DAKSHINA KANNADA
ಪಂಚಾಯತ್ ಸಭೆಯಲ್ಲಿ ತುಳು ಭಾಷೆ ಬಳಕೆಗೆ ಕಾನೂನಿನ ನಿರ್ಬಂಧವಿಲ್ಲ: ತುಳು ಸಾಹಿತ್ಯ ಅಕಾಡೆಮಿ ಅಧ್ಯಕ್ಷ ತಾರಾನಾಥ್ ಗಟ್ಟಿ ಕಾಪಿಕಾಡ್
ಮಂಗಳೂರು : ಗ್ರಾಮ ಪಂಚಾಯತ್ ಸಾಮಾನ್ಯ ಸಭೆಗಳಲ್ಲಿ ಜನಪ್ರತಿನಿಧಿಗಳು ಚರ್ಚಿಸುವ ಸಂಧರ್ಭದಲ್ಲಿ ತುಳುಭಾಷೆ ಬಳಕೆ ಮಾಡುವುದಕ್ಕೆ ಕಾನೂನಿನ ನಿಯಾಮನುಸಾರ ಯಾವುದೇ ನಿರ್ಬಂಧ ಇರುವುದಿಲ್ಲ ಎಂದು ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ ಅಧ್ಯಕ್ಷ ತಾರಾನಾಥ್ ಗಟ್ಟಿ ಕಾಪಿಕಾಡ್ ಪ್ರತಿಕ್ರಿಯಿಸಿದ್ದಾರೆ. ಕಾರ್ಕಳದ ಯಶಸ್ವಿ ನಾಗರಿಕ ಸೇವಾ ಸಂಘದ ಸಂಚಾಲಕ ಮುರಳೀಧರ ಎಂಬವರು ದ.ಕ. ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಅವರಿಗೆ ಮನವಿ ಸಲ್ಲಿಸಿ ಗ್ರಾಮ ಪಂಚಾಯತ್ ಸಾಮಾನ್ಯ ಸಭೆಯಲ್ಲಿ ಜನಪ್ರತಿನಿಧಿಗಳು ಮತ್ತು ಅಧಿಕಾರಿಗಳು ಚರ್ಚಿಸುವಾಗ ತುಳು ಭಾಷೆ ಬಳಕೆ ಮಾಡದಂತೆ […]