದ್ದಾರೆ. ಸದ್ಯ ಆರೋಪಿಯನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ನ್ಯಾಯಾಂಗ ಬಂಧನ ವಿಧಿಸಲಾಗಿದೆ. ಆರೋಪಿಯನ್ನು ಕೊಡಗು ಜಿಲ್ಲೆಯ ಸೋಮವಾರ ಪೇಟೆ ನಿವಾಸಿ ಹನೀಫ್(55) ಎಂದು ಗುರುತಿಸಲಾಗಿದೆ. ಪ್ರಕರಣದ ವಿವರ  2018ರಲ್ಲಿ ನಡೆದ ಪ್ರಕರಣವೊಂದರಲ್ಲಿ ಈತನ ಬಂಧನವಾಗಿತ್ತು ಬಳಿಕ ಜಾಮೀನು ಪಡೆದು,  ನ್ಯಾಯಾಲಯದ ವಿಚಾರಣೆಗೆ ನ್ಯಾಯಾಲಯಕ್ಕೆ ಹಾಜರಾಗದೇ ತಲೆಮರೆಸಿಕೊಂಡಿದ್ದ. ಈತನನ್ನು ಕೊಡಗು ಜಿಲ್ಲೆಯ ಕುಶಾಲನಗರ ಎಂಬಲ್ಲಿ ಪತ್ತೆ ಮಾಡಿ […]

DAKSHINA KANNADA HOME LATEST NEWS

ಬಂಟ್ವಾಳ : ಅಡಿಕೆ ಕಳ್ಳನ ಬಂಧನ- ಆರೋಪಿಗೆ ನ್ಯಾಯಾಂಗ ಬಂಧನ

ಬಂಟ್ವಾಳ : ಮಣಿನಾಲ್ಕೂರು ಗ್ರಾಮದ ಪೂಂಜೂರು ಎಂಬಲ್ಲಿ ನಡೆದಿದ್ದ ಒಣ ಅಡಿಕೆ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿ ಓರ್ವ ಆರೋಪಿಯನ್ನು ಬಂಟ್ವಾಳ ಗ್ರಾಮಾಂತರ ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿಯನ್ನು ಸುಳ್ಯ ತಾಲೂಕಿನ ಪೈಚಾರು ನಿವಾಸಿ ಸತೀಶ್ (29) ಎಂದು ತಿಳಿದುಬಂದಿದೆ. ಮಣಿನಾಲ್ಕೂರು ಗ್ರಾಮದ ಪೂಂಜೂರು ಎಂಬಲ್ಲಿ ಜುಲೈ 3 ರಿಂದ 22 ರ ಅವಧಿಯಲ್ಲಿ ಸುಮಾರು 45 ಪ್ಲಾಸ್ಟಿಕ್ ಚೀಲದಲ್ಲಿದ್ದ 2.20 ಲಕ್ಷ ರೂ. ಮೌಲ್ಯದ ಒಣ ಅಡಿಕೆ ಕಳವಾಗಿರುವ ಬಗ್ಗೆ ಜುಲೈ 23 ರಂದು ಬಂಟ್ವಾಳ ಗ್ರಾಮಾಂತರ […]

DAKSHINA KANNADA HOME LATEST NEWS

ಮಳೆ ಹಿನ್ನೆಲೆ: ದ. ಕ ಜಿಲ್ಲೆಯ ಶಾಲೆ-ಪದವಿ ಪೂರ್ವ ಕಾಲೇಜಿಗೆ ಜು.17 ರಂದು ರಜೆ

ಮಂಗಳೂರು: ಭಾರೀ ಮಳೆ ಹಿನ್ನೆಲೆ ದ. ಕ ಜಿಲ್ಲೆಯ ಅಂಗನವಾಡಿ, ಪ್ರಾಥಮಿಕ ಹಾಗೂ ಪ್ರೌಢ ಶಾಲೆ,  ಪದವಿ ಪೂರ್ವ ಕಾಲೇಜು, ಸರ್ಕಾರಿ ಅನುದಾನಿತ ಮತ್ತು ಖಾಸಗಿ ವಿದ್ಯಾಸಂಸ್ಥೆಗಳಿಗೆ ನಾಳೆ (ಜುಲೈ 17) ರಂದು ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ರಜೆ ಘೋಷಿಸಿದ್ದಾರೆ.

DAKSHINA KANNADA HOME

ಬೆಂಗಳೂರು: ಸೈಂಟ್ ಜೋಸೆಫ್‌ ವಿಶ್ವವಿದ್ಯಾಲಯದ IT ಸಂಘಗಳ ಅಧಿಕಾರ ಸ್ವೀಕಾರ 2025-26

ಬೆಂಗಳೂರು: ಕಂಪ್ಯೂಟರ್ ಸೈನ್ಸ್ ವಿಭಾಗ, ಸೈಂಟ್ ಜೋಸೆಫ್‌ ವಿಶ್ವವಿದ್ಯಾಲಯವು, ತನ್ನ ಪ್ರತಿಷ್ಠಿತ ವಿದ್ಯಾರ್ಥಿ ಸಂಘಗಳಾದ ಸೈಬರ್ನೆಟಿಕ್ಸ್ ಅಸೋಸಿಯೇಷನ್ (ಯುಜಿ) ಮತ್ತು ಟೆಕ್ನೋಫೈಟ್ ಅಸೋಸಿಯೇಷನ್ (ಪಿಜಿ)ಗಳ ಉದ್ಘಾಟನೆ ಮತ್ತು ಅಧಿಕಾರ ಸ್ವೀಕಾರ ಸಮಾರಂಭವನ್ನು 9ನೇ ಜುಲೈ 2025ರಂದು, ಪಿಜಿ ಬ್ಲಾಕ್‌ನ ಕ್ಷೇವಿಯರ್ ಸಭಾಂಗಣದಲ್ಲಿ ನಡೆಸಿತು. ಸಮಾರಂಭದಲ್ಲಿ ವಂ. ಡೆನ್ಜಿಲ್ ಲೋಬೋ ಎಸ್.ಜೆ., ಶಾಲಾ ನಿರ್ದೇಶಕ, ಸ್ಕೂಲ್ ಆಫ್ ಐಟಿ; ಡಾ. ಎ.ಎಂ. ಬೋಜಮ್ಮ, ಡೀನ್, ಸ್ಕೂಲ್ ಆಫ್ ಐಟಿ; ಡಾ. ಬಿ.ಜಿ. ಪ್ರಶಾಂತಿ, ಮುಖ್ಯಸ್ಥರು, ಕಂಪ್ಯೂಟರ್ ಸೈನ್ಸ್ ವಿಭಾಗ; […]

DAKSHINA KANNADA HOME LATEST NEWS

ನೈತಿಕ ಪೊಲೀಸ್‌ಗಿರಿ ಮಾಡುವವರ ಬಾಲಕ್ಕೆ ಕತ್ತರಿ ಹಾಕಿ: ಪೊಲೀಸರಿಗೆ ಶಾಸಕ ಅಶೋಕ್‌ ರೈ ಸೂಚನೆ

ಪುತ್ತೂರು: ಬಿರುಮಲೆ ಬೆಟ್ಟಕ್ಕೆ ಬಂದಿದ್ದ ಯುವಕ-ಯುವತಿ ಮೇಲೆ ಕಿಡಿಗೇಡಿಗಳಿಂದ ನೈತಿಕ ಪೊಲೀಸ್ ಗಿರಿ ನಡೆದಿದೆ ಎಂಬ ವಿಚಾರ ನನ್ನ‌ಗಮನಕ್ಕೆ ಬಂದಿದ್ದು, ಆರೋಪಿತರ ವಿರುದ್ದ ಕಠಿಣ ಕ್ರಮ ಕೈಗೊಳ್ಳುವಂತೆ ಪುತ್ತೂರು ಶಾಸಕ ಅಶೋಕ್‌ ರೈ ಪೊಲೀಸರಿಗೆ ತಿಳಿಸಿದ್ದಾರೆ. ಈ ಬಗ್ಗೆ ಪತ್ರಿಕಾ ಹೇಳಿಕೆ ನೀಡಿರುವ ಅವರು ಘಟನೆಗೆ ಸಂಬಂಧಿಸಿ ಇಬ್ಬರು ದುಷ್ಕರ್ಮಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಕೆಲ‌ಸಮಯಗಳಿಂದ ನಿಂತು ಹೋಗಿದ್ದ ಈ ರೀತಿಯ ಕೆಟ್ಟ ಘಟನೆಗಳು ಪುತ್ತೂರಿನಲ್ಲಿ ನಡೆದಿದೆ. ಬಾಲ ಮುದುಡಿಕೊಂಡಿದ್ದ ಸಮಾಜಘಾತುಕ ಕಿಡಿಗೇಡಿಗಳ ಬಾಲ ಕತ್ತರಿಸುವ ಕೆಲಸ ಮಾಡಲಾಗುತ್ತದೆ. […]

DAKSHINA KANNADA HOME

ನಾಯಕತ್ವವು ಉತ್ತಮ ಗುಣ & ಪ್ರತಿಭೆಗಳನ್ನು ಹೊರತರುವ ಅವಕಾಶ: ರೆ. ಫಾ.ವಾಲ್ಟರ್ ಡಿಸೋಜಾ

ಮಂಗಳೂರು: ನಗರದ ಪಾದುವ ಪದವಿ ಪೂರ್ವ  ಕಾಲೇಜಿನ ವಿದ್ಯಾರ್ಥಿ ಸಂಘ ಉದ್ಘಾಟನೆ ಮತ್ತು ಪ್ರತಿಭಾ ದಿನ ಸಂತ ಸೆಬಾಸ್ಟಿಯನ್ ಹಾಲ್ ಬೆಂದೂರ್ ನಲ್ಲಿ ಜರಗಿತು.ಅಧ್ಯಕ್ಷತೆ ವಹಿಸಿದ್ದ ಪಾದುವ ಶಿಕ್ಷಣ ಸಂಸ್ಥೆಗಳ ಸಂಚಾಲಕರಾದ ರೆ .ಫಾ.ವಾಲ್ಟರ್ ಡಿಸೋಜಾ ಮಾತನಾಡಿ,  ನಾಯಕತ್ವವು  ಕೇವಲ ಸ್ಥಾನ ಅಥವಾ ಬಿರುದುಗಲಾಗಿರದೆ, ಅದು ಇತರರಲ್ಲಿ ಉತ್ತಮವಾದ ಗುಣ ಮತ್ತು ಪ್ರತಿಭೆಗಳನ್ನು ಹೊರತರುವ ಅವಕಾಶ ಎಂದು ಹೇಳಿದರು. ಮುಖ್ಯ ಅತಿಥಿಯಾದ ಲೆಸ್ಲಿ ನೋಯೆಲ್ ರೇಗೊ ಮಾತನಾಡಿ, ಕಾಲೇಜು ಜೀವನವೆಂದರೆ ವ್ಯಕ್ತಿತ್ವ ನಿರ್ಮಾಣಕ್ಕೆ ಅವಕಾಶ. ವಿದ್ಯಾರ್ಥಿಗಳು ಯಶಸ್ಸಿನ […]

DAKSHINA KANNADA HOME

ಪುತ್ತೂರು: ಪ್ರೀತಿಸಿ ವಂಚನೆಗೈದು ನಾಪತ್ತೆಯಾಗಿದ್ದ ಕೃಷ್ಣ ರಾವ್‌ ಅರೆಸ್ಟ್‌

ಪುತ್ತೂರು: ಯುವತಿಯೊಬ್ಬಳನ್ನು ಪ್ರೀತಿಸಿ ವಂಚನೆ ಮಾಡಿ, ಮಗುವಿನ ಜನನಕ್ಕೆ ಕಾರಣವಾಗಿದ್ದಲ್ಲದೇ ಠಾಣೆಯಲ್ಲಿ ಪ್ರಕರಣ ದಾಖಲಾಗುತ್ತಿದ್ದಂತೆ ತಲೆಮರೆಸಿಕೊಂಡಿದ್ದ ಆರೋಪಿ ಕೃಷ್ಣ ರಾವ್ ನನ್ನು ಇದೀಗ ಪೊಲೀಸರು ಬಂಧಿಸಿದ್ದಾರೆ. ಪೊಲೀಸರು ಆರೋಪಿ ಕೃಷ್ಣ ರಾವ್‌ನನ್ನು ಮೈಸೂರಿನ ಟೀನರಸೀಪುರದಲ್ಲಿ ವಶಕ್ಕೆ ಪಡೆದಿದ್ದಾರೆ. ಗರ್ಭಿಣಿಯಾದ ಬಳಿಕ ಸಂತ್ರಸ್ತ ಯುವತಿ ಗಂಡು ಮಗುವಿಗೆ ಜನ್ಮ ನೀಡಿದ್ದು, ಆತ ಕೈಕೊಟ್ಟಿದ್ದರಿಂದ ಕಂಗಾಲಾದ ಯುವತಿಯ ಮನೆಯವರು ಪೊಲೀಸರಿಗೆ ದೂರು ನೀಡಿದ್ದರು. ನಂತರ ಆತ ಬಂಧನದ ಭಯದಿಂದ ಎಸ್ಕೇಪ್ ಆಗಿದ್ದ. ಇದೀಗ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ. ಮೈಸೂರಿನಲ್ಲಿ ವಶಕ್ಕೆ […]

DAKSHINA KANNADA HOME LATEST NEWS

ಬಂಟ್ವಾಳ: ಸುಳ್ಳು ಸುದ್ದಿ ಪ್ರಸಾರ- ವೆಬ್‌ಸೈಟ್‌ ಮೇಲೆ ಪ್ರಕರಣ ದಾಖಲು

ಬಂಟ್ವಾಳ: ಸುಳ್ಳು ಸುದ್ದಿ ಪ್ರಸಾರ ಮಾಡಿದ ಆರೋಪದಲ್ಲಿ ವೆಬ್‌ಸೈಟ್ ವಿರುದ್ಧ ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಮಂಗಳವಾರ ಪ್ರಕರಣ ದಾಖಲಾಗಿದೆ. Gadinadadhwani.online ಎಂಬ ವೆಬ್‌ಸೈಟ್ “ಕರಾವಳಿಯಲ್ಲಿ ಮತ್ತೆ ಮುಂದುವರಿದ ತಲವಾರು ದಾಳಿ, ಸಜೀಪದಲ್ಲಿ ಕೆಲಸ ಬಿಟ್ಟು ಮನೆಗೆ ತೆರಳುತ್ತಿದ್ದ ಇಬ್ಬರು ಅಮಾಯಕ ಮುಸ್ಲಿಮರ ಮೇಲೆ ದಾಳಿ” ಎಂಬ ತಲೆಬರಹವಿರುವ ಸುಳ್ಳು ಸುದ್ದಿಯನ್ನು ಪ್ರಸಾರ ಮಾಡಿರುವುದು ಕಂಡುಬಂದಿರುತ್ತದೆ. ಸದ್ರಿ ಸುಳ್ಳು ಸುದ್ದಿಯನ್ನು ಪ್ರಸಾರ ಮಾಡಿ, ಸಾರ್ವಜನಿಕ ವಲಯದಲ್ಲಿ ಭಯಭೀತಿಯನ್ನುಂಟು ಮಾಡಿದ ವೆಬ್‌ಸೈಟ್ ವಿರುದ್ಧ ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ […]

DAKSHINA KANNADA HOME LATEST NEWS

ನೂತನ ಜಿಲ್ಲಾಧಿಕಾರಿಯಾಗಿ ದರ್ಶನ್ ಎಚ್‌ವಿ ಅಧಿಕಾರ ಸ್ವೀಕಾರ

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ನೂತನ ಜಿಲ್ಲಾಧಿಕಾರಿ ಗಳಾಗಿ ದರ್ಶನ್ ಎಚ್ ವಿ ಅವರು ಬುಧವಾರ ಸಂಜೆ ಅಧಿಕಾರ ಸ್ವೀಕರಿಸಿದರು. ಮಂಗಳೂರಿನ ನಿರ್ಗಮಿತ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್‌ ಅವರು ನೂತನ ಜಿಲ್ಲಾಧಿಕಾರಿಗೆ ಅಧಿಕಾರ ಹಸ್ತಾಂತರಿಸಿದರು.

DAKSHINA KANNADA HOME LATEST NEWS

ಮುಡಿಪು: ನೂತನ ಕಾರಾಗೃಹ  ನಿರ್ಮಾಣ- ಗೃಹ ಸಚಿವರ ಭೇಟಿ

ಮಂಗಳೂರು:  ಗೃಹ ಸಚಿವ ಡಾ.ಜಿ. ಪರಮೇಶ್ವರ್ ಅವರು  ಮುಡಿಪು ಕುರ್ನಾಡು ಸಮೀಪದಲ್ಲಿ ನಿರ್ಮಾಣಗೊಳ್ಳುತ್ತಿರುವ ನೂತನ ಜಿಲ್ಲಾ ಕಾರಾಗೃಹ ನಿರ್ಮಾಣ ಕಾಮಗಾರಿಯನ್ನು ಪರಿಶೀಲಿಸಿದರು. ನಿರ್ಮಾಣ ಹಂತದ ಕಟ್ಟಡ   ವೀಕ್ಷಿಸಿದ ಅವರು ಕಾಮಗಾರಿಗಳ ಮಾಹಿತಿ ಪಡೆದರು. ಕಾಮಗಾರಿಯನ್ನು ಉತ್ತಮ  ಗುಣಮಟ್ಟದಲ್ಲಿ ತ್ವರಿತಗತಿಯಲ್ಲಿ ನಡೆಸಿ ಆದಷ್ಟು ಬೇಗನೆ ಪೂರ್ಣಗೊಳಿಸಬೇಕು ಎಂದು ಅವರು ಸೂಚಿಸಿದರು. ಕಾರಾಗೃಹದ ಆವರಣ ಗೋಡೆ ಸೇರಿದಂತೆ ಅತ್ಯುನ್ನತ ಭದ್ರತಾ ವ್ಯವಸ್ಥೆ ನೂತನ ಕಾರಾಗೃಹ  ಸಂಕೀರ್ಣದಲ್ಲಿ ಅಳವಡಿಸಿಕೊಳ್ಳಬೇಕು ಎಂದು ಅವರು ತಿಳಿಸಿದರು.  ಕಾರಾಗೃಹ ಇಲಾಖೆ ಡಿಐಜಿ ದಿವ್ಯಶ್ರೀ ಅವರು ಸಚಿವರಿಗೆ […]

About Us

Lorem ipsum dol consectetur adipiscing neque any adipiscing the ni consectetur the a any adipiscing.

Email Us: [email protected]

Contact: +5-784-8894-678