• Home  
  • ರಾಜ್ಯಾದ್ಯಂತ ಎ.2ರವರೆಗೆ ಗುಡುಗು ಸಹಿತ ಭಾರೀ ಮಳೆಯ ಮುನ್ಸೂಚನೆ
- DAKSHINA KANNADA - HOME - LATEST NEWS

ರಾಜ್ಯಾದ್ಯಂತ ಎ.2ರವರೆಗೆ ಗುಡುಗು ಸಹಿತ ಭಾರೀ ಮಳೆಯ ಮುನ್ಸೂಚನೆ

ಬೆಂಗಳೂರು: ರಾಜ್ಯಾದ್ಯಂತ ಎ.2ರವರೆಗೆ ಒಣ ಹವೆ, ಬಿಸಿಲಿನ ವಾತಾವರಣ ಮುಂದುವರಿಯಲಿದ್ದು, ಗುಡುಗು ಸಹಿತ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಜಿಲ್ಲೆಗಳ ಒಂದೆರಡು ಸ್ಥಳಗಳಲ್ಲಿ ಬಿರುಗಾಳಿಯೊಂದಿಗೆ ಗುಡುಗು ಸಹಿತ ಮಳೆಯಾಗಲಿದೆ. ಉತ್ತರ ಒಳನಾಡಿನ ಬೆಳಗಾವಿ, ಧಾರವಾಡ, ಗದಗ, ಹಾವೇರಿ, ಕೊಪ್ಪಳ, ಬೀದರ್ ಜಿಲ್ಲೆಗಳ ಒಂದೆರಡು ಸ್ಥಳಗಳಲ್ಲಿ ಗುಡುಗು ಸಹಿತ ಗಾಳಿ ಮಳೆಯಾಗುವ ಸಾಧ್ಯತೆಯಿದೆ. ಬಾಗಲಕೋಟೆ, ಕಲಬುರಗಿ, ರಾಯಚೂರು, ವಿಜಯಪುರ, ಯಾದಗಿರಿ ಜಿಲ್ಲೆಗಳಲ್ಲಿ ಒಣ ಹವೆ ಮುಂದುವರಿಯಲಿದೆ ಎಂದು ತಿಳಿಸಿದೆ. […]

Share News

ಬೆಂಗಳೂರು: ರಾಜ್ಯಾದ್ಯಂತ ಎ.2ರವರೆಗೆ ಒಣ ಹವೆ, ಬಿಸಿಲಿನ ವಾತಾವರಣ ಮುಂದುವರಿಯಲಿದ್ದು, ಗುಡುಗು ಸಹಿತ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಜಿಲ್ಲೆಗಳ ಒಂದೆರಡು ಸ್ಥಳಗಳಲ್ಲಿ ಬಿರುಗಾಳಿಯೊಂದಿಗೆ ಗುಡುಗು ಸಹಿತ ಮಳೆಯಾಗಲಿದೆ.

ಉತ್ತರ ಒಳನಾಡಿನ ಬೆಳಗಾವಿ, ಧಾರವಾಡ, ಗದಗ, ಹಾವೇರಿ, ಕೊಪ್ಪಳ, ಬೀದರ್ ಜಿಲ್ಲೆಗಳ ಒಂದೆರಡು ಸ್ಥಳಗಳಲ್ಲಿ ಗುಡುಗು ಸಹಿತ ಗಾಳಿ ಮಳೆಯಾಗುವ ಸಾಧ್ಯತೆಯಿದೆ. ಬಾಗಲಕೋಟೆ, ಕಲಬುರಗಿ, ರಾಯಚೂರು, ವಿಜಯಪುರ, ಯಾದಗಿರಿ ಜಿಲ್ಲೆಗಳಲ್ಲಿ ಒಣ ಹವೆ ಮುಂದುವರಿಯಲಿದೆ ಎಂದು ತಿಳಿಸಿದೆ.

ಎ.2ರ ವರೆಗೆ ದಕ್ಷಿಣ ಒಳನಾಡಿನ ಶಿವಮೊಗ್ಗ, ಚಿಕ್ಕಮಗಳೂರು, ಹಾಸನ, ಕೊಡಗು, ಚಾಮರಾಜನಗರ, ಮೈಸೂರು, ಬೆಂಗಳೂರು ಗ್ರಾಮೀಣ, ಬೆಂಗಳೂರು ನಗರ, ಚಿತ್ರದುರ್ಗ, ದಾವಣಗೆರೆ ಜಿಲ್ಲೆಗಳ ಒಂದೆರಡು ಸ್ಥಳಗಳಲ್ಲಿ ಗುಡುಗು ಸಹಿತ ಭಾರೀ ಗಾಳಿ, ಮಳೆಯಾಗಲಿದೆ. ಬಳ್ಳಾರಿ, ಚಿಕ್ಕಬಳ್ಳಾಪುರ, ಕೋಲಾರ, ಮಂಡ್ಯ, ರಾಮನಗರ, ತುಮಕೂರು, ವಿಜಯನಗರ ಜಿಲ್ಲೆಗಳಲ್ಲಿ ಒಣಹವೆ ಇರಲಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.

Share News