DAKSHINA KANNADALATEST NEWS

ನೆಲ್ಯಾಡಿ ಸಮೀಪ ಗ್ಯಾಸ್ ಟ್ಯಾಂಕರ್‌ಗೆ ಕಾರು ಡಿಕ್ಕಿ: ಪ್ರಥಮ ಪಿಯುಸಿ ವಿದ್ಯಾರ್ಥಿ ಸ್ಥಳದಲ್ಲೇ ಸಾವು

ನೆಲ್ಯಾಡಿ: ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಮತ್ತೊಂದು ದುರ್ಘಟನೆ ಸಂಭವಿಸಿದೆ.


ಹೆದ್ದಾರಿ ಬದಿಯಲ್ಲಿ ನಿಲ್ಲಿಸಲಾಗಿದ್ದ ಗ್ಯಾಸ್ ಟ್ಯಾಂಕರ್‌ಗೆ ಕಾರೊಂದು ಡಿಕ್ಕಿ ಹೊಡೆದ ಪರಿಣಾಮ, ಪ್ರಥಮ ಪಿಯುಸಿ ವಿದ್ಯಾರ್ಥಿಯೊಬ್ಬರು ಸ್ಥಳದಲ್ಲೇ ಸಾವನ್ನಪ್ಪಿರುವ ದಾರುಣ ಘಟನೆ ವರದಿಯಾಗಿದೆ.

ಮೃತರನ್ನು ನೆಲ್ಯಾಡಿಯಲ್ಲಿ ‘ಪ್ಲವರ್ಸ್ ಹೋಟೆಲ್’ ನಡೆಸುತ್ತಿರುವ ಜೋಜೋ ಟಿ. ಜೋರ್ಜ್ ಅವರ ಪುತ್ರ, 16 ವರ್ಷದ ಅಶ್ವಿನ್ ಜೋಜೋ ಜೋರ್ಜ್ ಎಂದು ಗುರುತಿಸಲಾಗಿದೆ. ಇವರು ಪುತ್ತೂರಿನ ಕಾಲೇಜೊಂದರಲ್ಲಿ ಪ್ರಥಮ ಪಿಯುಸಿ ಅಭ್ಯಾಸ ಮಾಡುತ್ತಿದ್ದರು.

ಗುರುವಾರ ಮುಂಜಾನೆ ನೆಲ್ಯಾಡಿ ಕರ್ಬಸಂಕದ ಸಮೀಪ ರಾಷ್ಟ್ರೀಯ ಹೆದ್ದಾರಿಯಲ್ಲಿ ನಿಲ್ಲಿಸಲಾಗಿದ್ದ ಗ್ಯಾಸ್‌ ಟ್ಯಾಂಕರ್‌ಗೆ ಕಾರು ಡಿಕ್ಕಿ ಹೊಡೆದಿದೆ ಎನ್ನಲಾಗಿದೆ. ಡಿಕ್ಕಿಯ ತೀವ್ರತೆಗೆ ಕಾರಿನಲ್ಲಿದ್ದ ಅಶ್ವಿನ್ ಗಂಭೀರವಾಗಿ ಗಾಯಗೊಂಡು ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ

Share News