ಮಂಗಳೂರು: ಸೆ.18 ರಂದು ರಾಜ್ಯ ಸರಕಾರದ ಸಚಿವ ಸಂಪುಟ ಸಭೆಯು ಮಂಗಳೂರು ನಗರದ ಪಡೀಲ್‌ನಲ್ಲಿರುವ ಜಿಲ್ಲಾಧಿಕಾರಿರವರ ಕಛೇರಿಯಲ್ಲಿ ನಡೆಯಲಿದೆ. ಈ ಹಿನ್ನೆಲೆ ಸೆ. 17 ರಂದು ಸಂಜೆ ಮುಖ್ಯಮಂತ್ರಿ, ಉಪ ಮುಖ್ಯಮಂತ್ರಿ ಹಾಗೂ ಸಂಪುಟ ದರ್ಜೆಯ ಸಚಿವರು ನಗರಕ್ಕೆ ಬರುವವರಿದ್ದು, ಹಾಗೂ ಸೆ. 18 ರಂದು ಬೆಳಿಗ್ಗೆ ಮಂಗಳೂರು ನಗರದ ಮುಖ್ಯರಸ್ತೆಯ ಮುಖಾಂತರ ಜಿಲ್ಲಾಧಿಕಾರಿಗಳ (ಪ್ರಜಾಸೌಧ) ಕಛೇರಿಯಲ್ಲಿ ನಡೆಯುವ ಸಭೆಯಲ್ಲಿ ಪಾಲ್ಗೊಂಡು ಮಧ್ಯಾಹ್ನ ಮೇರಿಹಿಲ್‌ನಲ್ಲಿರುವ ಹೆಲಿಪ್ಯಾಡ್ ಮುಖಾಂತರ ಉಡುಪಿಗೆ ತೆರಳಿ ನಂತರ ಮಂಗಳೂರು ನಗರಕ್ಕೆ ವಾಪಸ್ಸಾಗಿ ತಂಗಲಿದ್ದು, ನಂತರ ಮರು ದಿನ ಬೆಳಿಗ್ಗೆ ನಿರ್ಗಮಿಸಲಿರುತ್ತಾರೆ. ಇದರಿಂದ ನಗರದಲ್ಲಿ ವಾಹನ ದಟ್ಟಣೆಯಾಗಿ ವಾಹನ ಸಂಚಾರದಲ್ಲಿ ವ್ಯತ್ಯಯ ಉಂಟಾಗುವ ಸಾಧ್ಯತೆ ಇರುವುದರಿಂದ ಗಣ್ಯರ ಭದ್ರತೆ ದೃಷ್ಠಿಯಿಂದ ಹಾಗೂ ನಗರದಲ್ಲಿ ಸಂಚಾರ ಸುವ್ಯವಸ್ಥೆ ಹಿತದೃಷ್ಠ್ಠಿಯಿಂದ ಸಾರ್ವಜನಿಕರು ಸುರಕ್ಷಿತವಾಗಿ ಪರ್ಯಾಯ ಮಾರ್ಗಗಳನ್ನು ಉಪಯೋಗಿಸಿಕೊಂಡು ಪೊಲೀಸ್ ಇಲಾಖೆಯೊಂದಿಗೆ ಸಹಕರಿಸಲು ಕೋರಿದೆ.

ಗಣ್ಯರ ಸಂಚಾರ ಇರುವ ರಸ್ತೆಗಳು
👉🏻 ದಿನಾಂಕ 17-09-2026 ರ ಸಂಜೆ ಮತ್ತು ದಿನಾಂಕ 19-09-2026 ರ ಬೆಳಿಗ್ಗೆ:
ಬಜಪೆ ವಿಮಾನ ನಿಲ್ದಾಣದಿಂದ ಕಾವೂರು – ಬೋಂದೆಲ್ – ಮೇರಿಹಿಲ್ – ಕೆ.ಪಿ.ಟಿ. -– ಕದ್ರಿ ಕಂಬಳ – ಬಂಟ್ಸ್ಹಾಸ್ಟೆಲ್ – ಡಾ| ಬಿ.ಆರ್.ಅಂಬೇಡ್ಕರ್ ಜಂಕ್ಷನ್ – ಹಂಪನ್ ಕಟ್ಟೆ – ಕ್ಲಾಕ್ ಟವರ್ – ಹ್ಯಾಮಿಲ್ಟನ್ ಜಂಕ್ಷನ್.
👉🏻 ದಿನಾಂಕ 18-09-2026 ರಂದು ಬೆಳಿಗ್ಗೆ:
ಹ್ಯಾಮಿಲ್ಟನ್ ಜಂಕ್ಷನ್ -– ಕ್ಲಾಕ್ ಟವರ್- ಹಂಪನಕಟ್ಟ – ಡಾ| ಬಿ.ಆರ್.ಅಂಬೇಡ್ಕರ್ ಜಂಕ್ಷನ್ – ಕೆ.ಪಿ.ಟಿ.ಜಂಕ್ಷನ್ – ನಂತೂರು ವೃತ್ತ – ಪಂಪುವೆಲ್ – ನಾಗುರಿ – ಬಜಾಲ್ ಕ್ರಾಸ್ (ಪ್ರಜಾಸೌಧ)- ಪಡೀಲ್ ಜಂಕ್ಷನ್.
ವಿಶೇಷ ಸೂಚನೆ: ಮೇಲ್ಕಂಡ ಮಾರ್ಗಗಳಲ್ಲಿ ರಸ್ತೆಬದಿಯಲ್ಲಿ ಯಾವುದೇ ವಾಹನಗಳನ್ನು ನಿಲುಗಡೆ ಮಾಡದಂತೆ ಸಾರ್ವಜನಿಕರಲ್ಲಿ ಕೋರಲಾಗಿದೆ. ಆಂಬ್ಯುಲೆನ್ಸ್ ಹಾಗೂ ಇತರೆ ತುರ್ತು ಸೇವಾ ವಾಹನಗಳ ಸಂಚಾರಕ್ಕೆ ಯಾವುದೇ ಅಡಚಣೆ ಇರುವುದಿಲ್ಲ. ಸಾರ್ವಜನಿಕರು ಪೊಲೀಸ್ ಇಲಾಖೆಯೊಂದಿಗೆ ಸಹಕರಿಸಿ ಸುಗಮ ಸಂಚಾರಕ್ಕೆ ಅನುವು ಮಾಡಿಕೊಡುವುದು.
ಬದಲಿ ಮಾರ್ಗಗಳು:-
👉🏻 ಬದ್ರಿಯಾ ಜಂಕ್ಷನ್‌ನಿAದ ಹೋಟೆಲ್ ತಾಜ್ ವಿವಾಂತ್ ಮುಂಭಾಗದ ಮೂಲಕ ಹ್ಯಾಮಿಲ್ಟನ್ ಜಂಕ್ಷನ್ ಕಡೆಗೆ ಸಂಚರಿಸಬೇಕಾದ ಎಲ್ಲಾ ತರಹದ ವಾಹನಗಳು ಪರ್ಯಾಯವಾಗಿ ಬದ್ರಿಯಾ ಜಂಕ್ಷನ್ – ನಿಲೇಶ್ವರ ರಸ್ತೆ – ರೋಸಾರಿಯೋ ರಸ್ತೆ ಮುಖೇನಾ ಸಂಚರಿಸುವುದು.
👉🏻 ಅದೇ ರೀತಿ ಹ್ಯಾಮಿಲ್ಟನ್ ಜಂಕ್ಷನ್‌ನಿಂದ ಹೋಟೆಲ್ ತಾಜ್ ವಿವಾಂತ್ ಮುಂಭಾಗದ ಮೂಲಕ ಬದ್ರಿಯಾ ಜಂಕ್ಷನ್ ಕಡೆಗೆ ಸಂಚರಿಸಬೇಕಾದ ಎಲ್ಲಾ ತರಹದ ವಾಹನಗಳು ಪರ್ಯಾಯವಾಗಿ ಹ್ಯಾಮಿಲ್ಟನ್ ಜಂಕ್ಷನ್ – ನೆಲ್ಲಿಕಾಯಿ ರಸ್ತೆ ಮುಖೇನಾ ಸಂಚರಿಸುವುದು.
👉🏻 ಪಂಪುವೆಲ್ ಜಂಕ್ಷನ್‌ನಿಂದ ನಾಗುರಿ ಮೂಲಕ ಪಡಿಲ್ ಜಂಕ್ಷನ್ ಕಡೆಗೆ ಅಥವಾ ಪಡಿಲ್ ಜಂಕ್ಷನ್ ಕಡೆಯಿಂದ ನಾಗುರಿ ಮೂಲಕ ಪಂಪುವೆಲ್ ಕಡೆಗೆ ಸಂಚರಿಸಬೇಕಾದ ಎಲ್ಲಾ ತರಹದ ವಾಹನಗಳು ಪರ್ಯಾಯವಾಗಿ ನಂತೂರು ವೃತ್ತ – ಕೈಕಂಬ – ಮರೋಳಿ ಮೂಲಕ ಅಥವಾ ತೊಕ್ಕೊಟ್ಟು – ದೇರಳಕಟ್ಟೆ – ಮುಡಿಪು – ಬೊಳ್ಯಾರ್ – ಮೆಲ್ಕಾರ್ ಮೂಲಕ ಸಂಚರಿಸುವುದು.
👉🏻 ಬಜಾಲ್ ಕ್ರಾಸ್(ಪ್ರಜಾಸೌಧ) ನಿಂದ ಬಜಾಲ್ ಕಡೆಗೆ ಅಥವಾ ಕಂಕನಾಡಿ ಜಂಕ್ಷನ್ ರೈಲ್ವೆ ನಿಲ್ದಾಣ ಕಡೆಗೆ ಬರುವ ಮತ್ತು ಹೋಗುವ ಎಲ್ಲಾ ತರಹದ ವಾಹನಗಳು ಪಡಿಲ್ ಬಜಾಲ್ ಕ್ರಾಸ್‌ಗೆ ಪರ್ಯಾಯವಾಗಿ ರಾಷ್ಟ್ರೀಯ ಹೆದ್ದಾರಿ 66 ರಲ್ಲಿ ಮುಂದುವರಿದು ಜಪ್ಪಿನಮೊಗರು ದ್ವಾರ – ಬಜಾಲ್ ಮೂಲಕ ಸಂಚರಿಸುವುದು.
👉🏻 ತೊಕ್ಕೊಟ್ಟು ಕಡೆಯಿಂದ ಪಂಪುವೆಲ್ ಕಡೆಗೆ ಸಂಚರಿಸುವ ವಾಹನಗಳು ಮಹಾಕಾಳಿಪಡ್ಪು – ಮಂಗಳಾದೇವಿ ಮೂಲಕ ನಗರಕ್ಕೆ ಸಂಚರಿಸುವುದು. ಎಂದು ಪೊಲೀಸರು ತಿಳಿಸಿದ್ದಾರೆ.
