ಮಂಗಳೂರಿನ ಆಲ್ಬುಕರ್ಕ್ ಹೆಂಚಿನ ಕಾರ್ಖಾನೆಗೆ ಬೆಂಕಿ: ಅಪಾರ ನಷ್ಟ
ಮಂಗಳೂರು: ನಗರದ ಹೊಯ್ಗೆಬಜಾರ್ನಲ್ಲಿರುವ ಆಲ್ಬುಕರ್ಕ್ ಹೆಂಚಿನ ಕಾರ್ಖಾನೆಗೆ ಮಂಗಳವಾರ ಮುಂಜಾನೆ ಆಕಸ್ಮಿಕವಾಗಿ ಬೆಂಕಿ ಹೊತ್ತಿಕೊಂಡಿದ್ದು, ಹೆಂಚುಗಳು ಹಾಗೂ ಇಟ್ಟಿಗೆಗಳು ಹಾನಿಗೊಳಗಾಗಿವೆ. ಕಟ್ಟಡವೂ ಭಾಗಶಃ ಸುಟ್ಟುಹೋಗಿದೆ. ತಕ್ಷಣವೇ ಸ್ಥಳಕ್ಕೆ ಧಾವಿಸಿ ಬೆಂಕಿ ನಂದಿಸುವ ಕಾರ್ಯಾಚರಣೆ ಆರಂಭಿಸಿದವು. ಬೆಂಕಿ ಭಾರಿ ಪ್ರಮಾಣದಲ್ಲಿ ವ್ಯಾಪಿಸಿದ್ದರಿಂದ ಪಾಂಡೇಶ್ವರ ಅಗ್ನಿಶಾಮಕ ಠಾಣೆಯ ಎರಡು, ಕದ್ರಿ ಅಗ್ನಿಶಾಮಕ ಠಾಣೆ ಹಾಗೂ ಎಂಸಿಎಫ್ನ ತಲಾ ಒಂದು ಅಗ್ನಿಶಾಮಕ ವಾಹನ ಬಳಸಿ ಬೆಂಕಿಯನ್ನು ನಂದಿಸಲಾಯಿತು. ಬೆಂಕಿ ಹೊತ್ತಿಕೊಳ್ಳಲು ಕಾರಣ ಏನು ಎಂದು ಗೊತ್ತಾಗಿಲ್ಲ. ಕಾರ್ಖಾನೆಯಲ್ಲಿ ದಾಸ್ತಾನಿದ್ದ ಹೆಂಚುಗಳು ಹಾಗೂ […]









