ಕಾರವಾರ: ಮಂಗಳೂರು ಮೂಲದ ವಿಚಾರಣಾಧೀನ ರೌಡಿ ಶೀಟರ್‌ಗಳಿಬ್ಬರು ಕಾರವಾರ ಕಾರಾಗೃಹದಲ್ಲಿ ಕಾರಾಗೃಹ ಅಧಿಕಾರಿ, ಸಿಬ್ಬಂದಿ ಮೇಲೆ ಹಲ್ಲೆ ನಡೆಸಿದ ಘಟನೆ ಇಂದು ಬೆಳಗ್ಗೆ ನಡೆದಿದೆ.

ಮಂಗಳೂರು ಮೂಲದ ರೌಡಿ ಶೀಟರ್‌ಗಳಾದ ಮೊಹ್ಮದ್ ಅಬ್ದುಲ್ ಫಯಾನ್ ಹಾಗೂ ಕೌಶಿಕ ನಿಹಾಲ್ ಹಲ್ಲೆ ನಡೆಸಿದ ಆರೋಪಿಗಳು.
ಡಕಾಯತಿ ಸೇರಿದಂತೆ 12ಕ್ಕೂ ಹೆಚ್ಚು ಗಂಭೀರ ಪ್ರಕರಣಗಳಲ್ಲಿ ಆರೋಪಿಗಳಾಗಿರುವ ಇವರನ್ನು, ಮಂಗಳೂರು ಕಾರಾಗೃಹದಲ್ಲಿ ಕೈದಿಗಳ ಸಂಖ್ಯೆ ಹೆಚ್ಚಾದ ಕಾರಣ ಕಾರವಾರ ಕಾರಾಗೃಹಕ್ಕೆ ಸ್ಥಳಾಂತರಿಸಲಾಗಿತ್ತು. ಮಾದಕ ವಸ್ತು ಒದಗಿಸುವಂತೆ ಗಲಾಟೆ ಮಾಡಿದ ಕೈದಿಗಳು ಪರಸ್ಪರ ಹಲ್ಲೆ ನಡೆಸಿಕೊಂಡಿದ್ದಾರೆ. ನಂತರ ಜೈಲರ್ ಕಲ್ಲಪ್ಪ ಗಸ್ತಿ, ಇತರ ಮೂವರು ಸಿಬ್ಬಂದಿ ಮೇಲೆ ಹಲ್ಲೆಗೈದಿದ್ದಾರೆ’ ಎಂದು ಕಾರಾಗೃಹ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಕಾರಾಗೃಹದಲ್ಲಿ ಕದ್ದುಮುಚ್ಚಿ ಮಾದಕ ದ್ರವ್ಯಗಳನ್ನು ಕೈದಿಗಳು ಪಡೆದುಕೊಳ್ಳುತ್ತಿದ್ದರು. ಕೆಲ ದಿನಗಳಿಂದ ಇದಕ್ಕೆ ಕಡಿವಾಣ ಬಿದ್ದಿದೆ. ಇದೇ ಕಾರಣಕ್ಕೆ ಮಂಗಳೂರು ಕಾರಾಗೃಹದಿಂದ ಇಲ್ಲಿಗೆ ಸ್ಥಳಾಂತರಗೊಂಡಿದ್ದ ಕೈದಿಗಳಿಬ್ಬರು ಗಲಾಟೆ ಮಾಡಿದ್ದಾರೆ’ ಎಂದು ತಿಳಿದು ಬಂದಿದೆ.

