ಮಂಗಳೂರು: ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್( ರಿ.) ಮಂಗಳೂರು ಇದರ ಯಕ್ಷಧ್ರುವ ಯಕ್ಷಶಿಕ್ಷಣ ಯೋಜನೆಯಡಿ ಕರ್ತವ್ಯ ನಿರತ ಯಕ್ಷಗಾನ ಶಿಕ್ಷಕರ ಸಮಾಲೋಚನಾ ಸಭೆಯು ಬಲ್ಲಾಲ್ ಭಾಗ್ ಬಳಿ ಇರುವ ಪತ್ತುಮುಡಿ ಸಭಾಂಗಣದಲ್ಲಿ ನಡೆಯಿತು.

ಪ್ರಸಕ್ತ ಸಭೆಯಲ್ಲಿ ಮುಂದಿನ ಶೈಕ್ಷಣಿಕ ವರ್ಷದ ಯಕ್ಷಧ್ರುವ ಯಕ್ಷಶಿಕ್ಷಣ ಯೋಜನೆಯ ತರಗತಿ, ಯಕ್ಷಗಾನ ಶಿಕ್ಷಕರ ಕಾರ್ಯಗಾರ, ಶಾಲಾ ಸಮಿತಿಯ ಸಭೆ ಸಹಿತ ಕಾರ್ಯಕ್ರಮದ ರೂಪುರೇಷೆಯ ಬಗ್ಗೆ ಚರ್ಚಿಸಲಾಯಿತು.
ಈ ಸಂದರ್ಭದಲ್ಲಿ ಕೇಂದ್ರೀಯ ಸಮಿತಿಯ ಕಾರ್ಯದರ್ಶಿಗಳಾದ ಪುರುಷೋತ್ತಮ ಭಂಡಾರಿ, ಕೋಶಾಧಿಕಾರಿ CA ಸುದೇಶ್ ರೈ, ಸಂಘಟನಾ ಕಾರ್ಯದರ್ಶಿ ಪ್ರದೀಪ್ ಆಳ್ವ ಸಹಿತ ವಿವಿಧ ಪದಾಧಿಕಾರಿಗಳು, ಯಕ್ಷಗಾನ ಶಿಕ್ಷಕರು ಉಪಸ್ಥಿತರಿದ್ದರು. ಯಕ್ಷಧ್ರುವ ಯಕ್ಷಶಿಕ್ಷಣ ಯೋಜನೆಯ ಸಂಯೋಜಕ ದೀವಿತ್ ಎಸ್ ಕೆ ಪೆರಾಡಿ ಸ್ವಾಗತಿಸಿ ಕಾರ್ಯಕ್ರಮ ನಿರೂಪಿಸಿದರು.