DAKSHINA KANNADAHOMELATEST NEWSUDUPI

ಉಡುಪಿಯಲ್ಲಿ ಝಳಪಿಸಿದ ತಲವಾರು: NSUIನ ಉಪಾಧ್ಯಕ್ಷ ಗಂಭೀರ

ಉಡುಪಿ:  ಉಡುಪಿ ಜಿಲ್ಲಾ ಎನ್‌ಎಸ್‌ಯುಐ ಉಪಾಧ್ಯಕ್ಷ, ಬೈಲೂರು ಚಿಟ್ಪಾಡಿ ನಿವಾಸಿ ಶರತ್ ಕುಂದರ್(25) ಎಂಬವರ ಮೇಲೆ ತಂಡವೊಂದು ತಲವಾರು ದಾಳಿ ನಡೆಸಿ ಕೊಲೆಗೆ ಯತ್ನಿಸಿರುವ ಘಟನೆ ಜ.30ರಂದು ರಾತ್ರಿ ನಗರದ ಪಿಪಿಸಿ ಕ್ರಾಸ್ ಬಳಿ ನಡೆದಿದೆ. ಘಟನೆಯಲ್ಲಿ ಎನ್‌ಎಸ್‌ಯುಐ ಉಪಾಧ್ಯಕ್ಷ ಶರತ್ ಕುಂದರ್‌ ಗಂಭೀರ ಗಾಯಗೊಂಡಿದ್ದು, 6-7 ದುಷ್ಕರ್ಮಿಗಳ ತಂಡದಿಂದ ದಾಳಿ ನಡೆದಿದೆ.

ಟಾಟಾ ಸಫಾರಿ, ಮಹೀಂದ್ರ ಥಾರ್ ವಾಹನಗಳಲ್ಲಿ ಬಂದ ಆರೋಪಿಗಳು, ತಲ್ವಾರಿವಾರಿನಿಂದ ದಾಳಿ ನಡೆಸಿ ಕೊಲೆ ಯತ್ನ ನಡೆಸಿದ್ದಾರೆ. ಜೊತೆಗೆ ಜೀವ ಸಹಿತ ಬಿಡುವುದಿಲ್ಲ ಎಂದು ಬೆದರಿಕೆ ಹಾಕಿದ್ದಾರೆಂಬ ಆರೋಪ ಕೇಳಿಬಂದಿದ್ದು, ಗಾಯಗೊಂಡಿರುವ ಶರತ್ ಉಡುಪಿವ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಈ ಬಗ್ಗೆ ಉಡುಪಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಆರೋಪಿಗಳಿಗಾಗಿ ಖಾಕಿ ಹುಡುಕಾಟ ನಡೆಸುತ್ತಿದ್ದು, ತನಿಖೆ ಮುಂದುವರಿದಿದೆ.

Share News