ಮಿಲಾಗ್ರಿಸ್ ಪದವಿ ಪೂರ್ವ ಕಾಲೇಜಿನಲ್ಲಿ ವಿದ್ಯಾರ್ಥಿ ಪರಿಷತ್ತು ಉದ್ಘಾಟನೆ: ನಾಯಕತ್ವದ ಗುಣ ಬೆಳೆಸಿಕೊಳ್ಳಲು ಗಣ್ಯರ ಕರೆ.ಅನಿಲ್ ಲೋಬೊ
ಮಂಗಳೂರು : ಹಂಪನಕಟ್ಟೆಯ ಮಿಲಾಗ್ರಿಸ್ ಪದವಿ ಪೂರ್ವ ಕಾಲೇಜಿನ 2026-2027 ನೇ ಶೈಕ್ಷಣಿಕ ಸಾಲಿನ ವಿದ್ಯಾರ್ಥಿ ಪರಿಷತ್ತಿನ ಉದ್ಘಾಟನಾ ಸಮಾರಂಭವು ಕಾಲೇಜಿನ ಸಭಾಂಗಣದಲ್ಲಿ ವಿಜೃಂಭಣೆಯಿಂದ ಜರುಗಿತು. ವಿದ್ಯಾರ್ಥಿಗಳಲ್ಲಿ ನಾಯಕತ್ವದ ಗುಣ, ಶಿಸ್ತು ಮತ್ತು ಸಾಮಾಜಿಕ ಜವಾಬ್ದಾರಿಯನ್ನು ಬೆಳೆಸುವ ಉದ್ದೇಶದಿಂದ ಈ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು. ಕಾರ್ಯಕ್ರಮವನ್ನು ಜ್ಯೋತಿ ಬೆಳಗಿಸುವ ಮೂಲಕ ಉದ್ಘಾಟಿಸಿದ ಮುಖ್ಯ ಅತಿಥಿ, ಎಂಸಿಸಿ ಬ್ಯಾಂಕಿನ ಅಧ್ಯಕ್ಷರಾದ ಶ್ರೀ ಅನಿಲ್ ಲೋಬೊ ಅವರು ಮಾತನಾಡಿ, “ವಿದ್ಯಾರ್ಥಿಗಳು ಕೇವಲ ಓದಿಗೆ ಸೀಮಿತವಾಗಬಾರದು. ಕಲಿಕೆಯ ಜೊತೆಗೆ ಒಳ್ಳೆಯ ನಾಯಕತ್ವದ ಗುಣಗಳನ್ನು […]



