DAKSHINA KANNADA
ಸೋಮೇಶ್ವರದ ಕಡಲಕಿನಾರೆಯಲ್ಲಿ ಸಂಸದ ಕ್ಯಾ. ಬ್ರಿಜೇಶ್ ಚೌಟ ಅವರ ಪರಿಕಲ್ಪನೆಯ “ಯೋಗ ವಿತ್ ಯೋಧ” ಅಂತಾರಾಷ್ಟ್ರೀಯ ಯೋಗ ದಿನಾಚರಣೆ
ಮಂಗಳೂರು: ದಕ್ಷಿಣ ಕನ್ನಡದ ಪ್ರಮುಖ ಪ್ರವಾಸಿ ತಾಣಗಳ ಪೈಕಿ ಒಂದಾಗಿರುವ ಸೋಮೇಶ್ವರದ ಕಡಲಕಿನಾರೆಯಲ್ಲಿ ಸಂಸದ ಕ್ಯಾ. ಬ್ರಿಜೇಶ್ ಚೌಟ ಅವರ ಪರಿಕಲ್ಪನೆಯ “ಯೋಗ ವಿತ್ ಯೋಧ” 2ನೇ ವರ್ಷದ ಅಂತಾರಾಷ್ಟ್ರೀಯ ಯೋಗ ದಿನಾಚರಣೆಯು ಅತ್ಯಂತ ಯಶಸ್ವಿ ಹಾಗೂ ಅರ್ಥಪೂರ್ಣವಾಗಿ ನಡೆಯಿತು. ಆ ಮೂಲಕ ಸಮುದ್ರದ ತೆರೆಯಬ್ಬರದ ನಡುವೆ ಪ್ರಕೃತಿ ಹಾಗೂ ದೈವಿಕತೆಯ ಮಡಿಲಲ್ಲಿ ಮನಸ್ಸನ್ನು ಶಾಂತಗೊಳಿಸಿ ದೇಹವನ್ನು ಹತೋಟಿಯಲ್ಲಿಡುವ ಯೋಗಾಭ್ಯಾಸದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಜನರು ಭಾಗವಹಿಸಿದ್ದರು. ಸಸಿಹಿತ್ಲು ಬೀಚ್ ನಲ್ಲಿ ಕಳೆದ ವರ್ಷ ಕ್ಯಾ. ಚೌಟ ನೇತೃತ್ವದಲ್ಲಿ […]