ಮಂಗಳೂರು: ಎಪ್ರಿಲ್ 28: ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ವತಿಯಿಂದ ಆರ್ಥಿಕವಾಗಿ ಹಿಂದುಳಿದ ಬಿಪಿಎಲ್ (BPL) ಕಾರ್ಡ್ ಹೊಂದಿರುವ ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿವೇತನ ನೀಡಲು ಅರ್ಜಿ ಆಹ್ವಾನಿಸಲಾಗಿದೆ.

ಮೇ 30 ಮಂಗಳೂರಿನ ಅಡ್ಯಾರ್ ಗಾರ್ಡನ್ ನಲ್ಲಿ ನಡೆಯಲಿರುವ **ಪಟ್ಲ ಸಂಭ್ರಮ 2026 ** ಸಮಾರಂಭದಲ್ಲಿ ಎಸ್ ಎಸ್ ಎಲ್ ಸಿ (SSLC) ಮತ್ತು ಪಿಯುಸಿ ( 2nd PUC) ವಿಭಾಗದಲ್ಲಿ ಶೇಕಡ 90ಕ್ಕಿಂತ ಮೇಲ್ಪಟ್ಟು ಅಂಕಗಳಿಸಿದ ವಿದ್ಯಾರ್ಥಿಗಳಿಗೆ ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟಿನ ವತಿಯಿಂದ ವಿದ್ಯಾರ್ಥಿ ವೇತನವನ್ನು ನೀಡಲಾಗುವುದು. ಈ ಯೋಜನೆಯ ಫಲಾನುಭವಿಗಳು ತಮ್ಮ ಭಾವಚಿತ್ರ, ಬಿಪಿಎಲ್ ಕಾರ್ಡ್ ಪ್ರತಿ ಹಾಗೂ ಅಂಕಪಟ್ಟಿಯೊಂದಿಗೆ ಅರ್ಜಿಯನ್ನು ಸಲ್ಲಿಸತಕ್ಕದ್ದು. ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ದಿನಾಂಕ 15 -05 -2026. ವಿದ್ಯಾರ್ಥಿ ವೇತನವನ್ನು ಸ್ವೀಕರಿಸುವ ವಿದ್ಯಾರ್ಥಿಗಳು ಸಮಾರಂಭದಂದು (30-05-2026) ಬೆಳಿಗ್ಗೆ ಗಂಟೆ 9 ಕ್ಕೆ ಸರಿಯಾಗಿ ಕಡ್ಡಾಯವಾಗಿ ಹಾಜರಿರ ಬೇಕು.
ವಿದ್ಯಾರ್ಥಿಗಳು ಸ್ವಯಂ ಬಾರದೇ ಇದ್ದಲ್ಲಿ ಆ ಅರ್ಜಿಯನ್ನು ಮಾನ್ಯ ಮಾಡಲಾಗುವುದಿಲ್ಲ.
ದಾಖಲೆಗಳೊಂದಿಗೆ ಅರ್ಜಿಗಳನ್ನು ಕಳುಹಿಸಬೇಕಾದ ವಿಳಾಸ:
ಶ್ವಾಪ್ ನಂ. 16. ಮತ್ರುಬ17
ಸಿಎ ಸುದೇಶ್ ಕುಮಾರ್ ರೈ
ಎರಡನೇ ಮಹಡಿ
ಎಂಪೈರ್ ಮಾಲ್
ಎಂ ಜಿ ರಸ್ತೆ, ಮಂಗಳೂರು 575003
ಸಂಪರ್ಕ ಸಂಖ್ಯೆ 9448623375