ಮಂಗಳೂರು, ಜೂನ್ 30: ಕೆಪಿಸಿಸಿ ಉಪಾಧ್ಯಕ್ಷ ಹಾಗೂ ವಿಧಾನ ಪರಿಷತ್ ಸದಸ್ಯರಾದ ಶ್ರೀ ಐವನ್ ಡಿ’ಸೋಜಾ ಅವರ ಮಂಗಳೂರಿನ ನಿವಾಸದಲ್ಲಿ ಇಂದು ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಗೆ ಅಧಿಕೃತ ಚಾಲನೆ ನೀಡಲಾಯಿತು.

ಮನೆ-ಮನೆಗೆ ತೆರಳಿ ನಡೆಸಲಾಗುತ್ತಿರುವ ಈ ಎಣಿಕೆ (Enumeration) ಹಾಗೂ ನಮೂನೆ ಭರ್ತಿ (Enumeration Form Filling) ಕಾರ್ಯಕ್ರಮದ ಅಂಗವಾಗಿ ಬೂತ್ ಮಟ್ಟದ ಅಧಿಕಾರಿಗಳು (BLO) ಶ್ರೀ ಐವನ್ ಡಿ’ಸೋಜಾ ಮತ್ತು ಅವರ ಕುಟುಂಬದ ಸದಸ್ಯರ ವಿವರಗಳನ್ನು ನಮೂನೆಗಳಲ್ಲಿ ಭರ್ತಿ ಮಾಡುವುದರ ಮೂಲಕ ಪ್ರಕ್ರಿಯೆಯನ್ನು ಆರಂಭಿಸಿದರು.
ಈ ಸಂದರ್ಭದಲ್ಲಿ ಬ್ಲಾಕ್ ಮಟ್ಟದ ಅಧಿಕಾರಿ (Block Level Officer), ಬೂತ್ ಮಟ್ಟದ ಅಧಿಕಾರಿ (BLO) ಹಾಗೂ ಬೂತ್ ಮಟ್ಟದ ಏಜೆಂಟ್ (BLA) ಉಪಸ್ಥಿತರಿದ್ದರು. ಮುಂಬರುವ ದಿನಗಳಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ ಕಾರ್ಯವನ್ನು ಯಶಸ್ವಿಯಾಗಿ ಪೂರ್ಣಗೊಳಿಸಲು ಸಾರ್ವಜನಿಕರು ಹಾಗೂ ಮತದಾರರು ಸೂಕ್ತ ಮಾಹಿತಿ ನೀಡಿ ಸಹಕರಿಸಬೇಕೆಂದು ಅಧಿಕಾರಿಗಳು ಈ ವೇಳೆ ಮನವಿ ಮಾಡಿದರು.