HOME
LATEST NEWS
STATE
ದತ್ತ ಜಯಂತಿ ಬ್ಯಾನರ್ ತೆರವು ವಿಚಾರ: ಕಾಂಗ್ರೆಸ್ ಕಾರ್ಯಕರ್ತನ ಬರ್ಬರ ಹತ್ಯೆ- ಬಜರಂಗದಳದ ಐವರ ಬಂಧನ
ಚಿಕ್ಕಮಗಳೂರು: ದತ್ತ ಜಯಂತಿ ಬ್ಯಾನರ್ ತೆರವು ವಿಚಾರವಾಗಿ ಉಂಟಾದ ಗಲಾಟೆ ಕೊಲೆಯಲ್ಲಿ ಅಂತ್ಯವಾಗಿದೆ. ಜಿಲ್ಲೆಯ ಕಡೂರು ತಾಲೂಕಿನ ಸಖರಾಯಪಟ್ಟಣದಲ್ಲಿ ನಡೆದ ಗಲಾಟೆಯಲ್ಲಿ ಕಾಂಗ್ರೆಸ್ ಕಾರ್ಯಕರ್ತ ಗಣೇಶ್ ಗೌಡ (40) ಅವರನ್ನು ಸಂಜಯ್ ಮತ್ತು ಮಿಥುನ್ ಎಂಬವರು ಮಚ್ಚಿನಿಂದ ಹಲ್ಲೆ ಮಾಡಿ ಬರ್ಬರವಾಗಿ ಹತ್ಯೆ ಮಾಡಿದ್ದಾರೆ. ಆರೋಪಿಗಳು ಬಜರಂಗದಳ ಕಾರ್ಯಕರ್ತರು ಎನ್ನಲಾಗಿದೆ. ಗಲಾಟೆಯಲ್ಲಿ ಆರೋಪಿ ಸಂಜಯ್ ತಲೆಗೂ ಗಂಭೀರ ಗಾಯವಾಗಿದ್ದು, ಆತನನ್ನು ಚಿಕ್ಕಮಗಳೂರು ಮಲ್ಲೇಗೌಡ ಜಿಲ್ಲಾ ಆಸ್ಪತ್ರೆಗೆ ದಾಖಲಿಸಲಾಗಿದೆ. ಕೊಲೆಯಾದ ಗಣೇಶ್ ಸಖರಾಯಪಟ್ಟಣ ಗ್ರಾಮ ಪಂಚಾಯಿತಿ ಸದಸ್ಯರಾಗಿದ್ದರು. ಬಂಧಿತರನ್ನು […]


