ವಿಟ್ಲ: ಬಂಟ್ವಾಳ ತಾಲೂಕಿನ ವಿಟ್ಲ ಪೊಲೀಸ್ ಠಾಣಾ ವ್ಯಾಪ್ತಿಯ ಕೇಪು ಗ್ರಾಮದ ಅಡ್ಯನಡ್ಕ ಎಂಬಲ್ಲಿ ನಡೆಯುತ್ತಿದ್ದ ಮಟ್ಕಾ ದಂಧೆಗೆ ಪೊಲೀಸರು ದಾಳಿ ನಡೆಸಿ, ಓರ್ವನನ್ನು ವಶಕ್ಕೆ ಪಡೆದಿದ್ದಾರೆ.
ವಶಕ್ಕೆ ಪಡೆದ ವ್ಯಕ್ತಿಯನ್ನು ಕೇಪು ಗ್ರಾಮದ ಅಶೋಕ (45) ಎಂದು ಗುರುತಿಸಲಾಗಿದೆ.
ಘಟನೆ ವಿವರ
ಕೇಪು ಗ್ರಾಮದ ಅಡ್ಯನಡ್ಕ ಪೆಟ್ರೊಲ್ ಪಂಪ್ ಬಳಿ ಅಶೋಕ ಎಂಬಾತನು ಮಟ್ಕಾ ಆಟವನ್ನು ಆಡಿಸುತ್ತಿದ್ದಾನೆ ಎಂಬ ಖಚಿತ ಮಾಹಿತಿ ಬಂದ ಮೇರೆಗೆ ವಿಟ್ಲ ಪೊಲೀಸ್ ಉಪನಿರೀಕ್ಷಕ ಕೌಶಿಕ್ ಬಿ.ಸಿ ಸಿಬ್ಬಂದಿಯೊಂದಿಗೆ ಸ್ಥಳಕ್ಕೆ ದಾಳಿ ನಡೆಸಿದ್ದಾರೆ. ಈ ವೇಳೆ ಆರೋಪಿಯನ್ನು ವಶಕ್ಕೆ ಪಡೆದು ವಿಚಾರಿಸಿದಾಗ ಮಟ್ಕಾ ಆಟದ ಹಣವನ್ನು ಕುದ್ದುಪದವು ಗಿರೀಶ ಎಂಬವರಿಗೆ ನೀಡುತ್ತಿರುವುದಾಗಿ ತಿಳಿಸಿದ್ದಾನೆ. ಬಂಧಿತನಿಂದ ಚೀಟಿ, ಪೆನ್ನು ಮತ್ತು ಒಟ್ಟು ಹಣ 1390/- ರೂಪಾಯಿ ವಶಕ್ಕೆ ಪಡೆದು ಕೇಸು ದಾಖಲಿಸಲಾಗಿದೆ.