• Home  
  • UPI ಸೇವೆಗಳಲ್ಲಿ ವ್ಯತ್ಯಯ: ಫೋನ್‌ಪೇ, ಗೂಗಲ್ ಪೇ ಬಳಕೆದಾರರಿಂದ ಪರದಾಟ
- HOME - LATEST NEWS - NATIONAL

UPI ಸೇವೆಗಳಲ್ಲಿ ವ್ಯತ್ಯಯ: ಫೋನ್‌ಪೇ, ಗೂಗಲ್ ಪೇ ಬಳಕೆದಾರರಿಂದ ಪರದಾಟ

ನವದೆಹಲಿ: ದೇಶಾದ್ಯಂತ ಹಲವು ನಗರಗಳಲ್ಲಿಂದು ಯುಪಿಐ (UPI) ಸೇವೆಗಳಲ್ಲಿ ವ್ಯತ್ಯಯ ಉಂಟಾಗಿದೆ. ಗೂಗಲ್‌ಪೇ, ಫೋನ್‌ಪೇ, ಪೇಟಿಎಂ ಸೇರಿದಂತೆ ಹಲವಾರು ಯುಪಿಐ ಸಂಯೋಜಿತ ಅಪ್ಲಿಕೇಶನ್‌ಗಳಲ್ಲಿ ಏಕಕಾಲಕ್ಕೆ ಸಮಸ್ಯೆಯಾಗಿದೆ. ಇದರಿಂದ ಗ್ರಾಹಕರು ಬೇರೆಯವರಿಗೆ ಹಣ ಕಳುಹಿಸಲು ಸಾಧ್ಯವಾಗದೇ ಪರದಾಡಿದ್ದಾರೆ. ಇಂದು ಮಧ್ಯಾಹ್ನ 12 ಗಂಟೆ ಸುಮಾರಿಗೆ ಏಕಕಾಲಕ್ಕೆ ದೇಶಾದ್ಯಂತ ಯುಪಿಐ ಸೇವೆಗಳಲ್ಲಿ ಸಮಸ್ಯೆಯಾಗಿದೆ, ಡೌನ್‌ಡೆಕ್ಟರ್‌ ಕೂಡ ಇದನ್ನು ವರದಿ ಮಾಡಿದೆ. ಕ್ಯೂಆರ್‌ ಕೋಡ್‌ ಸ್ಕ್ಯಾನ್‌ ಮಾಡಿದ ಗ್ರಾಹಕರು 5 ನಿಮಿಷವಾದ್ರೂ ಪೂರ್ಣಗೊಳ್ಳದೇ ಇರುವುದು ಕಂಡುಬಂದಾಗ ಸಮ್ಯಸ್ಯೆಯಾಗಿರುವುದು ಗೊತ್ತಾಗಿದೆ. ಬಳಿಕ ಬಹಳಷ್ಟು ಮಂದಿ […]

Share News

ನವದೆಹಲಿ: ದೇಶಾದ್ಯಂತ ಹಲವು ನಗರಗಳಲ್ಲಿಂದು ಯುಪಿಐ (UPI) ಸೇವೆಗಳಲ್ಲಿ ವ್ಯತ್ಯಯ ಉಂಟಾಗಿದೆ.

ಗೂಗಲ್‌ಪೇ, ಫೋನ್‌ಪೇ, ಪೇಟಿಎಂ ಸೇರಿದಂತೆ ಹಲವಾರು ಯುಪಿಐ ಸಂಯೋಜಿತ ಅಪ್ಲಿಕೇಶನ್‌ಗಳಲ್ಲಿ ಏಕಕಾಲಕ್ಕೆ ಸಮಸ್ಯೆಯಾಗಿದೆ. ಇದರಿಂದ ಗ್ರಾಹಕರು ಬೇರೆಯವರಿಗೆ ಹಣ ಕಳುಹಿಸಲು ಸಾಧ್ಯವಾಗದೇ ಪರದಾಡಿದ್ದಾರೆ.

ಇಂದು ಮಧ್ಯಾಹ್ನ 12 ಗಂಟೆ ಸುಮಾರಿಗೆ ಏಕಕಾಲಕ್ಕೆ ದೇಶಾದ್ಯಂತ ಯುಪಿಐ ಸೇವೆಗಳಲ್ಲಿ ಸಮಸ್ಯೆಯಾಗಿದೆ, ಡೌನ್‌ಡೆಕ್ಟರ್‌ ಕೂಡ ಇದನ್ನು ವರದಿ ಮಾಡಿದೆ. ಕ್ಯೂಆರ್‌ ಕೋಡ್‌ ಸ್ಕ್ಯಾನ್‌ ಮಾಡಿದ ಗ್ರಾಹಕರು 5 ನಿಮಿಷವಾದ್ರೂ ಪೂರ್ಣಗೊಳ್ಳದೇ ಇರುವುದು ಕಂಡುಬಂದಾಗ ಸಮ್ಯಸ್ಯೆಯಾಗಿರುವುದು ಗೊತ್ತಾಗಿದೆ. ಬಳಿಕ ಬಹಳಷ್ಟು ಮಂದಿ ತಮ್ಮ ಸೋಷಿಯಲ್‌ ಮೀಡಿಯಾಗಳಲ್ಲಿ ಪೋಸ್ಟ್‌ ಹಾಕಿದ್ದಾರೆ. #upidown ಎನ್ನುವ ಹ್ಯಾಶ್‌ಟ್ಯಾಗ್‌ನೊಂದಿಗೆ ಎಕ್ಸ್‌ ಖಾತೆಯಲ್ಲಿ ಸ್ಕ್ರೀನ್‌ಶಾಟ್‌ ಅನ್ನು ಪೋಸ್ಟ್‌ ಮಾಡಿದ್ದಾರೆ. ಇದು ಸಮಸ್ಯೆಯಾದ ಕೆಲವೇ ನಿಮಿಷಗಳಲ್ಲಿ ಟ್ರೆಂಡಿಂಗ್‌ ಆಗಿದೆ.

ಶೀಘ್ರದಲ್ಲೇ ಸಮಸ್ಯೆಗೆ ಪರಿಹಾರ

ಈ ಬಗ್ಗೆ ಎಕ್ಸ್‌ನಲ್ಲಿ ಪೋಸ್ಟ್‌ ಹಂಚಿಕೊಂಡಿರುವ ನ್ಯಾಷನಲ್ ಪೇಮೆಂಟ್ ಕಾರ್ಪೋರೇಷನ್ ಆಫ್ ಇಂಡಿಯಾ, ಮಧ್ಯಂತರ ತಾಂತ್ರಿಕ ಸಮಸ್ಯೆಗಳಿಂದ ಯುಪಿಐ ವಹಿವಾಟಿನಲ್ಲಿ ಸಮಸ್ಯೆಯಾಗಿದೆ. ಈ ಸಮಸ್ಯೆ ಪರಿಹರಿಸುವ ನಿಟ್ಟಿನಲ್ಲಿ ನಾವು ಕೆಲಸ ಮಾಡುತ್ತಿದ್ದೇವೆ ಎಂದು ತಿಳಿಸಿದೆ.

Share News