Site icon canaratvnews

ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲಾಧಿಕಾರಿ ಸೇರಿ ಹಲವರ ವರ್ಗಾವಣೆ

ಮಂಗಳೂರು : ದಕ್ಷಿಣ ಕನ್ನಡ ಜಿಲ್ಲೆಯ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಹಾಗೂ ಉಡುಪಿ ಡಿಸಿ ವಿದ್ಯಾಕುಮಾರಿ ಅವರನ್ನು ಸೇರಿ ಹಲವು  ಅವರನ್ನು ತಕ್ಷಣದಿಂದ ಜಾರಿಗೆ ಬರುವಂತೆ ವರ್ಗಾವಣೆ ಮಾಡಲಾಗಿದೆ.

ಬೆಂಗಳೂರು ವಾಣಿಜ್ಯ ತೆರಿಗೆಗಳ ಹೆಚ್ಚುವರಿ ಆಯುಕ್ತ ದರ್ಶನ್ ಎಚ್ ವಿ ಅವರನ್ನು ದಕ್ಷಿಣ ಕನ್ನಡ ಜಿಲ್ಲೆಯ ಜಿಲ್ಲಾಧಿಕಾರಿಯಾಗಿ ನೇಮಿಸಲಾಗಿದೆ. ಮುಲ್ಲೈ ಮುಗಿಲನ್ ಅವರನ್ನು ಇನ್ಸ್‌ಪೆಕ್ಟರ್ ಜನರಲ್ ಆಫ್ ರಿಜಿಸ್ಟ್ರೇಷನ್ ಆಂಡ್ ಸ್ಟಾಂಪ್ಸ್ ಆಯುಕ್ತರಾಗಿ ವರ್ಗಾವಣೆ ಮಾಡಲಾಗಿದೆ. ದಕ್ಷಿಣ ಕನ್ನಡ ಜಿಲ್ಲೆಯ ನೂತನ ಜಿಲ್ಲಾಧಿಕಾರಿಯಾಗಿರುವ ದರ್ಶನ್ ಎಚ್‌ವಿ ವಾಣಿಜ್ಯ ತೆರಿಗೆಗಳ ಹೆಚ್ಚುವರಿ ಆಯುಕ್ತರಾಗಿದ್ದರು. ಇ-ಆಡಳಿತ ನಿರ್ದೇಶಕರಾಗಿದ್ದ ಸ್ವರೂಪ್‌ ಟಿ.ಕೆ ಅವರನ್ನು ಉಡುಪಿ ಜಿಲ್ಲಾಧಿಕಾರಿಯಾಗಿ ನೇಮಿಸಲಾಗಿದೆ.

Share News
Exit mobile version