ಮಂಗಳೂರು: ವೆನ್‌ಲಾಕ್ ಜಿಲ್ಲಾ ಆಸ್ಪತ್ರೆಗೆ ದಕ್ಷಿಣ ಕನ್ನಡ ಹಾಗೂ ಸುತ್ತಮುತ್ತಲಿನ ಜಿಲ್ಲೆಗಳಿಂದ ಬಡವರು ಮತ್ತು ಸಾಮಾನ್ಯ ಜನರು ಚಿಕಿತ್ಸೆಗಾಗಿ ಬರುತ್ತಿದ್ದಾರೆ. ಇಲ್ಲಿಗೆ ಬರುವ ರೋಗಿಗಳಲ್ಲಿ ಶೇಕಡಾ 90 ರಷ್ಟು ಜನರಿಗೆ ಕನ್ನಡ ಮಾತ್ರ ತಿಳಿಯುತ್ತದೆ. ಅವರಿಗೆ ಬೇರೆ ಭಾಷೆಗಳ ಅರಿವಿರುವುದಿಲ್ಲ.

ಈ ಹಿನ್ನೆಲೆಯಲ್ಲಿ ಆಸ್ಪತ್ರೆಯ ಆಡಳಿತ ಮಂಡಳಿಯು ಈ ಕೆಳಗಿನ ಪ್ರಮುಖ ನಿರ್ದೇಶನಗಳನ್ನು ನೀಡಿದೆ:

ಕನ್ನಡದಲ್ಲೇ ಸಂವಹನ: ಆಸ್ಪತ್ರೆಗೆ ಬರುವ ರೋಗಿಗ ಳೊಂದಿಗೆ ಮತ್ತು ಅವರ ಸಂಬಂಧಿಕರೊಂದಿಗೆ ಕಡ್ಡಾಯವಾಗಿ ಕನ್ನಡ ಭಾಷೆಯಲ್ಲೇ ಮಾತನಾಡ ಬೇಕು. ಚಿಕಿತ್ಸೆಯ ವಿವರಗಳನ್ನು ಸ್ಪಷ್ಟವಾಗಿ ತಿಳಿಸಬೇಕು. ಹೊರರಾಜ್ಯದ ವಿದ್ಯಾರ್ಥಿಗಳಿಗೆ ಕಡ್ಡಾಯ: ಹೊರರಾಜ್ಯಗಳಿಂದ ಬಂದಿರುವ ವೈದ್ಯಕೀಯ ವಿದ್ಯಾರ್ಥಿಗಳು ಕಡ್ಡಾಯವಾಗಿ 3 ತಿಂಗಳ ಒಳಗಾಗಿ ಕನ್ನಡ ಭಾಷೆಯನ್ನು ಕಲಿಯಬೇಕು. ತಾತ್ಕಾಲಿಕ ವ್ಯವಸ್ಥೆ: ಅಲ್ಲಿಯವರೆಗೆ ಹೊರರಾಜ್ಯದ ವಿದ್ಯಾರ್ಥಿಗಳು ರೋಗಿಗಳೊಂದಿಗೆ ಮಾತನಾಡಲು ಆಯಾ ವಿಭಾಗದಲ್ಲಿರುವ ಇತರ ಸ್ಥಳೀಯ ಸಿಬ್ಬಂದಿಗಳ ಸಹಾಯವನ್ನು ಪಡೆದುಕೊಳ್ಳಬೇಕು. ಸಾರ್ವಜನಿಕರಿಗೆ ಉತ್ತಮ ಚಿಕಿತ್ಸೆ ಹಾಗೂ ಸರಿಯಾದ ಮಾಹಿತಿ ನೀಡುವುದು ನಮ್ಮ ಮುಖ್ಯ ಉದ್ದೇಶವಾಗಿದೆ. ಎಲ್ಲಾ ವೈದ್ಯರು ಮತ್ತು ವಿದ್ಯಾರ್ಥಿಗಳು ಈ ನಿಯಮವನ್ನು ಕಡ್ಡಾಯವಾಗಿ ಪಾಲಿಸಬೇಕಾಗಿ ವಿನಂತಿ.

