“ವಕ್ಫ್ ಪ್ರತಿಭಟನೆ ವೇಳೆ ಪ್ರತಿಭಟನಕಾರರು ಪೊಲೀಸ್ ಜೀಪು ಬಳಸಿಲ್ಲ”
ಮಂಗಳೂರು: ವಕ್ಫ್ ತಿದ್ದುಪಡಿ ಕಾಯ್ದೆ ವಿರುದ್ಧ ಮಂಗಳೂರಿನ ಅಡ್ಯಾರ್ನಲ್ಲಿ ನಿನ್ನೆ ನಡೆದ ಪ್ರತಿಭಟನೆ ವೇಳೆ ಪ್ರತಿಭಟನಾಕಾರರು ಪೊಲೀಸ್ ಅಧಿಕಾರಿಯ ಕಾರನ್ನು ಬಳಸಿದ ಬಗ್ಗೆ ವಿಡಿಯೋ ಸಮೇತ ದೃಶ್ಯ ಮಾಧ್ಯಮ ಹಾಗೂ ಸಾಮಾಜಿಕ ಜಾಲತಾಣಗಳಲ್ಲಿ ಆರೋಪ ಕೇಳಿಬಂದಿತ್ತು. ಇದಕ್ಕೆ ಮಂಗಳೂರು ನಗರ ಪೊಲೀಸ್ ಆಯುಕ್ತ ಅನುಪಮ್ ಅಗ್ರವಾಲ್ ಸ್ಪಷ್ಟನೆ ನೀಡಿದ್ದಾರೆ. ಈ ಬಗ್ಗೆ ಪತ್ರಿಕಾ ಹೇಳಿಕೆ ನೀಡಿರುವ ಅವರು, ಪ್ರತಿಭಟನೆಯ ಸಂದರ್ಭ ಬಂದೋಬಸ್ತಿನಲ್ಲಿದ್ದ ಎಸಿಪಿ (ಸಂಚಾರ ಉಪ ವಿಭಾಗ)ಯವರು ಕಾರ್ರಕ್ರಮ ಮುಗಿದ ಬಳಿಕ ಮಂಗಳೂರು ಕಡೆಗೆ ತೆರಳುವ ಸಂಚಾರ […]





