LATEST NEWS

ಕೋಡಿಕಲ್ ಯಕ್ಷ ಸಮಿತಿಯಿಂದ ಕೃಷ್ಣಾಷ್ಟಮಿ ಪ್ರಯುಕ್ತ 1000 ಮಂದಿಗೆ ಅಕ್ಕಿ ವಿತರಣೆ

ಮಂಗಳೂರು: ಕೋಡಿಕಲ್ ಯಕ್ಷ ಸಮಿತಿ ಕೋಡಿಕಲ್ ವತಿಯಿಂದ ಶ್ರೀಕೃಷ್ಣ ಜನ್ಮಾಷ್ಟಮಿ ಪ್ರಯುಕ್ತ ಹಮ್ಮಿಕೊಳ್ಳಲಾದ 8ನೇ ವರ್ಷದ ಸಾರ್ವಜನಿಕ ಅಕ್ಕಿ ವಿತರಣಾ ಕಾರ್ಯಕ್ರಮವು ಕೋಡಿಕಲ್ ಶ್ರೀ ನಾಗಬ್ರಹ್ಮ ಹಾಗೂ ಅಯ್ಯಪ್ಪ ಸ್ವಾಮಿ ಸನ್ನಿಧಿ ಬಳಿ ಯಶಸ್ವಿಯಾಗಿ ನೆರವೇರಿತು.

ಕಾರ್ಯಕ್ರಮವನ್ನು ತರಂಜಿ ಗುತ್ತು ಭಾಸ್ಕರ್ ಶೆಟ್ಟಿ ಅವರು ದೀಪ ಬೆಳಗಿಸಿ ಉದ್ಘಾಟಿಸಿದರು.

ಬಳಿಕ ಸಭೆಯನ್ನುದ್ದೇಶಿಸಿ ಮಾತನಾಡಿದ ಯಕ್ಷ ಸಮಿತಿಯ ಅಧ್ಯಕ್ಷ ಚಂದ್ರಹಾಸ ಪೂಜಾರಿ ಅವರು, “ಶ್ರೀಕೃಷ್ಣ ಜನ್ಮಾಷ್ಟಮಿ ಪ್ರಯುಕ್ತ ಪ್ರತಿವರ್ಷದಂತೆ ಈ ಬಾರಿಯೂ ಊರಿನ ಅರ್ಹ ಕುಟುಂಬಗಳಿಗೆ ಅಕ್ಕಿ ವಿತರಣಾ ಕಾರ್ಯಕ್ರಮವನ್ನು ಯಶಸ್ವಿಯಾಗಿ ನಡೆಸಿಕೊಂಡು ಬರುತ್ತಿದ್ದೇವೆ. ಈ ಸಮಾಜಮುಖಿ ಕಾರ್ಯಕ್ರಮದ ಅಂಗವಾಗಿ ಯಕ್ಷಗಾನ ಬಯಲಾಟವನ್ನು ಕೂಡ ಅತ್ಯಂತ ಯಶಸ್ವಿಯಾಗಿ ಆಯೋಜಿಸಲಾಗಿದೆ. ಸಮಿತಿಯ ಈ ಎಲ್ಲಾ ಸಾಮಾಜಿಕ ಕಳಕಳಿಯ ಕಾರ್ಯಗಳಿಗೆ ಸಂಸ್ಥೆಯ ಎಲ್ಲಾ ಪದಾಧಿಕಾರಿಗಳು ಹಾಗೂ ಸದಸ್ಯರು ಸಂಪೂರ್ಣವಾಗಿ ಕೈಜೋಡಿಸಿದ್ದು, ಅವರೆಲ್ಲರಿಗೂ ಕೃತಜ್ಞತೆ ಸಲ್ಲಿಸುತ್ತೇನೆ” ಎಂದರು.

ಈ ಸಂದರ್ಭದಲ್ಲಿ ಸಮಿತಿಯ ಗೌರವಾಧ್ಯಕ್ಷ ರಿತೇಶ್, ಕಾರ್ಯದರ್ಶಿ ಮನೋಜ್ ಶೆಟ್ಟಿ ಸೇರಿದಂತೆ ಸಮಿತಿಯ ವಿವಿಧ ಪದಾಧಿಕಾರಿಗಳು ಮತ್ತು ಸದಸ್ಯರು ಉಪಸ್ಥಿತರಿದ್ದರು. ಕಾರ್ಯಕ್ರಮದಲ್ಲಿ ಊರಿನ ಸುಮಾರು 1000ಕ್ಕೂ ಹೆಚ್ಚು ಅರ್ಹ ಫಲಾನುಭವಿಗಳಿಗೆ ಅಕ್ಕಿ ವಿತರಣೆ ಮಾಡಲಾಯಿತು.

Share News