DAKSHINA KANNADA
ಶಾಲಾ ಕಾಲೇಜುಗಳಲ್ಲಿ ಮಾದಕ ವ್ಯಸನದ ಜಾಗೃತಿ ಮೂಡಿಸಲು ಜಿಲ್ಲಾಧಿಕಾರಿ ಸೂಚನೆ
ಮಂಗಳೂರು ಜೂ.26 ಶಾಲಾ-ಕಾಲೇಜುಗಳ ಮಕ್ಕಳು ಮಾದಕ ದ್ರವ್ಯಗಳಿಗೆ ಬಲಿಯಾಗುವ ಸಾಧ್ಯತೆ ಹೆಚ್ಚಾಗಿರುವುದರಿಂದ ಮಕ್ಕಳಿಗೆ ಮುಂದೆ ಸಂಭವಿಸುವ ಅನಾಹುತಗಳ ಅರಿವು ಮೂಡಿಸಲು ಅಧಿಕಾರಿಗಳು ಹೆಚ್ಚಿನ ಕ್ರಮವಹಿಸುವಂತೆ ಜಿಲ್ಲಾಧಿಕಾರಿ ದರ್ಶನ್ ಹೆಚ್.ವಿ. ಸೂಚಿಸಿದರು. ಅವರು ಗುರುವಾರ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಜಿಲ್ಲಾ ಮಟ್ಟದ ನಾರ್ಕೋ ಕೋ ಆರ್ಡಿನೇಷನ್ ಸೆಂಟರ್‍ನ ಜಿಲ್ಲಾಮಟ್ಟದ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಶಾಲಾ ಕಾಲೇಜುಗಳಲ್ಲಿ ಮಾದಕದ್ರವ್ಯಗಳಆಕರ್ಷಣೆಗೊಳಗಾಗುವ ಸಾಧ್ಯತೆ ಹೆಚ್ಚಾಗಿರುವುದರಿಂದ ಇದರ ಬಗ್ಗೆ ಮಕ್ಕಳಿಗೆ ಅರಿವು ಮೂಡಿಸಬೇಕು. ಅರಿವು ಕಾರ್ಯಕ್ರಮಗಳಲ್ಲಿ ಭಾಗವಹಿಸದೇ ಇರುವ ಮಕ್ಕಳ ಮಾಹಿತಿಯನ್ನು […]