• Home  
  • ದಕ್ಷಿಣ ಕನ್ನಡ ಸೇರಿದಂತೆ ಕೆಲವಡೆ ಮುಂದಿನ ಒಂದು ವಾರ ಸಾಧಾರಣ ಮಳೆ ಮುನ್ಸೂಚನೆ
- DAKSHINA KANNADA - HOME - LATEST NEWS - STATE

ದಕ್ಷಿಣ ಕನ್ನಡ ಸೇರಿದಂತೆ ಕೆಲವಡೆ ಮುಂದಿನ ಒಂದು ವಾರ ಸಾಧಾರಣ ಮಳೆ ಮುನ್ಸೂಚನೆ

ಬೆಂಗಳೂರು: ರಾಜ್ಯದ ಕೆಲವಡೆ ಮುಂದಿನ ಒಂದು ವಾರ ಸಾಧಾರಣ ಮಳೆಯಾಗುವ ಸಾಧ್ಯತೆಯಿದ್ದು, ಹವಾಮಾನ ಇಲಾಖೆಯು ಶನಿವಾರ ಒಂಬತ್ತು ಜಿಲ್ಲೆಗಳಿಗೆ ‘ಯೆಲ್ಲೊ ಅಲರ್ಟ್’ ಘೋಷಿಸಿದೆ. ಇದೇ ಮಾ. 24ರಿಂದ ಕರಾವಳಿಯ ದಕ್ಷಿಣ ಕನ್ನಡ, ಉತ್ತರ ಕನ್ನಡ ಹಾಗೂ ಉಡುಪಿ ಜಿಲ್ಲೆಯ ಒಂದೆರಡು ಕಡೆ ಸಾಧಾರಣ ಮಳೆಯಾಗುವ ಸಂಭವವಿದೆ. ಅಲ್ಲಿಯವರೆಗೆ ವಾತಾವರಣದಲ್ಲಿ ಉಷ್ಣಾಂಶ ಹೆಚ್ಚಳವಾಗುವ ಸಾಧ್ಯತೆಯಿದೆ ಎಂದು ಇಲಾಖೆ ತಿಳಿಸಿದೆ. ಬೆಳಗಾವಿ, ಧಾರವಾಡ, ಗದಗ, ಹಾವೇರಿ, ಶಿವಮೊಗ್ಗ, ಚಿಕ್ಕಮಗಳೂರು, ಹಾಸನ, ಕೊಡಗು ಹಾಗೂ ಮೈಸೂರು ಜಿಲ್ಲೆಗೆ ‘ಯೆಲ್ಲೊ ಅಲರ್ಟ್’ ನೀಡಲಾಗಿದ್ದು, […]

Share News

ಬೆಂಗಳೂರು: ರಾಜ್ಯದ ಕೆಲವಡೆ ಮುಂದಿನ ಒಂದು ವಾರ ಸಾಧಾರಣ ಮಳೆಯಾಗುವ ಸಾಧ್ಯತೆಯಿದ್ದು, ಹವಾಮಾನ ಇಲಾಖೆಯು ಶನಿವಾರ ಒಂಬತ್ತು ಜಿಲ್ಲೆಗಳಿಗೆ ‘ಯೆಲ್ಲೊ ಅಲರ್ಟ್’ ಘೋಷಿಸಿದೆ.

ಇದೇ ಮಾ. 24ರಿಂದ ಕರಾವಳಿಯ ದಕ್ಷಿಣ ಕನ್ನಡ, ಉತ್ತರ ಕನ್ನಡ ಹಾಗೂ ಉಡುಪಿ ಜಿಲ್ಲೆಯ ಒಂದೆರಡು ಕಡೆ ಸಾಧಾರಣ ಮಳೆಯಾಗುವ ಸಂಭವವಿದೆ. ಅಲ್ಲಿಯವರೆಗೆ ವಾತಾವರಣದಲ್ಲಿ ಉಷ್ಣಾಂಶ ಹೆಚ್ಚಳವಾಗುವ ಸಾಧ್ಯತೆಯಿದೆ ಎಂದು ಇಲಾಖೆ ತಿಳಿಸಿದೆ.

ಬೆಳಗಾವಿ, ಧಾರವಾಡ, ಗದಗ, ಹಾವೇರಿ, ಶಿವಮೊಗ್ಗ, ಚಿಕ್ಕಮಗಳೂರು, ಹಾಸನ, ಕೊಡಗು ಹಾಗೂ ಮೈಸೂರು ಜಿಲ್ಲೆಗೆ ‘ಯೆಲ್ಲೊ ಅಲರ್ಟ್’ ನೀಡಲಾಗಿದ್ದು, ಈ ಜಿಲ್ಲೆಗಳಲ್ಲಿ ಗುಡುಗು ಹಾಗೂ ಭಾರಿ ಗಾಳಿ ಸಹಿತ ಮಳೆಯಾಗುವ ಸಂಭವವಿದೆ. ಈ ಜಿಲ್ಲೆಗಳ ಕೆಲವೆಡೆ ಇದೇ 27ರವರೆಗೂ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ.

 

Share News