• Home  
  • ಪೌರಾಯುಕ್ತೆಗೆ ಧಮ್ಕಿ ಹಾಕಿದ ಕೈ ಮುಖಂಡನಿಗೆ ಆಶ್ರಯ ನೀಡಿದ ಮೈಕಲ್ ರೇಗೊಗೆ ಜಾಮೀನು
- DAKSHINA KANNADA - HOME - LATEST NEWS - STATE

ಪೌರಾಯುಕ್ತೆಗೆ ಧಮ್ಕಿ ಹಾಕಿದ ಕೈ ಮುಖಂಡನಿಗೆ ಆಶ್ರಯ ನೀಡಿದ ಮೈಕಲ್ ರೇಗೊಗೆ ಜಾಮೀನು

ಬೆಂಗಳೂರು:  ಶಿಡ್ಲಘಟ್ಟದ ನಗರಸಭೆ ಪೌರಾಯುಕ್ತೆ ಅಮೃತಗೌಡ ಅವರಿಗೆ ಧಮ್ಕಿ ಹಾಕಿದ ಪ್ರಕರಣಕ್ಕೆಸಂಬಂಧಿಸಿದಂತೆ ಆರೋಪಿ ಕಾಂಗ್ರೆಸ್‌ ಮುಖಂಡ ರಾಜೀವ್ ಗೌಡನನ್ನು ಬಂಧಿಸಲಾಗಿದೆ. ಕಳೆದ 14 ದಿನಗಳಿಂದ ಮಂಗಳೂರಿನಲ್ಲಿ ತಲೆಮರೆಸಿಕೊಂಡಿದ್ದ ರಾಜೀವ್ ಗೌಡ ನಿನ್ನೆ(ಜನವರಿ 26) ಕೇರಳದ ಗಡಿಭಾಗದಲ್ಲಿ ಪೊಲೀಸರ ಕೈಗೆ ಸಿಕ್ಕಿಬಿದ್ದಿದ್ದಾನೆ. ಸದ್ಯ ಪೊಲೀಸರು ಆರೋಪಿ ರಾಜೀವ್ ಗೌಡನನ್ನು ಶಿಡ್ಲಘಟ್ಟಕ್ಕೆ ಕರೆತಂದಿದ್ದು, ವೈದ್ಯಕೀಯ ತಪಾಸಣೆ ಮಾಡಿಸಿ ಕೋರ್ಟ್​​​ ಮುಂದೆ ಹಾಜರುಪಡಿಸಿದರು. ಇದೀಗ ಕೋರ್ಟ್ ರಾಜಿವ್ ಗೌಡನನ್ನು ಜೈಲಿಗೆ ಕಳುಹಿಸಿದೆ. ಮಂಗಳೂರಿನಲ್ಲಿ ಪತ್ತೆಯಾದ ಕಾರು ಹಾಗೂ ಆರೋಪಿ ಕಾಂಗ್ರೆಸ್‌ ಮುಖಂಡ […]

Share News

ಬೆಂಗಳೂರು:  ಶಿಡ್ಲಘಟ್ಟದ ನಗರಸಭೆ ಪೌರಾಯುಕ್ತೆ ಅಮೃತಗೌಡ ಅವರಿಗೆ ಧಮ್ಕಿ ಹಾಕಿದ ಪ್ರಕರಣಕ್ಕೆಸಂಬಂಧಿಸಿದಂತೆ ಆರೋಪಿ ಕಾಂಗ್ರೆಸ್‌ ಮುಖಂಡ ರಾಜೀವ್ ಗೌಡನನ್ನು ಬಂಧಿಸಲಾಗಿದೆ. ಕಳೆದ 14 ದಿನಗಳಿಂದ ಮಂಗಳೂರಿನಲ್ಲಿ ತಲೆಮರೆಸಿಕೊಂಡಿದ್ದ ರಾಜೀವ್ ಗೌಡ ನಿನ್ನೆ(ಜನವರಿ 26) ಕೇರಳದ ಗಡಿಭಾಗದಲ್ಲಿ ಪೊಲೀಸರ ಕೈಗೆ ಸಿಕ್ಕಿಬಿದ್ದಿದ್ದಾನೆ. ಸದ್ಯ ಪೊಲೀಸರು ಆರೋಪಿ ರಾಜೀವ್ ಗೌಡನನ್ನು ಶಿಡ್ಲಘಟ್ಟಕ್ಕೆ ಕರೆತಂದಿದ್ದು, ವೈದ್ಯಕೀಯ ತಪಾಸಣೆ ಮಾಡಿಸಿ ಕೋರ್ಟ್​​​ ಮುಂದೆ ಹಾಜರುಪಡಿಸಿದರು. ಇದೀಗ ಕೋರ್ಟ್ ರಾಜಿವ್ ಗೌಡನನ್ನು ಜೈಲಿಗೆ ಕಳುಹಿಸಿದೆ.

ಮಂಗಳೂರಿನಲ್ಲಿ ಪತ್ತೆಯಾದ ಕಾರು ಹಾಗೂ ಆರೋಪಿ ಕಾಂಗ್ರೆಸ್‌ ಮುಖಂಡ ರಾಜೀವ್ ಗೌಡ

ಮಂಗಳೂರಿನ ಉದ್ಯಮಿಯಿಂದ ಆಶ್ರಯ

ಆರೋಪಿ ಕಾಂಗ್ರೆಸ್‌ ಮುಖಂಡ ರಾಜೀವ್ ಗೌಡ ತನ್ನ ವಿರುದ್ಧದ FIR ರದ್ದುಕೋರಿ ಸಲ್ಲಿಸಿದ್ದ, ಈ  ಅರ್ಜಿಯನ್ನು ಹೈಕೋರ್ಟ್​ ವಜಾಗೊಳಿಸಿತ್ತು. ಹೀಗಾಗಿ ಬಂಧನದ ಭೀತಿಯಲ್ಲಿದ್ದ ರಾಜೀವ್ ಗೌಡ ಚಿಕ್ಕಬಳ್ಳಾಪುರದಿಂದ ಬೆಂಗಳೂರಿಗೆ ಅಲ್ಲಿಂದ ಮಂಗಳೂರಿಗೆ ಬಂದಿದ್ದ. ಮಂಗಳೂರಿನಲ್ಲಿ ತನ್ನ ಸ್ನೇಹಿತ ಹಾಗೂ ಉದ್ಯಮಿ ಮೈಕಲ್ ರೇಗೊ ಬಳಿ 3 ದಿನ ಆಶ್ರಯ ಪಡೆದಿದ್ದ.

ಉದ್ಯಮಿ ಮೈಕಲ್ ರೇಗೊ

ಇದೇ ವೇಳೆ ರಾಜೀವ್ ಗೌಡ ಪೊಲೀಸರ ಕಣ್ತಪ್ಪಿಸಲು ಮಂಗಳೂರು ರೈಲ್ವೆ ಸ್ಟೇಷನ್​​​ನಲ್ಲಿ ಕಾರು ನಿಲ್ಲಿಸಿ ಕಳ್ಳಾಟ ಆಡಿದ್ದ. ಇದೇ ವೇಳೆ ಉದ್ಯಮಿ ಮೈಕಲ್ ರೇಗೊ ಕಾರಿನಲ್ಲೇ ತಲಪಾಡಿ ಮಾರ್ಗವಾಗಿ ಕಾಸರಗೋಡಿನತ್ತ ಹೋಗುತ್ತಿದ್ದಾಗ ರಾಜೀವ್ ಗೌಡನನ್ನು ಹಾಗೂ ಆಶ್ರಯ ನೀಡಿದ್ದ ಮೈಕಲ್ ರೇಗೊ ಪೊಲೀಸರು ಬಂಧಿಸಿದ್ದಾರೆ.

ಬಂಧಿತರನ್ನು ಶಿಡ್ಗಘಟ್​ಟಕ್ಕೆ ಕರೆದೊಯ್ದಿದ್ದರು ಬಳಿಕ ಆರೋಪಿಗಳಿಗೆ ವೈದ್ಯಕೀಯ ತಪಾಸಣೆ ಮಾಡಿಸಿ ಕೋರ್ಟ್​​ಗೆ ಹಾಜರುಡಿಸಲಾಯ್ತು. ಈ ವೇಳೆ ರಾಜೀವ್ ಗೌಡ ಪರ ವಕೀಲರು ಸಹ ಮಧ್ಯಂತರ ಜಾಮೀನಿಗೆ ಮನವಿ ಮಾಡಿದರು. ಆದ್ರೆ, ಕೋರ್ಟ್​ ಜಾಮೀನು ಅರ್ಜಿಯನ್ನು ವಜಾಗೊಳಿಸಿ ರಾಜೀವ್​​ ಗೌಡನಿಗೆ ಫೆಬ್ರವರಿ 9ರ ವರೆಗೆ ನ್ಯಾಯಾಂಗ ಬಂಧನಕ್ಕೆ ನೀಡಿ ಆದೇಶಿಸಿದೆ. ಇನ್ನು ರಾಜೀವ್ ಗೌಡನ ಆಶ್ರಯದಾಯ ಮೈಕಲ್​​​ಗೆ ಕೋರ್ಟ್ ಜಾಮೀನು ನೀಡಿದೆ.

Share News