canaratvnews

ವಿಟ್ಲ ಸುತ್ತಮುತ್ತ ಹಾರಾಡಿದ 2 ಪ್ಯಾಸೆಂಜರ್ ವಿಮಾನ: ಸ್ಥಳೀಯರಲ್ಲಿ ಆತಂಕ

ವಿಟ್ಲ: ಬಂಟ್ವಾಳ ತಾಲೂಕಿನ ಕಲ್ಲಡ್ಕ, ವಿಟ್ಲ ಸೇರಿದಂತೆ ಹಲವೆಡೆ ಸಂಜೆಯ ವೇಳೆಗೆ ಎರಡು ವಿಮಾನಗಳು ಕೆಳಮಟ್ಟದಲ್ಲಿ ಹಾರಾಡುತ್ತಿದ್ದುದು ಸ್ಥಳೀಯರಿಗೆ ಕೌತುಕದ ಜೊತೆಗೆ ಆತಂಕ ಸೃಷ್ಟಿ ಮಾಡಿತ್ತು. ಸದ್ಯ ಈ ಬಗ್ಗೆ ವಿಮಾನ ನಿಲ್ದಾಣದ ಅಧಿಕಾರಿಗಳು ಸ್ಪಷ್ಟನೆ ನೀಡಿದ್ದಾರೆ.

ಬೆಂಗಳೂರಿನಿಂದ ಹೊರಟಿದ್ದ ಏರ್‌ ಇಂಡಿಯಾ ಎಕ್ಸ್‌ಪ್ರೆಸ್‌ ವಿಮಾನ ಮಂಗಳೂರಿನಾದ್ಯಂತ ಹವಾಮಾನ ವೈಪರಿತ್ಯದಿಂದ ಲ್ಯಾಂಡ್‌ ಆಗಿರಲಿಲ್ಲ. ಈ ಹಿನ್ನೆಲೆ ಬಂಟ್ವಾಳ, ಕಲ್ಲಡ್ಕ, ವಿಟ್ಲ ಆಸುಪಾಸಿನಲ್ಲಿ ಕಾಣಿಸಿಕೊಂಡಿತ್ತು. ಈ ಬಗ್ಗೆ ವಿಮಾನ ನಿಲ್ಧಾಣದ ಸಾರ್ವಜನಿಕ ಸಂಪರ್ಕಾಧಿಕಾರಿ ಸ್ಪಷ್ಟನೆ ನೀಡಿ ಎರಡೂ ವಿಮಾನಗಳು ಸುರಕ್ಷಿತವಾಗಿ ಲ್ಯಾಂಡ್‌ ಆಗಿದ್ದು ಎಂದು ಮಾಹಿತಿ ನೀಡಿದ್ದಾರೆ.

Share News
Exit mobile version